Karnataka Weather: ಬೆಂಗಳೂರಿನಲ್ಲಿ ಚಳಿಯ ನಡುವೆ ಮೋಡ ಕವಿದ ವಾತಾವರಣ; ಕರ್ನಾಟಕದಲ್ಲಿ ಮುಂದುವರಿದ ಒಣ ಹವೆ
Jan 25, 2024 06:13 AM IST
ಬೆಂಗಳೂರಿನಲ್ಲಿ ಚಳಿಯ ವಾತಾವರಣ ಮುಂದುವರಿದಿದೆ
ರಾಜ್ಯದಲ್ಲಿ ಒಣ ಹವೆ ಮುಂದುವರಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿಯ ನಡುವೆ ಮೋಡ ಕವಿದ ವಾತಾವರಣವಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಜಾನೆ ಸಮಯದಲ್ಲಿ ಚಳಿಯ ವಾತಾವರಣ . ಇಂದು (ಜನವರಿ 25, ಗುರುವಾರ) ಕೂಡ ಚಳಿಯ ನಡುವೆಯೇ ಜನರು ತಮ್ಮ ದಿನ ನಿತ್ಯದ ಕೆಲಸಗಳನ್ನು ಹೋಗುತ್ತಿದ್ದಾರೆ. ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹೋಲಿಸಿದರೆ ಬೆಳಗಾವಿ, ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಚಳಿ ಹೆಚ್ಚಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅತ್ಯಂತ ಗಮನಾರ್ಹವಾಗಿ ಉಷ್ಣಾಂಶ ಇಳಿಕೆಯಾಗಿದೆ. -4.1 ಡಿಗ್ರಿ ಸೆಲ್ಸಿಯ್ನಿಂದ ಅಥವಾ ಅದಕ್ಕಿಂತೂ ಕಡಿಮೆಯಾಗಿದೆ. ಕವರಾಳಿಯ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕೆಡೆಗಳಲ್ಲಿ ಗಮನಾರ್ಹವಾಗಿ ಇಳಿಕೆಯಾಗಿದೆ (-2.1 ಡಿಗ್ರಿ ಸೆಲ್ಸಿಯಿಂದ -4.0 ಡಿಗ್ರಿ ಸೆಲ್ಸಿಯಸ್ವರೆಗೆ). ಒಳನಾಡಿದ ಬಹುತೇಕ ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ.
ಬೆಂಗಳೂರು ಹವಾಮಾನ
ಕಳೆದ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಕೆಲವು ಕಡೆಗಳಲ್ಲಿ ಬೆಳಗಿ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಇದೆ. ನಾಳೆ (ಜನವರಿ 26, ಶುಕ್ರವಾರ) ಕೂಡ ಇದೇ ವಾತಾವರಣ ಇರಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ. (This copy first appeared in Hindustan Times Kannada website. To read more like this please logon to kannada.hindustantime.com )
ವಿಭಾಗ