logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 5: ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಈ ಭಾಗದಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 5: ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಈ ಭಾಗದಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ

Raghavendra M Y HT Kannada

May 05, 2024 06:57 AM IST

ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಲ್ಲಿ ಮೇ 5ರ ಭಾನುವಾರ ಮಳೆಯಾಗುವ ಮುನ್ಸೂಚನೆ

    • Karnataka Weather Today: ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ. ಕೆಲ ಜಿಲ್ಲೆಗಳಿಗೆ ಶಾಖಾಘಾತದ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಲ್ಲಿ ಮೇ 5ರ ಭಾನುವಾರ ಮಳೆಯಾಗುವ ಮುನ್ಸೂಚನೆ
ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಲ್ಲಿ ಮೇ 5ರ ಭಾನುವಾರ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ (Karnataka Rain) ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇಂದು (ಮೇ 5, ಭಾನುವಾರ) ಕೂಡ 8 ಜಿಲ್ಲೆಗಳಲ್ಲಿ ವರುಣ ಆರ್ಭಟಿಸುವ ಮುನ್ಸೂಚನೆ ಇದೆ. ಆದರೆ ಉತ್ತರ ಒಳನಾಡು ಭಾಗದಲ್ಲಿ ಶಾಖದ ಅಲೆಗಳ ಎಚ್ಚರಿಕೆಯನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಮೈಸೂರು 5, ಹುಣಸೂರು 3, ಸರಗೂರು 3, ಬೆಂಗಳೂರು ನಗರ 2, ಕೊಡಗು ಜಿಲ್ಲೆಯ ಹಾರಂಗಿ, ಕುಶಾಲನಗರ, ಮೈಸೂರು ಜಿಲ್ಲೆಯ ಕೆಆರ್ ನಗರ, ಹಾಸನ ಜಿಲ್ಲೆಯ ಕೊಣನೂರಿನಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ (Karnataka Weather Today.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಮೇ 18, 19ಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ -Bengaluru Rain

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು ಹವಾಮಾನ ಕೇಂದ್ರದ ದೈನಂದಿನ ವರದಿಯ ಪ್ರಕಾರ, ಮಳೆಯಿಂದಾಗಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಗಮನಾರ್ಹವಾಗಿ ಹೆಚ್ಚಳವಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಜಾಸ್ತಿಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಲಬುರ್ಗಿ ಮತ್ತು ರಾಯಚೂರಿನ ಬಯಲು ಸೀಮೆಯಲ್ಲಿ ಗರಿಷ್ಠ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮೇ 5 ರಂದು 8 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು (ಮೇ 5, ಭಾನುವಾರ) ಹಗುರುದಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಮೇ 6ರ ಸೋಮವಾರ ಮಳೆ ಸಾಧ್ಯತೆ ಇರುವ ಜಿಲ್ಲೆಗಳನ್ನು ನೋಡುವುದಾದರೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆ ಇದೆ. ಮೇ 7ರ ಮಂಗಳವಾರ 15 ಜಿಲ್ಲೆಗಳಿಗೆ ವರುಣ ಕೃಪೆ ತೋರುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ.

ಮೇ5ರ ಭಾನುವಾರ ಶಾಖದ ಅಲೆಯ ಎಚ್ಚರಿಕೆ ಇರುವ ಜಿಲ್ಲೆಗಳು

ರಾಜ್ಯದಲ್ಲಿ ಒಂದು ಕಡೆ ಮಳೆಯಾಗುತ್ತಿದ್ದರೆ, ಮತ್ತೊಂದು ಕಡೆ ರಣ ಬಿಸಿಲಿನ ವಾತಾವರಣ ಮುಂದುವರಿದಿದೆ. ಮೇ 4ರ ರಾತ್ರಿ 7.45 ರವರೆಗಿನ ದಾಖಲಾಗಿರುವ ಹವಾಮಾನದ ವರದಿ ಪ್ರಕಾರ, ಬೆಂಗಳೂರು ಗನರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲಿ ಶಾಖದ ಅಲೆಯ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ಮೇ 6ರ ಸೋಮವಾರ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಖಾಘಾತದ ಎಚ್ಚರಿಕೆ ನೀಡಲಾಗಿದೆ ಎನ್ನುವುದನ್ನು ನೋಡುವುದಾದರೆ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು ನಗರದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಇಂದು (ಮೇ 5ರ ಭಾನುವಾರ) ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಮಳೆ ಬೀಳುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ