logo
ಕನ್ನಡ ಸುದ್ದಿ  /  Karnataka  /  Karnataka Weather Today Friday May 5 Amid Thunderstorms Light Rain In Bengaluru Coast, Northern, Southern Inland Pcp

Karnataka Weather Today: ಇಂದಿನ ಹವಾಮಾನ ವರದಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ

Praveen Chandra B HT Kannada

May 05, 2023 05:52 AM IST

Karnataka Weather Today: ಇಂದಿನ ಹವಾಮಾನ ವರದಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ (HT PHOTO)

    • ರಾಜ್ಯದ ವಾತಾವರಣ (Karnataka Weather Today) ಬದಲಾಗಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ (Bengaluru Rains) ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ (Heatwave) ಮುಂದುವರೆದಿದೆ. ಇಂದಿನ ಹವಮಾನ ವರದಿ (IMD weather forecast karnataka) ಇಲ್ಲಿದೆ.
Karnataka Weather Today: ಇಂದಿನ ಹವಾಮಾನ ವರದಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ (HT PHOTO)
Karnataka Weather Today: ಇಂದಿನ ಹವಾಮಾನ ವರದಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ (HT PHOTO) (HT_PRINT)

ಬೆಂಗಳೂರು ಸೇರಿದಂತೆ (Bengaluru Rains) ವಿವಿಧೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಆದರೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಬಿಸಿಲು ಮುಂದುವರೆದಿದೆ. ಕರಾವಳಿ ಸೇರಿದಂತೆ ವಿವಿಧೆಡೆ ನೀರಿಗೆ ತತ್ವಾರವಾಗಿದೆ. ಹವಾಮಾನ ಇಲಾಖೆಯ ಇಂದಿನ ಮುನ್ಸೂಚನೆ ಪ್ರಕಾರ ಇಂದು ಬಿಸಿಲ ಬೇಗೆಯಲ್ಲಿರುವ ರಾಜ್ಯದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

Indian Railways:ಬೆಳಗಾವಿ-ಭದ್ರಾಚಲಂ, ಅರಸಿಕೆರೆ-ಹೈದ್ರಾಬಾದ್‌ ರೈಲು ರದ್ದು, ವಂದೇಭಾರತ್‌ ರೈಲು ಮಾರ್ಗ ಬದಲಾವಣೆ

Tumkur News: ತುಮಕೂರು ಹರಳೂರಿನ ಐತಿಹಾಸಿಕ ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ

Hassan Scandal: ಬಂಧನ ಭೀತಿ, ಜಾಮೀನಿಗಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಎಚ್‌ಡಿ ರೇವಣ್ಣ

ಕರಾವಳಿಯಲ್ಲಿ ಸುರಿಯಬಹುದೇ ಮಳೆ?

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹವಾಮಾನ ಹೇಗಿರಲಿದೆ?

ಇಂದಿನ ಹವಾಮಾನ ವರದಿ ಪ್ರಕಾರ, ಉತ್ತರ ಒಳನಾಡಿನ ಅಲ್ಲಲ್ಲಿ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿಗಳಲ್ಲಿ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚುರಿನಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ

ಇಂದು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಾವುದೇ ಎಚ್ಚರಿಕೆಯ ಅಲರ್ಟ್‌ ನೀಡಲಾಗಿಲ್ಲ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

ನಾಳೆಯಿಂದ ಭಾರೀ ಮಳೆ ಸಾಧ್ಯತೆ

ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ 40-55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರರಿಗೆ ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕರ್ನಾಟಕ, ಕೇರಳ, ರಾಜಸ್ಥಾನ, ಪಂಜಾಬ್‌, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಸ್ಸಾ, ಅಸ್ಸಾಂ, ಮೇಘಾಲಯ, ಕೊಂಕಣ, ಗೋವಾ, ಮಧ್ಯಪ್ರದೇಶ, ಮರಾಠವಾಡ, ಗುಜರಾತ್‌, ಆಂಧ್ರ ಕರಾವಳಿ, ತೆಲಂಗಾಣ, ನಾಗಲ್ಯಾಮಡ್‌, ಮಣಿಪುರ, ಪುದುಚೇರಿ, ಕಾರೈಕಲ್‌, ರಾಯಲಸೀಮಾ ಮುಂತಾದೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮಳೆ

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಅನಿರೀಕ್ಷಿತವಾಗಿ ಮಳೆ ಸುರಿಯುತ್ತಿದ್ದು, ಉದ್ಯಾನನಗರಿ ಕೂಲ್‌ಕೂಲ್‌ ಆಗಿದೆ. ಇದೇ ಸಮಯದಲ್ಲಿ ಟ್ರಾಫಿಕ್‌ ದಟ್ಟಣೆ, ರಸ್ತೆಯಲ್ಲಿ ನೀರು ನಿಂತು ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿರುವುದರ ಕುರಿತು ವರದಿಯಾಗಿದೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲೂ ಟ್ರಾಫಿಕ್‌ ಜಾಮ್‌ ಆಗಿರುವ ಕುರಿತು ವರದಿಯಾಗಿದೆ. ಮಳೆಯ ನಡುವೆ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚಾಗಿದೆ.

    ಹಂಚಿಕೊಳ್ಳಲು ಲೇಖನಗಳು