logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್‌, ಕಲಬುರಗಿ, ವಿಜಯಪುರ, ಬೆಳಗಾವಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Karnataka Rains: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್‌, ಕಲಬುರಗಿ, ವಿಜಯಪುರ, ಬೆಳಗಾವಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Umesha Bhatta P H HT Kannada

Sep 25, 2024 07:09 AM IST

google News

ಬೆಂಗಳೂರಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವೇ ಇದೆ.

    • ಕರ್ನಾಟಕದ ಕರಾವಳಿ,ಮಲೆನಾಡು ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳು ಸೇರಿದಂತೆ ಒಂಬತ್ತು ಜಿಲ್ಲೆಗಳ ಹಲವು ಕಡೆಗಳಲ್ಲಿ ಬುಧವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವೇ ಇದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವೇ ಇದೆ. (ravi keerthi gowda)

ಬೆಂಗಳೂರು: ಕರ್ನಾಟಕದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆಪ್ಟಂಬರ್‌ 25ರ ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅತಿ ಭಾರೀ ಮಳೆಯಾಗಲಿದ್ದು, ಮೂರೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ತಿಳಿಸಿದೆ. ಈ ಆರೂ ಜಿಲೆಗಳಲ್ಲೂ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರವೂ ಕರಾವಳಿ ಭಾಗದ ಹಲವು ಕಡೆಗಳಲ್ಲಿ ಯಥೇಚ್ಚ ಮಳೆಯಾಗಿದೆ. ಬೆಂಗಳೂರು ನಗರದಲ್ಲೂ ಬುಧವಾರ ಸಾಧಾರಣ ಮಳೆಯಾಗಬಹುದು.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಬಹುದು

ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗುವ ಸೂಚನೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂರು ಜಿಲ್ಲೆಗಳಲ್ಲೂ ಆರೆಂಜ್‌ ಅಲರ್ಟ್‌ ಇರಲಿದೆ.

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಗುಡುಗು ಕೂಡ ಇರಲಿದೆ. ಈ ಭಾಗದಲ್ಲಿ ಗಾಳಿಯ ವೇಗವೂ ಅತಿಯಾಗಿ ಇರಲಿದೆ,

ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿಯೂ ಭಾರೀ ಮಳೆಯಾಗಲಿದೆ. ಈ ಎರಡೂ ಜಿಲ್ಲೆಗಳಲ್ಲಿ ಗಾಳಿ ವೇಗ ಹೆಚ್ಚು ಇರಲಿದೆ. ಈ ಆರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರ ಮಳೆ ಗುಡುಗು ಸಹಿತ ಬೀಳಬಹುದು. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ನಿರಂತರ ಗಾಳಿಯ ವೇಗವು ಅಧಿಕವಾಗಬಹುದು

ಗುರುವಾರದಿಂದ ಬಹುತೇಕ ಕಡೆಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಯಿದೆ. ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದಿನ ಐದು ದಿನಗಳ ಕಾಲ ಇರಲಿದೆ.

ಕರಾವಳಿ ಭಾಗದಲ್ಲಿ ಮಳೆಯ ಜತೆಗೆ ಗಾಳಿಯ ವೇಗವೂ ಅಧಿಕವಾಗಿ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮುಂದಿನ ಎರಡು ದಿನ ಹಗುರದಿಂದ ಸಾಧಾರಣ ಮಳೆಯಾಗಬಹುದು. ಎರಡೂ ದಿನವೂ ಮೋಡ ಕವಿದ ವಾತಾವರಣ ಇರಲಿದೆ. ತಾಪಮಾನವೂ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು.

ಎಲ್ಲೆಲ್ಲಿ ಮಳೆಯಾಗಿದೆ

ವಿಜಯಪುರ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. 20 ಸೆ.ಮೀ ಮಳೆ ಸುರಿದಿರುವುದು ಇಲ್ಲಿನ ವಿಶೇಷ. ಉತ್ತರ ಕನ್ನಡ ಜಲ್ಲೆಯ ಮಂಕಿ ಹಾಗೂ ಶಿರಾಲಿಯಲ್ಲೂ ಅತಿ ಹೆಚ್ಚಿನ 12 ಸೆ.ಮೀ ಮಳೆಯಾಗಿದೆ. ಹೊನ್ನಾವರ, ಗೋಕರ್ಣ ಭಾಗ, ವಿಜಯಪುರ ಜಿಲ್ಲೆಯ ಆಲಮಟ್ಟಿ, ನಾಲತವಾಡ, ತಿಕೋಟ, ಬೆಳಗಾವಿ ಜಿಲ್ಲೆಯ ಅಥಣಿ ಭಾಗದಲ್ಲೂ ಉತ್ತಮ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಸಿದ್ದಾಪುರ, ಕುಂದಾಪುರ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ತಳಿಕೋಟೆ, ಬಾಗಲಕೋಟೆ ಜಿಲ್ಲೆಯ ರಬಕವಿ, ಕೂಡಲಸಂಗಮ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಮಾಣಿ,ಮುಲ್ಕಿ, ಉಪ್ಪಿನಂಗಡಿ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಪಣಂಬೂರು, ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಅಂಕೋಲಾ, ಕಾರವಾರ, ಗೇರುಸೊಪ್ಪ, ಕ್ಯಾಸಲ್‌ ರಾಕ್‌, ಹಳಿಯಾಳ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಟ್ಟಿಗೆಹಾರ, ಧಾರವಾಡ, ಕಲಬುರಗಿ ಜಿಲ್ಲೆಯ ಕಲಬುರಗಿ, ಸೇಡಂ, ಕಮಲಾಪುರ, ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಬೆಳಗಾವಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಲಿಂಗನಮಕ್ಕಿ, ಗದಗ ಜಿಲ್ಲೆಯ ನರಗುಂದ, ಯಾದಗಿರಿ ಜಿಲ್ಲೆಯ ಶೋರಾಪುರ, ಸೈದಾಪುರ, ಕಕ್ಕೇರಿ, ರಾಯಚೂರು ಜಿಲ್ಲೆಯ ದೇವದುರ್ಗ, ಮುದಗಲ್‌, ದಾವಣಗೆರೆ, ಹಾಸನ ಜಿಲ್ಲೆಯ ಬೇಲೂರು, ತುಮಕೂರು ಜಿಲ್ಲೆಯ ವೈ.ಎನ್. ಹೊಸಕೋಟೆ, ತಿಪಟೂರು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹಾವೇರಿ ಜಿಲ್ಲೆಯ ಗುತ್ತಲದಲ್ಲೂ ಮಳೆ ಸುರಿದಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ