logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಕರಾವಳಿಯಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಳ; ಮಂಡ್ಯದಲ್ಲಿ ತಂಪಾದ ವಾತಾವರಣ -Karnataka Weather

ಕರ್ನಾಟಕ ಕರಾವಳಿಯಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಳ; ಮಂಡ್ಯದಲ್ಲಿ ತಂಪಾದ ವಾತಾವರಣ -Karnataka Weather

Raghavendra M Y HT Kannada

Mar 02, 2024 06:39 AM IST

google News

ಮಾರ್ಚ್ 2 ಕರ್ನಾಟಕ ಹವಾಮಾನ ವರದಿ

    • Karnataka Weather Today: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಕೆಲವೆಡೆ ಮುಂಜಾನೆ ಮಂಜು ಮುಸುಕುವ ವಾತಾವರಣ ಇರಲಿದೆ. ಶನಿವಾರ ಅತಿ ಕಡಿಮೆ ಉಷ್ಣಾಂಶ ಮಂಡ್ಯದಲ್ಲಿ ದಾಖಲಾಗಿದೆ.
ಮಾರ್ಚ್ 2 ಕರ್ನಾಟಕ ಹವಾಮಾನ ವರದಿ
ಮಾರ್ಚ್ 2 ಕರ್ನಾಟಕ ಹವಾಮಾನ ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯ ವಾತಾವರಣ ಇಲ್ಲ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಹವಾಮಾನ ವರದಿಯನ್ನು ನೋಡಿದಾಗ ಕರಾವಳಿ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಆದರೆ ದಕ್ಷಿಣ ಒಳನಾಡಿನ ಮಂಡ್ಯದಲ್ಲಿ ಮುಂಜಾನೆ ಸಮಯದಲ್ಲಿ ಚಳಿಯಿದೆ. ಮಧ್ಯಾಹ್ನದ ವೇಳೆಗೆ ಸೆಕೆ ಶುರುವಾಗುತ್ತಿದೆ.ಇಂದು (ಮಾರ್ಚ್ 2, ಶನಿವಾರ) ಕೂಡ ಇದೇ ಪರಿಸ್ಥಿತಿ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಸ್ವಲ್ಪ ಚಳಿಯ ವಾತಾವರಣ ಇದ್ದು, ಅಲ್ಲಲ್ಲಿ ಮಂಜು ಮುಕಿಸಿದೆ. ಅದೇ ರೀತಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಇಳಿಕೆಯಾಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರವಾಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಬದಲಾವಣೆಗಳೇನು ಆಗಿಲ್ಲ. ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ವಿಚಲನೆಯನ್ನು ನೋಡುವುದಾದರೆ ಕರಾವಳಿಯ ಹಲವು ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಅಂದರೆ 1.6 ಡಿಗ್ರಿ ಸೆಲ್ಸಿಯಸ್ ನಿಂದ 3.0 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 37.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದ್ದರೆ, ಕನಿಷ್ಠ ಉಷ್ಣಾಂಶ 14.9 ಡಿಗ್ರಿ ಸೆಲ್ಸಿಯಸ್ ಮಂಡ್ಯದಲ್ಲಿ ದಾಖಲಾಗಿದೆ.

ಮಾರ್ಚ್ 2ರ ಬೆಂಗಳೂರು ಹವಾಮಾನ ವರದಿ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ