ಕನ್ನಡ ಸುದ್ದಿ  /  ಕರ್ನಾಟಕ  /  Kashi Yatra 2022: ನ.11ಕ್ಕೆ ಮೊದಲ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆ; ಪ್ರಧಾನಿ ಮೋದಿ ಅವರಿಂದ ಹಸಿರು ನಿಶಾನೆ

Kashi yatra 2022: ನ.11ಕ್ಕೆ ಮೊದಲ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆ; ಪ್ರಧಾನಿ ಮೋದಿ ಅವರಿಂದ ಹಸಿರು ನಿಶಾನೆ

HT Kannada Desk HT Kannada

Nov 09, 2022 04:53 PM IST

ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪರಿಶೀಲಿಸಿದ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ

  • Kashi yatra 2022: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲಿನ ಮೊದಲ ಯಾತ್ರೆ ನ.11ಕ್ಕೆ ಶುರುವಾಗಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ನ.23ರ ಯಾತ್ರೆಯ ಟಿಕೆಟ್‌ ಕೂಡ ಸೋಲ್ಡ್‌ ಔಟ್‌. ಇಲ್ಲಿದೆ ವಿವರ ಸುದ್ದಿ. 

ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪರಿಶೀಲಿಸಿದ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ
ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪರಿಶೀಲಿಸಿದ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ

ಬೆಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷೆಯ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್‌ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Forest News: ನಾಗರಹೊಳೆಯಲ್ಲಿ ಮಿತಿ ಮೀರಿದ ಪ್ಲಾಸ್ಟಿಕ್‌ ಹಾವಳಿ, ಕಣ್ಣಾರೆ ಕಂಡ ಅರಣ್ಯ ಸಚಿವರು

Prajwal Revanna: ಪ್ರಜ್ವಲ್‌ ರೇವಣ್ಣ ಬಂಧಿಸಿ ಕರೆ ತನ್ನಿ; ಸಿಎಂಗೆ ಪತ್ರ ಬರೆದ ಕರ್ನಾಟಕದ ಚಿಂತಕರು, ಸಾಹಿತಿಗಳು

ಹಾಸನ ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣ ಇಂದು ತಡರಾತ್ರಿ ಬೆಂಗಳೂರಿಗೆ ವಾಪಸ್‌ ಎನ್ನುತ್ತಿದೆ ವರದಿ, ಲುಫ್ತಾನ್ಸಾ ಟಿಕೆಟ್‌ ವೈರಲ್‌

Bangalore Water: ಬೆಂಗಳೂರು ಸರ್ಕಾರಿ ಶಾಲೆ, ಸಂಸ್ಥೆಗಳಲ್ಲೂ ಮಳೆ ಕೊಯ್ಲು, ಇಂಗುಗುಂಡಿ; ಜಲಮಂಡಳಿ ಯೋಜನೆ

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಇದು. ಕಾಶಿ ದರ್ಶನ ರೈಲು ಪ್ಯಾಕೇಜ್‌ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್‌ ನಿರ್ಮಾಣಗೊಂಡಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ. ನನ್ನ ಆಶಯಕ್ಕೆ ಬೆನ್ನುಲಾಗಿ ನಿಂತ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆಗಳನ್ನ ಸಲ್ಲಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಎರಡನೇ ಟ್ರಿಪ್‌ ಟಿಕೆಟ್‌ ಕೂಡಾ ಸೋಲ್ಡ್‌ ಔಟ್‌

ಎರಡನೇ ಟ್ರಿಪ್‌ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಯ ನ.23ಕ್ಕೆ ನಿಗದಿಯಾಗಿದ್ದು, ಅದರ ಟಿಕೆಟ್‌ ಬುಕ್ಕಿಂಗ್‌ ಪ್ರಾರಂಭ ಮಾಡಿದ ಎರಡೇ ದಿನಗಳಲ್ಲಿ ಎಲ್ಲ ಟಿಕೆಟ್‌ ಗಳು ಸೋಲ್ಡ್‌ ಔಟ್‌ ಆಗಿವೆ. ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿ. ಇನ್ನು ಕೆಲವೇ ದಿನಗಳಲ್ಲಿ ಮುಂದಿನ ಟ್ರಿಪ್‌ಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ-ಕಾಶಿ ದರ್ಶನ್‌ ಯಾತ್ರೆ ಟಿಕೆಟ್‌ ಬುಕ್ಕಿಂಗ್‌; ಇಲ್ಲಿದೆ ಪ್ರವಾಸ ಯೋಜನೆ, ಟಿಕೆಟ್‌ ದರ ವಿವರ

ರಾಜ್ಯ ಸರ್ಕಾರದ ಬಹುನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಕರ್ನಾಟಕ- ಭಾರತ್‌ ಗೌರವ್‌ ಕಾಶಿ ದರ್ಶನ್‌ ಯಾತ್ರೆಗೆ ಮುಂಗಡ ಬುಕ್ಕಿಂಗ್‌ ಶುರುವಾಗಿದೆ. ನವೆಂಬರ್‌ 11ಕ್ಕೆ ಮತ್ತು ನವೆಂಬರ್‌ 23ಕ್ಕೆ ರೈಲು ಬೆಂಗಳೂರಿನಿಂದ ಹೊರಡಲಿದೆ. ಅಯೋಧ್ಯೆ, ಪ್ರಯಾಗರಾಜ್‌ ಮತ್ತು ವಾರಾಣಸಿಗೆ ಯಾತ್ರಿಕರನ್ನು ಕರೆದೊಯ್ಯಲಿದೆ. ಈ ಪ್ರವಾಸಕ್ಕೆ ರಾಜ್ಯ ಸರ್ಕಾರ 5,000 ರೂಪಾಯಿ ಸಹಾಯಧನವನ್ನೂ ಕೊಡುತ್ತಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ