logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದಲ್ಲಿ ಡಿಸೆಂಬರ್‌ 10ರವರೆಗೂ ಸಾಧಾರಣ ಮಳೆ: ಇಂದು ಹೀಗಿರಲಿದೆ ಹವಾಮಾನ

Karnataka Rains: ಕರ್ನಾಟಕದಲ್ಲಿ ಡಿಸೆಂಬರ್‌ 10ರವರೆಗೂ ಸಾಧಾರಣ ಮಳೆ: ಇಂದು ಹೀಗಿರಲಿದೆ ಹವಾಮಾನ

Umesha Bhatta P H HT Kannada

Dec 06, 2023 06:33 AM IST

google News

ಕರ್ನಾಟಕದಲ್ಲಿ ಮುಂದಿನ ಐದು ದಿನ ಹಗುರ ಮಳೆಯಾಗುವ ಮುನ್ಸೂಚನೆಯಿದೆ.

    • Karnataka Weather Updates ಕರ್ನಾಟಕದ ಕೆಲವು ಕಡೆಗಳಲ್ಲಿ ಮುಂದಿನ ಐದು ದಿನ ಹಗುರ ದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ( IMD) ನೀಡಿದೆ. 
ಕರ್ನಾಟಕದಲ್ಲಿ ಮುಂದಿನ ಐದು ದಿನ ಹಗುರ ಮಳೆಯಾಗುವ ಮುನ್ಸೂಚನೆಯಿದೆ.
ಕರ್ನಾಟಕದಲ್ಲಿ ಮುಂದಿನ ಐದು ದಿನ ಹಗುರ ಮಳೆಯಾಗುವ ಮುನ್ಸೂಚನೆಯಿದೆ.

ಬೆಂಗಳೂರು: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಮಳೆಯೂ ಅಲ್ಲಲ್ಲಿ ಆಗಲಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್‌ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೇ ಆಗುವ ಸಾಧ್ಯತೆಗಳಿಲ್ಲ.

ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲವಷ್ಟು ಕಡೆಗಳಲ್ಲಿ ಡಿಸೆಂಬರ್‌ 10ರವರಗೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ.

ಡಿಸೆಂಬರ್‌ 6ರ ಬುಧವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.

ಡಿಸೆಂಬರ್‌ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು.

ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆಗಳಿಲ್ಲ. ಗುಡುಗು, ಮಿಂಚಿನ ವಾತಾವರಣವೂ ಇರುವುದಿಲ್ಲ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಐದು ದಿನಗಳ ಅವಧಿಯಲ್ಲಿ ಅಲ್ಲಲ್ಲಿ ಚಳಿಯ ವಾತಾವರಣ ಕಂಡು ಬರಲಿದೆ. ಉತ್ತರ ಕರ್ನಾಟಕದ ವಿಜಯಪುರದಲ್ಲಿಯೇ ಸತತವಾಗಿ ಕನಿಷ್ಠ ಉಷ್ಣಾಂಶ ಕಂಡು ಬಂದಿದ್ದು. ಅದು ಮುಂದುವರಿಯಲಿದೆ. ಉಳಿದಂಎ ತಾಪಮಾನದ ಭಾರೀ ಏರಿಳಿತವೇನೂ ಅಷ್ಟಾಗಿ ಇರುವುದಿಲ್ಲ ಎಂದು ಬೆಂಗಳೂರು ಹವಾಮಾನ ಕೇಂದ್ರವು ಸ್ಪಷ್ಟಪಡಿಸಿದೆ.

ಕೋಲಾರದಲ್ಲಿ ಮಳೆ

ಮಿಚಾಂಗ್‌ ಚಂಡಮಾರುತ ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಇದ್ದರೂ ಕರ್ನಾಟಕದ ಮೇಲೇನೂ ಪ್ರಭಾವ ಬೀರಿಲ್ಲ. ಆದರೂ ಕೋಲಾರ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಅದರಲ್ಲೂ ಕೋಲಾರದ ರಾಯಲ್ಪಾಡುವಿನಲ್ಲಿ 1 ಸೆ.ಮೀ. ನಷ್ಟು ಮಳೆ ಸುರಿದಿದೆ. ಇತರೆಡೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾದರೆ, ಕರಾವಳಿಯಲ್ಲಿ ಸಂಪೂರ್ಣ ಒಣ ಹವೆಯ ವಾತಾವರಣ ಕಂಡು ಬಂದಿತು.

ಬೆಂಗಳೂರು ಮಳೆ ಹೇಗೆ

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ 48 ಗಂಟೆಗಳವರೆಗೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯೂ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಬೆಂಗಳೂರಿನ ಗರಿಷ್ಠ ಉಷ್ಣಾಂಶವು 26 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ ನಷ್ಟಿರುವ ಸಾಧ್ಯತೆಗಳಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ