logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 23: ರಾಜಧಾನಿ ಬೆಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿ 28 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 23: ರಾಜಧಾನಿ ಬೆಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿ 28 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ

Raghavendra M Y HT Kannada

May 23, 2024 08:14 AM IST

google News

ರಾಜಧಾನಿ ಬೆಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿ 28 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ

    • ಮೇ 23ರ ಗುರುವಾರ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದು ರಾಜ್ಯದ 28 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ ಇದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜಧಾನಿ ಬೆಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿ 28 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ
ರಾಜಧಾನಿ ಬೆಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿ 28 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ (Karnataka Rain) 10ಕ್ಕೂ ಹೆಚ್ಚು ದಿನಗಳಿಂದ ಮಳೆಯಾಗುತ್ತಿರುವುದು ರಣ ಬಿಸಿಲಿನಿಂದ ಹೈರಾಣವಾಗಿದ್ದ ಜನರಿಗೆ ಕೊಂಚ ರಿಲೀಫ್ ನೀಡಿದಂತಾಗಿದೆ. ಪಶುಗಳಿಗೆ ಕುಡಿಯಲು ನೀರು ಮತ್ತು ಮೇವಿಗೆ ಎದುರಾಗಿದ್ದ ಕೊರತೆ ಕೂಡ ಕಡಿಮೆಯಾಗಿದೆ. ಸತತವಾಗಿ ಮಳೆ ಬೀಳುತ್ತಿರುವುದರಿಂದ ಎಲ್ಲೆಡೆ ಹಸಿರು ಕಾಣಿಸಿಕೊಳ್ಳುತ್ತಿದೆ. ಮುಖ್ಯವಾಗಿ ಭೂಮಿ ತಂಪಾಗಿರುವುದು ರೈತರು ಬೆಳೆ ತೆಗೆಯಲು ಸುಲಭವಾಗಲಿದೆ. ವರುಣನ ಅಬ್ಬರ ಇಂದು (ಮೇ 23, ಗುರುವಾರ) ಮುಂದುವರಿಯುವ ಬಹಳಷ್ಟು ಸಾಧ್ಯತೆ ಇದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ (Karnataka Coastal Area Rain) ಮುನ್ಸೂಚನೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬುಧವಾರ (ಮೇ 22) ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳ, ಸುಳ್ಯ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 6 ಸೆಂಟಿ ಮೀಟರ್ ಮಳೆಯಾಗಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ 5, ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ 5, ಶಿವಮೊಗ್ಗದ ಹುಂಚದಕಟ್ಟೆ 5, ಉತ್ತರ ಕನ್ನಡದ ಗೇರ್ಸೊಪ್ಪ 4, ಕೊಡಗು ಜಿಲ್ಲೆಯ ಹಾರಂಗಿ 4, ಶಿವಮೊಗ್ಗದ ತಾಳಗುಪ್ಪ 4, ಕೊಡಗು ಜಿಲ್ಲೆಯ ನಾಪೋಕ್ಲು 3, ಹಾಸನದ ಕೊಣನೂರು 3, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 3, ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ 3, ಉತ್ತರ ಕನ್ನಡದ ಗೋಕರ್ಣದಲ್ಲಿ 2, ಉಡುಪಿಯ ಕೊಲ್ಲೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ.

ಮಳೆಯಾಗಿದ್ದರೂ ಬಹುತೇಕ ಕಡೆಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಉಷ್ಣಾಂಶ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮೇ 23ರ ಗುರುವಾರ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ?

ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ, ಇಂದು (ಮೇ 23, ಗುರುವಾರ) ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಚಿತ್ರದುಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಮೇ 29ರ ಬುಧವಾರದ ವರೆಗೆ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಇನ್ನ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ