logo
ಕನ್ನಡ ಸುದ್ದಿ  /  ಕರ್ನಾಟಕ  /  Kiadb Land Allotment: ಕೆಐಎಡಿಬಿ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ

KIADB Land Allotment: ಕೆಐಎಡಿಬಿ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ

HT Kannada Desk HT Kannada

Sep 06, 2022 04:26 PM IST

google News

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ

    • ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ (KIADB Land Allotment) ಸರಳೀಕರಣಗೊಳಿಸಿದೆ. ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್‌ ಲ್ಯಾಂಡ್ ಅಲಾಟ್‌ಮೆಂಟ್’ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.  
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ

ಬೆಂಗಳೂರು: ಕೆಐಎಡಿಬಿಯ ಮೂಲಕ ಭೂಮಿ ಹಂಚಿಕೆ ವ್ಯವಸ್ಥೆ ಕರ್ನಾಟಕ ಕೈಗಾರಿಕಾ ಇಲಾಖೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ.

ಭೂಪರಿಶೋಧನಾ ಸಮಿತಿಯಲ್ಲಿ(LAC) 10 ಎಕರೆವರೆಗಿನ ಭೂಮಿ ಹಂಚಿಕೆ ಮಾಡುವುದಕ್ಕೆ ಪರಿಶೀಲನೆ ಮಾಡುವ ಅವಶ್ಯಕತೆ ಇಲ್ಲ ಎಂದು ಹೊಸ ಆದೇಶ ಸ್ಪಷ್ಟಪಡಿಸಿದೆ.

ಏಕಗವಾಕ್ಷಿ ಅನುಮೋದನಾ ವ್ಯವಸ್ಥೆಯನ್ನು ಸರಳೀಕರಣಗೊಳಿಸುವ ಮೂಲಕ ಸುಲಲಿತಕ್ಕೆ ವ್ಯವಹಾರ ಹಾಗೂ ಪಾರದರ್ಶಕತೆಗೆ ಒತ್ತು ನೀಡಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ತ್ವರಿತವಾಗಿ ಅನುಮೋದನೆ ಪಡೆಯಲು ಸಾಧ್ಯವಾಗಲಿದೆ. ಹೂಡಿಕೆದಾರರ ಅಗತ್ಯಗಳನ್ನು ಅರ್ಥಮಾಡಿಕೊಂಡು ಭೂಮಂಜೂರಾತಿ ಪ್ರಕ್ರಿಯೆಯಲ್ಲಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಸಚಿವ ಡಾ. ಮುರುಗೇಶ ಆರ್‌. ನಿರಾಣಿ ಹೇಳಿದ್ದಾರೆ.

ಹೂಡಿಕೆ ಪ್ರಸ್ತಾವನೆಗಳು ಈಗ ನೇರವಾಗಿ ರಾಜ್ಯಮಟ್ಟದ ಸಮಿತಿಯ ಮುಂದ ಮಂಡನೆಯಾಗಲಿವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಗಳಿಗೆ ಅಗತ್ಯವಿರುವ ಭೂಮಿಯನ್ನು ಸುಲಭವಾಗಿ ನೀಡುವುದು ಇದರ ಮುಖ್ಯ ಉದ್ದೇಶ.

ಸುಲಲಿತ ವ್ಯವಹಾರದಲ್ಲಿದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಕ್ಕೆ ಹೆಚ್ಚು ಹೆಚ್ಚುಉದ್ಯಮಗಳನ್ನುಆಕರ್ಷಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ.

" ರಾಜ್ಯದಲ್ಲಿ 10 ಎಕರೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಗಾಗಿ ಜಮೀನು ಪರಿಶೀಲನಾ ಸಮಿತಿಗೆ ಹೋಗುವ ಬದಲು ನೇರವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ ನೀಡುವುದರಿಂದ ಪ್ರಸ್ತಾವನೆಗಳಿಗೆ ತ್ವರಿತವಾಗಿ ಅನುಮೋದನೆ ದೊರೆಯುತ್ತದೆ. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮದಾರರಿಗೆ ಅನುಕೂಲವಾಗುವುದು"ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್‌. ನಿರಾಣಿ ಹರ್ಷ ವ್ಯಕ್ತಪಡಿಸಿದರು.

ನವೆಂಬರ್‌ ಆರಂಭದಲ್ಲಿ “GIM”

ರಾಜ್ಯದಲ್ಲಿ ಬರುವ ನವೆಂಬರ್ 2, 3 ಮತ್ತು 4 ರಂದು
ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) ನಡೆಯಲಿದೆ. ಈ ಮಹತ್ವಾಕಾಂಕ್ಷೆಯ ಹೂಡಿಕೆದಾರರ ಸಭೆಗೆ ಪೂರ್ವಭಾವಿಯಾಗಿ ಇಲಾಖೆಯು ಈ ನಿರ್ಧಾರವನ್ನು ಕೈಗೊಂಡಿದೆ.

ಆದಾಗ್ಯೂ, ಹತ್ತು ಎಕರೆಗಿಂತ ಹೆಚ್ಚಿನ ವಿಸ್ತೀರ್ಣ ಮತ್ತು15 ಕೋಟಿ ರೂಪಾಯಿಯಿಂದ 500 ಕೋಟಿ ರೂಪಾಯಿವರೆಗಿನ ಹೂಡಿಕೆಯ ಪ್ರಸ್ತಾವನೆಗಳನ್ನು ಭೂ ಲೆಕ್ಕ ಪರಿಶೋಧನಾ ಸಮಿತಿಯ ಮುಂದೆ ಮಂಡಿಸಬಹುದು. ಇಲ್ಲಿ ಅದಕ್ಕೆ ಅಂಕಿತ ಬಿದ್ದ ನಂತರ, ಅಂತಿಮ ಅನುಮೋದನೆಗಾಗಿ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿಯ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ.

ಕಾಯುವಿಕೆ ತಪ್ಪಿಸಲಿದೆ ಹೊಸ ಆದೇಶ

ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ ಬೆಳವಣಿಗೆ ಹಿತದೃಷ್ಟಿಯಿಂದ 10 ಎಕರೆವರೆಗೆ ಜಮೀನು ಮಂಜೂರಾತಿ ಕೋರಿ ಸಲ್ಲಿಸುವ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ನೇರವಾಗಿ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯ ಮುಂದೆ ಅನುಮೋದನೆಗಾಗಿ ಮಂಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಭೂಮಿ ಪರಿಶೋಧನಾ ಸಮಿತಿಯ (LAC) ಅನುಮೋದನೆಗಾಗಿ ಇನ್ನು ಮುಂದೆ ತಿಂಗಳುಗಟ್ಟಲೆ ಕಾಯಬೇಕಾಗಿಲ್ಲ

ರಾಜ್ಯದಲ್ಲಿ 10 ಎಕರೆ ಜಮೀನು ಮಂಜೂರು ಕೋರುವ ಕೈಗಾರಿಕೆಗಳು ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಾಗಿದ್ದು, ಇವುಗಳನ್ನು ತ್ವರಿತಗತಿಯಲ್ಲಿ ಅನುಮೋದನೆ ನೀಡಬೇಕೆಂಬುದು ರಾಜ್ಯದ ಕೈಗಾರಿಕಾ ಉದ್ದಿಮೆದಾರರ ಸಂಘ ಸಂಸ್ಥೆಗಳ ಬಹುದಿನಗಳ ಬೇಡಿಕೆಯಾಗಿತ್ತು.

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ/ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ/ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆಗಳ ಮುಂದೆ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ಮಂಡಿಸುವ ಮೊದಲು ಜಮೀನು ಪರಿಶೀಲನಾ ಸಮಿತಿ ಮುಂದೆ ಪ್ರಸ್ತಾವನೆ ಮಂಡಿಸಬೇಕಿತ್ತು.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ