ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ, ಬೆಂಗಳೂರಲ್ಲೂ ಮಳೆಯುಂಟು

Karnataka Rains: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ, ಬೆಂಗಳೂರಲ್ಲೂ ಮಳೆಯುಂಟು

Umesha Bhatta P H HT Kannada

Apr 20, 2024 06:50 AM IST

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ.

  •  Weather Updates ಕರ್ನಾಟಕದಲ್ಲಿ  ಮುಂದಿನ ನಾಲ್ಕು ದಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಶನಿವಾರ ಬೆಳಿಗ್ಗೆಯೂ ಕೆಲವು ಕಡೆ ಮಳೆಯಾದ ವರದಿಯಾಗಿದೆ. 

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ.

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳು ಹಾಗು ಉತ್ತರ, ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏ.23ರ ಮಂಗಳವಾರದವರೆಗೂ ಮಳೆಯಾಗಲಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುಂದಿನ ವಾರದ ಮಳೆಯ ಮುನ್ಸೂಚನೆಯನ್ನು ನೀಡಿದೆ. ಈ ಪ್ರಕಾರ ಏ.20ರ ಶನಿವಾರದಿಂದ ನಾಲ್ಕು ದಿನ ಕಾಲ ಮಳೆಯಾಗಲಿದೆ. ಆನಂತರ ಒಣಹವೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲೂ ಶನಿವಾರ ಮಳೆಯ ಸೂಚನೆಯಿದೆ ಎಂದು ತಿಳಿಸಲಾಗಿದೆ. ಗುರುವಾರ ರಾತ್ರಿ ಹಾಗೂ ಶುಕ್ರವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನ ಮಳೆಯ ಅನುಭವವೂ ಹಲವು ಜಿಲ್ಲೆಗಳಲ್ಲಿ ಆಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರಿನ ಪ್ರತಿಷ್ಠಿತ ಜೈನ್ ಹೆರಿಟೇಜ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ; ಆತಂಕಕ್ಕೀಡಾದ ವಿದ್ಯಾರ್ಥಿಗಳು ಮತ್ತು ಪೋಷಕ

Mangalore News: ಮಂಗಳೂರು ನಗರಕ್ಕೆ ಬೇಕಿವೆ ತಂಗುದಾಣಗಳು, ಬಸ್‌ಗೆ ಕಾಯುವವರ ಸಂಕಟ ಕೇಳೋರು ಯಾರು

Indian Railways: ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಬೀದರ್‌ನ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ, ಯಾವ ರೈಲು, ಎಲ್ಲಿಯವರೆಗೆ

Bangalore News: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ವೇಗವಾಗಿ ವಾಹನ ಚಾಲನೆ ಮಾಡಿದರೆ ದಂಡ ಕಟ್ಟ ಬೇಕಾದೀತು, ಹುಷಾರು

ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆ

ಗುರುವಾರ ರಾತ್ರಿ ಶುಕ್ರವಾರದಂದು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ನಿಪ್ಪಾಣಿಯಲ್ಲಿ 6 ಸೆಂ. ಮೀ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ 4 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಬಾಗಲಕೋಟೆ ಜಿಲ್ಲೆ ಲೋಕಾಪುರ, ಬೆಳಗಾವಿ ಜಿಲ್ಲೆ ಚಿಕ್ಕೋಡಿ, ವಿಜಯಪುರ ಜಿಲ್ಲೆಯ ತಿಕೋಟಾ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ತ್ಯಾಗರ್ತಿ, ಹಾಸನ ಜಿಲ್ಲೆ ಬೇಲೂರಿನಲ್ಲಿ ತಲಾ 3 ಸೆಂ.ಮೀ ಮಳೆ ಸುರಿದಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಹಾವೇರಿ ನಗರ, ಎಪಿಎಂಸಿ ಆವರಣ, ಬಾಗಲಕೋಟೆ ಜಿಲ್ಲೆ ರಬಕವಿ, ಧಾರವಾಡ ಜಿಲ್ಲೆ ಕುಂದಗೋಳ, ಬೆಳಗಾವಿ ಜಿಲ್ಲೆ ಸಂಕೇಶ್ವರ, ಯಡವಾಡ, ಧಾರವಾಡ ಜಿಲ್ಲೆಯ ಕಲಘಟಗಿ, ಕೊಡಗಿನ ಪೊನ್ನಂಪೇಟೆ, ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಸಿದ್ದಾಪುರ, ಬೆಳಗಾವಿಯ ಗೋಕಾಕ್‌, ಹಾವೇ ಜಿಲ್ಲೆಯ ರಾಣೆಬೆನ್ನೂರು, ಧಾರವಾಡ, ಮಂಡ್ಯ ನಗರ ಹಾಗೂ ಶ್ರೀರಂಗಪಟ್ಟಣ, ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿಯಲ್ಲಿ ತಲಾ 1 ಸೆಂ. ಮೀ ನಷ್ಟು ಮಳೆಯಾದ ವರದಿಯಾಗಿದೆ.

ಹಲವೆಡೆ ಮಳೆ ಸೂಚನೆ

ಕರ್ನಾಟಕದಲ್ಲಿ ಏ.20ರ ಶನಿವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ. ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವೆ ಇರಲಿದೆ.

ಏ. 21ರ ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು

ಏ.22ನೇ ಸೋಮವಾರ ದಕ್ಷಿಣ ಕನ್ನಡ, ಉಡುಪಿ. ಉತ್ತರ ಕನ್ನಡ,ಬೆಳಗಾವಿ, ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಸುರಿಯಬಹುದು.

ಏ. 23ನೇ ಮಂಗಳವಾರ ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಇತರೆಡೆಗಳಲ್ಲಿ ಒಣ ಹವೆ ಇರಲಿದೆ.

ಏ.21 ರವರೆಗೂ ಕರ್ನಾಟಕದ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಗಾಳಿಯ ವೇಗವು 30-40 ಡಿಗ್ರಿ ಸೆಲ್ಸಿಯಸ್‌ ತಲುಪಬಹುದು ಎಂದು ತಿಳಿಸಲಾಗಿದೆ.

ತಾಪಮಾನ ಹೇಗಿರಲಿದೆ

ಕರ್ನಾಟದಲ್ಲಿ ಮುಂದಿನ ಎರಡು ದಿನ ಗರಿಷ್ಠ ಉಷ್ಣಾಂಶದಲ್ಲಿ ಅಷ್ಟಾಗಿ ಬದಲಾವಣೆ ಇರುವುದಿಲ್ಲ.ನಂತರದ ಮೂರು ದಿನಗಳಲ್ಲಿ ಕ್ರಮೇಣವಾಗಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಏರಿಕೆ ಕಾಣಲಿದೆ. ಕರ್ನಾಟಕದಲ್ಲಿ ಶುಕ್ರವಾರ ಗರಿಷ್ಠ ಉಷ್ಣಾಂಶವು ಕಲಬುರಗಿ ಹಾಗೂ ರಾಯಚೂರಿನಲ್ಲಿ 41.4 ಡಿಗ್ರಿ ಸೆಲ್ಸಿಯಸ್‌ನಷ್ಟು ಅತ್ಯಧಿಕ ದಾಖಲಾಗಿದೆ. ವಿಜಯಪುರ ಹಾಗೂ ಕೊಪ್ಪಳದಲ್ಲೂ 40 ಡಿಗ್ರಿಯಷ್ಟಿದ್ದರೆ, ದಾವಣಗೆರೆ, ಗದಗ, ಬಾಗಲಕೋಟೆ ಹಾಗೂ ಮಂಡ್ಯದಲ್ಲಿ 39 ಡಿಗ್ರಿ ಸೆಲ್ಸಿಯಸ್‌ ನಷ್ಟಿತ್ತು.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಅಂದರೆ ಭಾನುವಾರದವರೆಗೆ ಮಳೆಯಾಗಬಹುದು. ಬೆಂಗಳೂರು ನಗರ ಹಾಗೂ ಸುತ್ತಮತ್ತಲಿನ ಪ್ರದೇಶದಲ್ಲಿ ಶನಿವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಿನದ ಗರಿಷ್ಠ ಉಷ್ಣಾಂಶವು 36 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ನಷ್ಟು ಇರಲಿದೆ. ಭಾನುವಾರವೂ ಕೂಡ ಇದೇ ರೀತಿಯ ಹವಾಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ