logo
ಕನ್ನಡ ಸುದ್ದಿ  /  ಕರ್ನಾಟಕ  /  Sivankutty-bc Nagesh: ಕೇರಳ-ಕರ್ನಾಟಕ ಶಿಕ್ಷಣ ಸಚಿವರ ಭೇಟಿ.. ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ

Sivankutty-BC Nagesh: ಕೇರಳ-ಕರ್ನಾಟಕ ಶಿಕ್ಷಣ ಸಚಿವರ ಭೇಟಿ.. ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ

HT Kannada Desk HT Kannada

Jan 20, 2023 10:14 PM IST

ಕೇರಳ-ಕರ್ನಾಟಕ ಶಿಕ್ಷಣ ಸಚಿವರ ಭೇಟಿ

    • ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಕೇರಳದ ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಚಿವರಾದ ಶಿವನ್ ಕುಟ್ಟಿ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರನ್ನು ಶುಕ್ರವಾರ (ಜ.20) ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದರು.
ಕೇರಳ-ಕರ್ನಾಟಕ ಶಿಕ್ಷಣ ಸಚಿವರ ಭೇಟಿ
ಕೇರಳ-ಕರ್ನಾಟಕ ಶಿಕ್ಷಣ ಸಚಿವರ ಭೇಟಿ

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಕೇರಳದ ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಚಿವರಾದ ಶಿವನ್ ಕುಟ್ಟಿ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರನ್ನು ಶುಕ್ರವಾರ (ಜ.20) ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದರು.

ಟ್ರೆಂಡಿಂಗ್​ ಸುದ್ದಿ

Ambulance Strike: ಅನಿರ್ಧಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿದ 108 ಆರೋಗ್ಯ ಕವಚ ಸಿಬ್ಬಂದಿ; ಸಚಿವರ ಮಾತುಕತೆ ಯಶಸ್ವಿ

ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಕರ್ನಾಟಕದ 2ನೇ ಹಂತದ ಮತದಾನ ಮುಕ್ತಾಯ, ಘರ್ಷಣೆ, ಬಿಸಿಲ ನಡುವೆ ಭಾರೀ ಹಕ್ಕು ಚಲಾವಣೆ

Bangalore News: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಬಂಧನ; ಎಸ್‌ಐಟಿ ವಿಚಾರಣೆಗೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ

ವಿಧಾನಸೌಧದ ಕಚೇರಿಯಲ್ಲಿ ನಡೆದ ಭೇಟಿ ವೇಳೆ ಎರಡೂ ರಾಜ್ಯಗಳ ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಶಾಲೆಗಳು, ಕೊಠಡಿ ಮತ್ತು ಮೂಲಸೌಕರ್ಯಗಳು, ಶಿಕ್ಷಣದ ಗುಣಮಟ್ಟ, ಸ್ಮಾರ್ಟ್ ಕ್ಲಾಸ್, ಆನ್-ಲೈನ್ ಕ್ಲಾಸ್, ಶಿಕ್ಷಕರು, ಪರೀಕ್ಷಾ ಪದ್ಧತಿ, ನೇಮಕಾತಿ, ಮಧ್ಯಾಹ್ನದ ಬಿಸಿಯೂಟ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಚಿವರು ವಿಚಾರ ವಿನಿಮಯ ಮಾಡಿಕೊಂಡರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಆರ್. ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಹಾಗೂ ಕೇರಳ ರಾಜ್ಯದ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಜೀವನ್ ಬಾಬು ಸೇರಿದಂತೆ ಇನ್ನಿತರ ಅಧಿಕಾರಿಗಳು ಚರ್ಚೆ ವೇಳೆ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಿಗೆ ಹೆರಿಗೆ -ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಕೊಚ್ಚಿನ್​ ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ಘೋಷಿಸಿದ ಹಾಗೂ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿನಿಯರಿಗೆ ಹೆರಿಗೆ ರಜೆ ಘೋಷಿಸಿದ ಬೆನ್ನಲ್ಲೇ ಕೇರಳ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಹಾಗೂ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆಯನ್ನು ನೀಡುವುದಾಗಿ ಘೋಷಿಸಿದೆ.

“ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ. ನಮ್ಮ ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಸಂಸ್ಥೆಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ಮತ್ತು ಹೆರಿಗೆ ರಜೆಗಳನ್ನು ನೀಡಲಾಗುವುದು, ಲಿಂಗ ಸಮಾನತೆಯುಳ್ಳ ಸಮಾಜವನ್ನು ಸಾಕಾರಗೊಳಿಸುವ ಎಲ್‌ಡಿಎಫ್ ಸರ್ಕಾರದ ಬದ್ಧತೆಯನ್ನು ಇದು ಪುನರುಚ್ಚರಿಸುತ್ತದೆ" ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

ಈವರೆಗೆ ಶೆ.75ರಷ್ಟು ಹಾಜರಾತಿ ಇದ್ದವರಿಗೆ ಮಾತ್ರ ಸೆಮಿಸ್ಟರ್​ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ವಿದ್ಯಾರ್ಥಿನಿಯರು ಮುಟ್ಟಿನ ರಜೆಯನ್ನು ಬಳಸಿಕೊಂಡು ಶೇ.73 ರಷ್ಟು ಹಾಜರಾತಿ ಇದ್ದರೂ ಪರೀಕ್ಷೆ ಬರೆಯಬಹುದಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವೆ ಡಾ.ಆರ್.ಬಿಂದು ತಿಳಿಸಿದ್ದಾರೆ. ಕೆಲ ವಿದ್ಯಾರ್ಥಿನಿಯರು ಮದುವೆ ಬಳಿಕವೂ ವ್ಯಾಸಂಗ ಮುಂದುವರೆಸಿರುತ್ತಾರೆ. 18 ವರ್ಷ ಮೇಲ್ಪಟ್ಟ ಅಂತಹ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ ಸಿಗಲಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು