logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 9: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಳ; ಬೆಳಗಾವಿಯಲ್ಲಿ ಅತಿ ಕಡಿಮೆ ಬಿಸಿ ದಾಖಲು

ಕರ್ನಾಟಕ ಹವಾಮಾನ ಮಾರ್ಚ್ 9: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಳ; ಬೆಳಗಾವಿಯಲ್ಲಿ ಅತಿ ಕಡಿಮೆ ಬಿಸಿ ದಾಖಲು

Raghavendra M Y HT Kannada

Mar 09, 2024 06:53 AM IST

google News

ಕಳೆದ 24 ಗಂಟೆಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಇಂದಿನ ಹವಾಮಾನವನ್ನು ತಿಳಿಯಿರಿ.

    • Karnataka Weather: ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಬಿಸಿ ಹೆಚ್ಚಾಗುತ್ತಲೇ ಇದೆ. ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಇಂದಿನ ಹವಾಮಾನವನ್ನು ತಿಳಿಯಿರಿ.
ಕಳೆದ 24 ಗಂಟೆಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಇಂದಿನ ಹವಾಮಾನವನ್ನು ತಿಳಿಯಿರಿ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ, ಮುಂದಿನ 48 ಗಂಟೆಗಳಲ್ಲಿ ಮಳೆಯ ಮುನ್ಸೂಚನೆಯೂ ಇಲ್ಲ ಬದಲಾಗಿ ಬಿಸಿ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳ ಹವಾಮಾನ ವರದಿ ಪ್ರಕಾರ, ಉತ್ತರ ಒಳನಾಡು ಮತ್ತು ರಾಜ್ಯದ ಕರಾವಳಿ ಭಾಗದ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ರಾಯಚೂರು, ವಿಜಯಪುರು, ಕೊಪ್ಪಳ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನರು ಬಿಸಿಯ ವಾತಾವರಣವನ್ನು ಎದುರಿಸುತ್ತಿದ್ದಾರೆ. ಇಂದು (ಮಾರ್ಚ್ 9, ಶನಿವಾರ) ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಸ್ವಲ್ಪ ಚಳಿ ಇದೆ. ಅಲ್ಲಲ್ಲಿ ಮಂಜು ಮುಕಿಸಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರವಾಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ವಾತಾವರಣದಲ್ಲಿ ಬದಲಾವಣೆಯಾಗಿದೆ. ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ವಿಚಲನೆಯನ್ನು ನೋಡುವುದಾದರೆ ಕರಾವಳಿಯ ಹಲವು ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಉಷ್ಣಾಂಶ ಕಡಿಮೆಯಾಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 39.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅತಿ ಕಡಿಮೆ ಉಷ್ಣಾಂಶ 15.8 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

ಮಳೆಯಾಗುವ ಸಂಭವನೀಯತೆಯೂ ಇದೆ

ಯಾವುದೇ ರೀತಿಯ ಮೋಡ ಕವಿದ ವಾತಾವರಣವಿಲ್ಲ. ಆದ್ದರಿಂದ ತಾಪಮಾನವು ಏರುತ್ತಿದೆ. ಆದರೆ ಸಾಮಾನ್ಯ ಮಳೆಯಾಗುವ ಸಂಭವನೀಯತೆಯೂ ಇದೆ" ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ. ಫೆಬ್ರವರಿಯಲ್ಲಿ ಮಳೆಯಾಗಿಲ್ಲ. ಮುಖ್ಯವಾಗಿ ಈ ಎಲ್ ನಿನೊ ಪರಿಸ್ಥಿತಿಯಿಂದಾಗಿಯೇ ಈ ಬಾರಿ ನಾವು ಬೇಸಿಗೆಯ ಆರಂಭದಲ್ಲಿ ಇಂತಹ ಪರಿಸ್ಥಿತಿಯನ್ನು ಹೊಂದಿದ್ದೇವೆ. ಬೇಸಿಗೆಯು ಮಾರ್ಚ್‌ನಲ್ಲಿ ಪ್ರಾರಂಭವಾಗಿದ್ದರೂ, ಅದರ ಪರಿಣಾಮವನ್ನು ಕಳೆದ ಕೆಲವು ವರ್ಷಗಳಿಂದ ಫೆಬ್ರವರಿಯಿಂದಲೇ ಅನುಭವಿಸಲಾಗುತ್ತಿದೆ. ಜಾಗತಿಕ ತಾಪಮಾನ ಏರಿಕೆಯೂ ಇದಕ್ಕೆ ಕಾರಣ ಎಂದು ಹೇಳಿದರು.

ಮಾರ್ಚ್ ತಿಂಗಳ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೆಲವು ದಿನಗಳವರೆಗೆ ಕರ್ನಾಟಕವು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಇದು ಎಲ್ಲಾ 31 ದಿನಗಳವರೆಗೆ ಅಲ್ಲ, ಆದರೆ ಈ ಮೂರು ತಿಂಗಳುಗಳಲ್ಲಿ ಕೆಲವೇ ದಿನಗಳು ಮಾತ್ರ ಎಂದು ಪ್ರಸಾದ್ ಹೇಳಿದರು.

"ಗರಿಷ್ಠ ತಾಪಮಾನವು 35 ಡಿಗ್ರಿಗಳನ್ನು ಮುಟ್ಟುತ್ತದೆ ಆದರೆ ಅದು ಈ ತಿಂಗಳು (ಬೇಸಿಗೆ) ಅದನ್ನು ಮೀರುವುದಿಲ್ಲ. ಮಾರ್ಚ್‌ನಲ್ಲಿ ಸರಾಸರಿ ತಾಪಮಾನ 34.1 ಡಿಗ್ರಿ ಸೆಲ್ಸಿಯಸ್, ಏಪ್ರಿಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಮತ್ತು ಮೇ ತಿಂಗಳಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೇ ತಿಂಗಳಿನಿಂದ ಸರಾಸರಿ ತಾಪಮಾನ ಕಡಿಮೆಯಾಗಲಿದೆ" ಎಂದು ಪ್ರಸಾದ್ ಅವರು ವಿವರಿಸಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com )

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ