logo
ಕನ್ನಡ ಸುದ್ದಿ  /  Karnataka  /  Karnataka Weather Today Heavy Rain With Thunderstorm Expected In Southern Hinterland And Costal Karnataka Rst

Karnataka Rain: ಚಂಡಮಾರುತ ಪರಿಣಾಮ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ; ಇಂದಿನ ಹವಾಮಾನ ವರದಿ

Reshma HT Kannada

May 12, 2023 06:36 AM IST

ರಾಜ್ಯದ ಹಲವೆಡೆ ಮಳೆ ಸಾಧ್ಯತೆ

    • Weather Update: ಚಂಡಮಾರುತದ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಜೊತೆಗೆ ಗುಡುಗು, ಮಿಂಚು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಮಳೆ ಸಾಧ್ಯತೆ (PTI)

ಬೆಂಗಳೂರು: ನಿನ್ನೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದ್ದು, ಬಿರುಗಾಳಿ ಹಾಗೂ ಗುಡುಗು, ಸಿಡಿಲಿನ ಕಾರಣದಿಂದ ಕೆಲವೆಡೆ ಅನಾಹುತಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ತಡರಾತ್ರಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿತ್ತು. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದ್ದು, ವಿಶೇಷವಾಗಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Uttara Kannada News: ಪ್ರವಾಸೋದ್ಯಮಕ್ಕೆ ರಣ ಬಿಸಿಲಿನ ಹೊಡೆತ; ಉತ್ತರ ಕನ್ನಡ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಬೆಂಗಳೂರು ನೀರಿನ ಸಮಸ್ಯೆಗೆ ಝೆರೋದಾ ಸಂಸ್ಥಾಪಕ ನಿತಿನ್ ಕಾಮತ್ ಸಲಹೆ ಎಫೆಕ್ಟ್; ಒಂದೇ ದಿನ ಬಂತು 300 ಫೋನ್ ಕಾಲ್ಸ್

ಬಿಸಿಗೆ ತತ್ತರಿಸಿದ ಬೆಂಗಳೂರು ಜನರಿಗೆ ಸಿಹಿ ಸುದ್ದಿ; ಮೇ ತಿಂಗಳಲ್ಲಿ ನಗರಕ್ಕೆ ಮಳೆ ಬರುವ ಸಾಧ್ಯತೆ ಎಂದ ಹವಾಮಾನ ಇಲಾಖೆ

Bangalore Temperature: ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ತಾಪಮಾನ; ಬೆಂಗಳೂರಿನಲ್ಲಿ ಹಳೆಯ ದಾಖಲೆಗಳನ್ನು ಮುರಿದ ಉಷ್ಣಾಂಶ

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.

ಕರಾವಳಿ ಹವಾಮಾನ ಮುನ್ಸೂಚನೆ

ನಿನ್ನೆ ಸಂಜೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ, ಬಿರುಗಾಳಿ ಸಹಿತ ಮಳೆಯಾಗಿತ್ತು. ಇಂದು ಕೂಡ ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು ಹವಾಮಾನ ವರದಿ

ಇಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ವರದಿ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ವಿವಿಧ ಭಾಗಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ವರದಿ ತಿಳಿಸಿದೆ. ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹ ಇರಲಿದ್ದು, ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ.

    ಹಂಚಿಕೊಳ್ಳಲು ಲೇಖನಗಳು