logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: 6 ದಿನ ಕರ್ನಾಟಕ ಬಹುತೇಕ ಕಡೆ ಮಳೆ; ಬೆಂಗಳೂರು, ಮೈಸೂರು ಸಹಿತ ಕೆಲವೆಡೆ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ

Karnataka Rains: 6 ದಿನ ಕರ್ನಾಟಕ ಬಹುತೇಕ ಕಡೆ ಮಳೆ; ಬೆಂಗಳೂರು, ಮೈಸೂರು ಸಹಿತ ಕೆಲವೆಡೆ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ

Umesha Bhatta P H HT Kannada

May 05, 2024 07:32 PM IST

google News

ಮೈಸೂರಿನಲ್ಲಿ ಮೋಡಗಳ ಆಟ

    • ಕರ್ನಾಟಕದಲ್ಲಿ ಬಿಸಿಲು ಮಳೆಯ ಆಟ ಮುಂದಿನ ಆರು ದಿನ ಮುಂದುವರಿಯಲಿದೆ. ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ( IMD) ನೀಡಿದೆ. 
ಮೈಸೂರಿನಲ್ಲಿ ಮೋಡಗಳ ಆಟ
ಮೈಸೂರಿನಲ್ಲಿ ಮೋಡಗಳ ಆಟ (Ravi Keerthi Gowda)

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಳಲಿರುವ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ.ಮೇ 7ರ ಮಂಗಳವಾರದಿಂದ ಕರಾವಳಿ, ಮಲೆನಾಡು, ಮಧ್ಯಕರ್ನಾಟಕ. ಮೈಸೂರು, ಬೆಂಗಳೂರು ನಗರದಲ್ಲೂ ಮಳೆಯಾಗಲಿದೆ ಎನ್ನುವ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಎರಡು ದಿನದ ಹಿಂದೆ ಸುರಿದ ಭಾರೀ ಮಳೆಗೆ ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅನಾಹುತಗಳೂ ಆಗಿವೆ. ಮೈಸೂರಿನಲ್ಲಂತೂ ಮರ, ವಿದ್ಯುತ್‌ ಕಂಬ ಉರುಳಿ ಭಾರೀ ನಷ್ಟ ಉಂಟಾಗಿದೆ. ಇದರ ನಡುವೆ ಮತ್ತೆ ಮಳೆ ಸುರಿಯುವ ಮುನ್ಸೂಚನೆ ಇರುವುದರಿಂದ ಸ್ಥಳೀಯಾಡಳಿತಗಳು ಮುನ್ನೆಚ್ಚರಿಕೆಯನ್ನೂ ಕೈಗೊಂಡಿವೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶನಿವಾರ ರಾತ್ರಿ ಹಾಗೂ ಭಾನುವಾರವೂ ಕರ್ನಾಟಕದ ಕೆಲವು ಕಡೆ ಮಳೆಯಾಗಿರುವ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ 4 ಸೆ.ಮೀನಷ್ಟು ಮಳೆಯಾಗಿರುವ ವರದಿಯಾಗಿದೆ.

ಯಾವ ಜಿಲ್ಲೆಯಲ್ಲಿ ಮಳೆ

ಮೇ07ರ ಮಂಗಳವಾರದಂದು ದಕ್ಷಿಣ ಕನ್ನಡ, ಉಡುಪಿ.ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕ ಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವರೆ ಇರಲಿದೆ.

ಮೇ 08ರಂದು ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ. ಬೀದರ್‌, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೆಲವೆಡೆ ಹಗುರದಿಂದ ಸಾಧಾರಣಾ ಮಳೆಯು ಗುಡುಗು ಸಹಿತ ಆಗಲಿದೆ. ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.

ಮೇ 09ರಂದು ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ. ಬೀದರ್‌, ಕಲಬುರಗಿ, ವಿಜಯಪುರ,ಬಾಗಲಕೋಟೆ, ಯಾದಗಿರಿ, ಗದಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣಾ ಮಳೆಯು ಗುಡುಗು ಸಹಿತ ಆಗಲಿದೆ. ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.

ಮೇ 10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ರಾಯಚೂರು, ಕೊಪ್ಪಳ. ಬೀದರ್‌, ಕಲಬುರಗಿ, ವಿಜಯಪುರ,ಬಾಗಲಕೋಟೆ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣಾ ಮಳೆಯು ಗುಡುಗು ಸಹಿತ ಆಗಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.

ಮೇ 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ರಾಯಚೂರು, ಬೀದರ್‌, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.

ಮೇ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ರಾಯಚೂರು, ಕೊಪ್ಪಳ. ಬೀದರ್‌, ಕಲಬುರಗಿ, ವಿಜಯಪುರ,ಬಾಗಲಕೋಟೆ, ಯಾದಗಿರಿ, ಗದಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು,ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.

ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ನಿರ್ಮಲ ಆಕಾಶವಿರಲಿದೆ. ಉಷ್ಣಾಂಶವು 39 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮಂಗಳವಾರಂದು ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣಾ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಕೆಲವು ಭಾಗಗಳಲ್ಲಿ ಆಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್‌.ಪುವಿಯರಸನ್‌ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ