Karnataka Weather: ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಭಾರೀ ಕುಸಿತ; ಹಾಸನ, ದಾವಣಗೆರೆ, ಮಂಡ್ಯದಲ್ಲಿ ಬಿಸಿಲು, ಮಳೆ ಎಲ್ಲೆಲ್ಲಿದೆ?
Sep 16, 2024 07:16 AM IST
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚಳಿ ವಾತಾವರಣ ಕಂಡು ಬಂದಿದೆ.
- Karnataka Weather ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ನಿಧಾನವಾಗಿ ಚಳಿಯ ವಾತಾವರಣ ಕಂಡು ಬರುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಚಳಿ ವಾತಾವರಣದ ಅನುಭವವಾಗುತ್ತಿದೆ. ಬೆಂಗಳೂರು ಸಹಿತ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆ ತಗ್ಗಿ ಬಿರು ಬಿಸಿಲಿನ ಅನುಭವ ಆಗುತ್ತಿದೆ.
ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ವಾತಾವರಣ ಹಲವು ಭಾಗಗಳಲ್ಲಿ ಶುರುವಾಗಿದೆ. ಸಾಧಾರಣ ಮಳೆ( Karnataka Rains) ಅಲ್ಲಲ್ಲಿ ಆಗಿರುವುದು ಬಿಟ್ಟರೆ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಉತ್ತರ ಕರ್ನಾಟಕದ ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದು ಬೆಳ್ಳಂಬೆಳಿಗ್ಗೆ ಚಳಿ ವಾತಾವರಣವಿತ್ತು. ಹಾಸನ, ಮಂಡ್ಯ, ದಾವಣಗೆರೆ ಸಹಿತ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ ಬಿರು ಬಿಸಿಲಿನ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲೂ( Bangalore Weather Updates) ಬಿಸಿಲಿನ ಸನ್ನಿವೇಶವೂ ಇದೆ. ಸೋಮವಾರದಂದು ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು( IMD Bangalore Center) ನೀಡಿದೆ.
ಉಷ್ಣಾಂಶ ಎಲ್ಲಿ ಹೇಗಿದೆ
ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ನಿಧಾನವಾಗಿ ಅನುಭವಕ್ಕೆ ಬರ ತೊಡಗಿದೆ. ವಿಜಯಪುರ, ಬೀದರ್ ಸಹಿತ ಹಲವು ಕಡೆಗಳಲ್ಲಿ ಚಳಿ ಶುರುವಾಗಿದ್ದರೆ, ಹಾಸನ, ಮಂಡ್ಯ ಸಹಿತ ಕೆಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೀದರ್ ನಲ್ಲಿ ಗರಿಷ್ಠ ಉಷ್ಣಾಂಶವು 29.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾಸನದಲ್ಲಿ ಗರಿಷ್ಠ ಉಷ್ಣಾಂಶವು 31.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾಸನದಲ್ಲಿ ಗರಿಷ್ಠ ಉಷ್ಣಾಂಶವು 31.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶವು30.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಎಲ್ಲೆಲ್ಲಿ ಮಳೆಯಾಗಬಹುದು
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಗಳಿವೆ.
ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳು, ಪಶ್ಚಿಮ ಘಟ್ಟಗಳ ಸೆರಗಿನಲ್ಲಿರುವ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಮುಖ್ಯವಾಗಿ ಒಣ ಹವೆಯ ವಾತಾವರಣವೇ ಹೆಚ್ಚು ಕಂಡು ಬರಲಿದ್ದು, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ತಿಳಿಸಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವು ಮುಂದಿನ ಎರಡು ದಿನಗಳ ಕಾಲ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗಬಹುದು. ಬೆಂಗಳೂರಿನ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಭಾರೀ ವ್ಯತ್ಯಾಸವೇನೂ ಇರುವುದಿಲ್ಲ.
ಬೆಂಗಳೂರು ಎಚ್‌ಎಎಲ್ ನಿಲ್ದಾಣ ಭಾಗದಲ್ಲಿ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ ಭಾಗದಲ್ಲಿ ಗರಿಷ್ಠ ಉಷ್ಣಾಂಶವು 29.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ನಗರ ಭಾಗದಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಳೆ ಎಲ್ಲೆಲ್ಲಿ ಆಗಿದೆ
ಕರಾವಳಿಯ ಉಡುಪಿ ಜಿಲ್ಲೆಯ ಕೋಟ ಸಹಿತ ಹಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಹೊನ್ನಾವರ, ಶಿರಾಲಿ, ಗೇರುಸೊಪ್ಪಾ, ಕ್ಯಾಸಲ್‌ರಾಕ್, ಕುಮಟಾ, ಉಡುಪಿ ಜಿಲ್ಲೆಯ ಸಿದ್ದಾಪುರ, ಕುಂದಾಪುರ, ಕಾರ್ಕಳ, ಹಾಸನ, ಚಿಕ್ಕಮಗಳೂರಿನ ಕಮ್ಮರಡಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ ಮಳೆಯಾಗಿದೆ.