logo
ಕನ್ನಡ ಸುದ್ದಿ  /  ಕರ್ನಾಟಕ  /  ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ

ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ

Umesh Kumar S HT Kannada

Jul 20, 2024 10:58 AM IST

google News

ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಘೋಷಿಸಿದ್ದಾರೆ.

  • ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ ಮಾಡಲಾಗಿದ್ದು, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಣೆಯಾಗಿದ್ದು ಧಾರಕಾರ ಮಳೆ ಮುಂದುವರಿದಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಗಂಗಾವಳಿ ನದಿಯಲ್ಲಿ ತೇಲಿ ಹೋದ ಎಲ್‌ಪಿಜಿ ಟ್ಯಾಂಕರ್‌ನಿಂದ ಅನಿಲ ಖಾಲಿ, ಸಡಗೇರಿ ಸುತ್ತಮುತ್ತಲಿನ ಪ್ರದೇಶ ಸುರಕ್ಷಿತ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಘೋಷಿಸಿದ್ದಾರೆ.

ಕಾರವಾರ: ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್ ಅನ್ನು ಹೆಚ್‌ಪಿಸಿಎಲ್, ಬಿಪಿಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಅವಕಾಶಗೊಳಿಸಲಾಗಿದ್ದು, ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಮುಂಗಾರು ಮಳೆ ತೀವ್ರಗೊಂಡ ಕಾರಣ, ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಮಾತನಾಡಿದರು. ಅಂಕೋಲ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತ ಪ್ರದೇಶದಲ್ಲಿ ರಸ್ತೆಯ ಮೇಲಿದ್ದ ಮಣ್ಣು ತೆರವು ಕಾರ್ಯಾಚರಣೆ ಮುಗಿದಿದ್ದು, ಹೆದ್ದಾರಿಯ ಒಂದು ಬದಿಯನ್ನು ಮುಕ್ತಗೊಳಿಸಲಾಗಿದ್ದು, ಆದರೆ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಿಲ್ಲ ಎಂದರು.

ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ ಎಂದರು.

ಉತ್ತರ ಕನ್ನಡದಲ್ಲಿ ಭಾರಿ ಮಳೆ, ನಿರಾಶ್ರಿತರಿಗಾಗಿ 30 ಕಾಳಜಿ ಕೇಂದ್ರಗಳು

ಜಿಲ್ಲೆಯಲ್ಲಿ ಪ್ರಸ್ತುತ ,ಕಾರವಾರ ತಾಲೂಕಿನ 6 , ಅಂಕೋಲದ 6, ಕುಮಟಾದ 5, ಹೊನ್ನಾವರದ 13 ಸೇರಿದಂತೆ ಒಟ್ಟು 30 ಕಾಳಜಿ ಕೇಂದ್ರಗಳಲ್ಲಿ 2373 ಮಂದಿ ಆಶ್ರಯ ಒದಗಿಸಲಾಗಿದ್ದು, ಅಗತ್ಯ ಮೂಲ ಸೌಲಭ್ಯಗಳು ಹಾಗೂ ವೈದ್ಯಕೀಯ ನೆರವು ಒದಗಿಸಲಾಗಿದೆ

ಗುಡ್ಡ ಕುಸಿತ ಪ್ರದೇಶದಲ್ಲಿ ಇದುವರೆಗೆ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಜ್ ಲಾರಿ ಮತ್ತು ಚಾಲಕ ಸಿಲುಕಿರುವ ಸಾದ್ಯತೆಯಿದ್ದು ಈ ಬಗ್ಗೆ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದ ಮೂಲಕ ಮೆಟಲ್ ಡಿಕ್ಟೇಟರ್ ಮೂಲಕ ವಾಹನದ ತಪಾಸಣೆ ಕೈಗೊಳ್ಳಲಾಗಿದೆ, ನೇವಿ ಅಧಿಕಾರಿಗಳು , ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ , ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಮೀಪದ ನದಿಯಲ್ಲಿ ಕೂಡಾ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಮಾಹಿತಿ ನೀಡಿದ್ದಾರೆ.

ಇನ್ಸ್‌ಪೆಕ್ಟರ್ ಜನರಲ್ ಅಫ್ ಪೊಲೀಸ್ ಅಮಿತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸುರಕ್ಷಿತ ಕಾರ್ಯಚರಣೆಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪರಿಶೀಲನೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ,ಭಟ್ಕಳ ಉಪ ವಿಭಾಗಾಧಿಕಾರಿ ಡಾ. ನಯನ ಮತ್ತು ವಿವಿಧ ಅಧಿಕಾರಿಗಳು ಇದ್ದರು.

ಕೆಲಸಕ್ಕೆ ರಜೆ ಹಾಕಿದ್ದ ಕಾರಣ ಜೀವ ಉಳಿಯುತು

ದುರಂತ ಸಂಭವಿಸಿದ್ದ ದಿನ ಕೆಲಸಕ್ಕೆ ರಜೆ ಹಾಕಿದ್ದ ಕಾರಣ ತಮ್ಮ ಜೀವ ಉಳಿಸಿಕೊಂಡವರು ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ ಉಳುವರೆ ಗ್ರಾಮದ ಹುಲಿಯಪ್ಪಾ ಗೌಡ.

ಶಿರೂರು ಗುಡ್ಡ ಕುಸಿತ ಪ್ರದೇಶದ ಬಳಿ ಇದ್ದ ಹೋಟೆಲ್ ಸಂಪೂರ್ಣ ಧರಾಶಾಹಿಯಾಗಿತ್ತು. ಹುಲಿಯಪ್ಪಾ ಗೌಡ ಅಂದು ಅಲ್ಲಿದ್ದರೆ, ಪ್ರಾಣ ಕಳೆದುಕೊಳ್ಳುತ್ತಿದ್ದರು. ಹುಲಿಯಪ್ಪಾ ಅವರು ಹೆದ್ದಾರಿ ಪಕ್ಕದ ಹೊಟೇಲ್ಗೆ ನಿತ್ಯವೂ ದೋಣಿ ಮೂಲಕ ಗಂಗಾವಳಿ ನದಿ ದಾಟಿ ಹೆಲ್ಪರ್ ಕೆಲಸಕ್ಕೆ ಹಾಜರಾಗುತ್ತಿದ್ದರು. ಆದರೆ ಕಳೆದ ಒಂದು ವಾರದಿಂದ ತೋಟದ ಕೆಲಸ ಇರುವುದರಿಂದ ರಜೆ ಹಾಕಿದ್ದರು. ಹೀಗಾಗಿ ದುರಂತ ಸಂಭವಿಸಿದ್ದ ದಿನ ಕೆಲಸಕ್ಕೆ ಹೋಗಿರಲಿಲ್ಲ.‌

ತೋಟದ ಕೆಲಸ ಇರುವ ಕಾರಣ ರಜೆ ಹಾಕಿ ಜೀವ ಉಳಿಸಿಕೊಂಡಿದ್ದೇನೆ ಎಂದು ಈಗಲೂ ಆ ಘಟನೆಯನ್ನು ನೆನಪಿಸಿಕೊಂಡು ಹೇಳುತ್ತಾರೆ ಅವರು. ನಾನು ಕೆಲಸಕ್ಕೆ ಹೋಗದ ಕಾರಣ ಸಂಬಂಧಿಕರು ಅಂಗಡಿಗೆ ಬಂದಿದ್ದರು. ನೋಡ ನೋಡುತ್ತಲೇ ಗುಡ್ಡ ಕುಸಿಯಿತು. ಪಕ್ಕದಲ್ಲೇ ನದಿ ಇರುವುದರಿಂದ ಹಲವರು ನಾಪತ್ತೆಯಾಗಿದ್ದಾರೆ. ನಾವು ಗ್ಯಾಸ್ ಬ್ಲಾಸ್ಟ್ ಆಗಿದೆ ಎಂದುಕೊಂಡೆವು. ಆದರೆ ಹಲವು ಮನೆಗಳು ನದಿ ನೀರಿಗೆ ಕೊಚ್ಚಿ ಹೋಗಿವೆ" ಎಂದು ಅವರು ಹೇಳಿದ್ದಾರೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ