ಕರ್ನಾಟಕ ಹವಾಮಾನ ಮೇ 2: ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ರಣ ಬಿಸಿಲು; ಇಂದು 25 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ
May 02, 2024 06:57 AM IST
ಕರ್ನಾಟಕದಲ್ಲಿ ಮೇ 2ರ ಗುರುವಾರ ಮಳೆಯ ಮುನ್ಸೂಚನೆ ಇಲ್ಲ. ಬಿಸಿಯ ವಾತಾವರಣ ಇರಲಿದೆ.
- ಕರ್ನಾಟಕದ ಬಹುತೇಕ ಕಡೆ ಬಿಸಿಯ ವಾತಾವರಣ ಇದ್ದು, ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮೇ 6 ರಂದು ಕೆಲವೊಂದು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು: ಕಳೆದೊಂದು ವಾರದಲ್ಲಿ ಕರ್ನಾಟಕದ (Karnataka Weather) ಕೆಲವು ಜಿಲ್ಲೆಗಳಲ್ಲಿ ರಣ ಬಿಸಿಲು ದಾಖಲೆ ಬರೆಯುತ್ತಿದೆ.ಇಂದಿನಿಂದ (ಮೇ 2, ಗುರುವಾರ) ಮೇ 5ರ (ಭಾನುವಾರ) ರವರೆಗೆ ಹೆಚ್ಚಿನ ತಾಪಮಾನ ಇರಲಿದೆ. ಕೊಂಚ ನೆಮ್ಮದಿಯ ವಿಷಯವೆಂದರೆ ಮೇ 6ರ ಸೋಮವಾರ 16 ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿ ವರದಿಯಲ್ಲಿ ತಿಳಿಸಿದೆ.
ಇಂದು (ಮೇ 2, ಗುರುವಾರ) ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ. ಆದರೆ ಮೇ 5ರವರೆಗೆ ಇದೇ ರೀತಿಯ ವಾತಾವರಣ ಇರಲಿದೆ. ಮೇ 6ರ ಸೋಮವಾರ ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಉಳಿದಂತೆ ಇತರೆ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.
ಮಳೆ ಬಾರದ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಬಿಸಿ ಹೆಚ್ಚಾಗಿದೆ. ದಕ್ಷಿಣ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಉಷ್ಣಾಂಶ ಹೆಚ್ಚಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಹೆಚ್ಚಾಗಿದೆ. ಇಡೀ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ಬಿಸಿಲ ನಾಡು ಕಲಬುರಗಿಯಲ್ಲಿ ದಾಖಲಾಗಿದೆ.
ಮೇ 2 ರಿಂದ 4ರವರೆಗೆ ಶಾಖದ ಅಲೆ ಸಾಧ್ಯತೆಯ ಜಿಲ್ಲೆಗಳು
ಮೇ 2ರ ಗುರುವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ಮೇ 3ರ ಶುಕ್ರವಾರ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ), ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ಮೇ 4ರ ಶನಿವಾರ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ), ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿಂದು (ಮೇ 2, ಗುರುವಾರ) ನಿರ್ಮಲ ಆಕಾಶ ಇರುತ್ತದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ ಕನಿಷ್ಠ ತಾಪಮಾನ 24 ಡಿಗ್ರಿೆ ಸಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ. ನಗರಕ್ಕೆ ಇನ್ನೂ ಮೂರ್ನಾಲ್ಕು ದಿನ ಮಳೆಯ ಮುನ್ಸೂಚನೆ ಇಲ್ಲ, ಬಿಸಿ ಮುಂದುವರಿಯಲಿದೆ.