logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ ನಿರೀಕ್ಷೆ, 6 ಜಿಲ್ಲೆಗಳಲ್ಲಿ ಅಲರ್ಟ್‌, ಬೆಂಗಳೂರಲ್ಲಿ ಮಳೆ ಹೇಗಿದೆ

Karnataka Rains: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ ನಿರೀಕ್ಷೆ, 6 ಜಿಲ್ಲೆಗಳಲ್ಲಿ ಅಲರ್ಟ್‌, ಬೆಂಗಳೂರಲ್ಲಿ ಮಳೆ ಹೇಗಿದೆ

Umesha Bhatta P H HT Kannada

Sep 08, 2024 07:51 AM IST

google News

ಕರ್ನಾಟಕ ಕರಾವಳಿ, ಮಲೆನಾಡು ಭಾಗದಲ್ಲಿ ಭಾನುವಾರ ಉತ್ತಮ ಮಳೆಯಾಗಬಹುದು.

    • Karnataka Weather  ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾನುವಾರವೂ ಭಾರೀ ಮಳೆ ಮುನ್ಸೂಚನೆಯಿದ್ದು, ಆರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಇದೆ.
ಕರ್ನಾಟಕ ಕರಾವಳಿ, ಮಲೆನಾಡು ಭಾಗದಲ್ಲಿ ಭಾನುವಾರ ಉತ್ತಮ ಮಳೆಯಾಗಬಹುದು.
ಕರ್ನಾಟಕ ಕರಾವಳಿ, ಮಲೆನಾಡು ಭಾಗದಲ್ಲಿ ಭಾನುವಾರ ಉತ್ತಮ ಮಳೆಯಾಗಬಹುದು.

ಬೆಂಗಳೂರು: ಗಣೇಶ ಹಬ್ಬದ ವೇಳೆಯೂ ಕರ್ನಾಟಕದ ಹಲವು ಭಾಗಗಳಲ್ಲಿ( Karnataka Rains) ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ಅಡಚಣೆಯಾಗಿದೆ. ಹಬ್ಬದ ಮರುದಿನವಾದ ಭಾನುವಾರವೂ ಕರಾವಳಿ (Costal Karnataka Rains) ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು(IMD Bangalore Center) ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ( Dakshina Kannada Rains), ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ( Hassan Rains) ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಬಹುದು

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ಭಾನುವಾರವೂ ಈ ಮೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಮಲೆನಾಡು ಭಾಗದಲ್ಲೂ ಭಾರೀ ಮಳೆ ಸುರಿಯುವ ಸೂಚನೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗಬಹುದು ಎನ್ನುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.

ಈ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಅನ್ನು ನೀಡಿದೆ.

ಈ ಆರು ಜಿಲೆಗಳಲ್ಲಿ ಗಾಳಿಯ ವೇಗವು ಅಧಿಕವಾಗಿರಲಿದ್ದು, ನಿರಂತರ ಗಾಳಿ ವೇಗ ಗಂಟೆಗೆ 30 ರಿಂದ 40 ಕಿ.ಮೀ. ವರೆಗೂ ಇರಬಹುದು

ಉತ್ತರ ಕರ್ನಾಟಕದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಬಹುದು. ಒಳ ನಾಡಿನ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಬಹುದು ಎಂದು ಸೂಚಿಸಲಾಗಿದೆ.

ಇದಲ್ಲದೇ ಮುಂದಿನ ಆರು ದಿನಗಳ ಕಾಲವೂ ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಇರುವ ಮುನ್ಸೂಚನೆಯಿದೆ. ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ, ಕೆಲವೆಡೆ ಭಾರೀ ಮಳೆಯೂ ಆಗಬಹುದು.

ಬೆಂಗಳೂರು ಮಳೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲ ಮುಂದಿನ ಎರಡು ದಿನ ಒಂದೆರಡು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಮೋಡ ಕವಿದ ವಾತಾವರಣವೂ ಕಂಡು ಬರಲಿದೆ. ಬೆಂಗಳೂರಿನಲ್ಲಿ ತಾಪಮಾನದಲ್ಲಿ ಇಳಿಕೆ ಕಾಣಲಿದೆ. ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಬಹುದು.

ಎಲ್ಲೆಲ್ಲಿ ಮಳೆಯಾಗಿದೆ

ಶನಿವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಶಿರಾಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪುತ್ತೂರು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಅತ್ಯಧಿಕ 4 ಸೆ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಮಂಕಿ, ಹೊನ್ನಾವರ, ಕಾರವಾರ, ಕುಮಟಾ, ಸಿದ್ದಾಪುರ, ಗೇರುಸೊಪ್ಪ, ಹಳಿಯಾಳ, ಉಡುಪಿ ಜಿಲ್ಲೆಯ ಉಡುಪಿ, ಸಿದ್ದಾಪುರ, ಕುಂದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಧರ್ಮಸ್ಥಳ, ಬೀದರ್‌ ಜಿಲ್ಲೆಯ ಬೀದರ್‌, ಔರಾದ್‌, ಭಾಲ್ಕಿ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಜಯಪುರ, ಕಳಸ, ಯಾದಗಿರಿ ಜಿಲ್ಲೆಯ ಕಕ್ಕೇರಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್‌, ಗಂಗಾವತಿ, ಬೆಳಗಾವಿ ಜಿಲ್ಲೆಯ ಲೋಂಡಾ, ಯಡವಾಡ. ಬಳ್ಳಾರಿ ಜಿಲ್ಲೆಯ ಕುಡತಿನಿ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲೂ ಮಳೆಯಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ