Basavaraj Bommai: 2A ಮೀಸಲಾತಿ: ರಾಜ್ಯ ಹಿಂದುಳಿದ ಆಯೋಗದ ಮಂಧ್ಯಂತರ ವರದಿ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
Dec 22, 2022 01:17 PM IST
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
- 2A ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಸಲ್ಲಿಸಿದ ಮಧ್ಯಂತರ ವರದಿ ಬಗ್ಗೆ, ಕಾನೂನು ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಕುರಿತು ಹೇಳಿದ್ದೇನು ಎಂಬುದರ ಮಾಹಿತಿ ಇಲ್ಲಿದೆ.
ಬೆಳಗಾವಿ: 2A ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಸಲ್ಲಿಸಿದ ಮಧ್ಯಂತರ ವರದಿ ಬಗ್ಗೆ, ಕಾನೂನು ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಇಂದು(ಡಿ.22-ಗುರುವಾರ) ಮಾತನಾಡಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ತಮ್ಮನ್ನು ಭೇಟಿ ಮಾಡಿ ಮಧ್ಯಂತರ ವರದಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಆದರೆ ವರದಿ ಬಗ್ಗೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ರಾಜ್ಯದ ಕಾನೂನು ಸಚಿವರ ಜೊತೆ ಚರ್ಚಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು. ಕಾನೂನಾತ್ಮಕ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ಶೀಘ್ರದಲ್ಲೇ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದರು.
ನಮ್ಮ ಸರ್ಕಾರ ರಾಜ್ಯದ ಎಲ್ಲಾ ಜನಸಮುದಾಯಗಳ ವಿಶ್ವಾಸಗಳಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲಾ ಜನಸಮುದಾಯಗಳಿಗೆ ನ್ಯಾಯ ಒದಗಿಸುವುದೇ ತಮ್ಮ ಸರ್ಕಾರದ ಗುರಿ ಎಂದು ಬಸವರಾಜ ಬೊಮ್ಮಾಯಿ ನುಡಿದರು.
ವರದಿಯಲ್ಲಿರುವ ಅಂಶಗಳ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಸರ್ಕಾರಕ್ಕೆ ಸಲ್ಲಿಕೆಯಾಗುವ ವರದಿಗೆ ಒಪ್ಪಿಗೆ ನೀಡಿದ ಬಳಿಕವೇ, ಅದರಲ್ಲಿರುವ ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಲಾಗುತ್ತದೆ. ಅದರಂತೆ ಜಯಪ್ರಕಾಶ್ ಹೆಗಡೆ ಸಲ್ಲಿಸಿರುವ ವರದಿಯನ್ನೂ ಕೂಲಂಕುಷವಾಗಿ ಅಧ್ಯಯನ ನಡೆಸಿದ ಬಳಿಕವೇ, ರಾಜ್ಯದ ಜನರ ಮುಂದಿಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಈ ವಿಷಯದಲ್ಲಿ ವಿಪಕ್ಷ ನಾಯಕರ ಅಭಿಪ್ರಾಯವನ್ನೂ ನಾವು ಸಂಗ್ರಹಿಸುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ದಿಸೆಯಲ್ಲಿ ಮುಂದಡಿ ಇಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇನ್ನು ದೇಶದಲ್ಲಿ ಮತ್ತೆ ಕೋವಿಡ್ ಭೀತಿ ಎದುರಾಗಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಕೆಲವೊಂದು ಸೂಚನೆಗಳನ್ನು ನೀಡಿದೆ. ನಾವು ಈ ಸೂಚನೆಗಳನ್ನು ಪ್ರಾಮಾಣಿಕವಾಗಿ ಪಾಲನೆ ಮಾಡುವ ಮೂಲಕ, ಕೋವಿಡ್ ಸಂಭಾವ್ಯ ಹಾವಳಿಯನ್ನು ತಡೆಗಟ್ಟುತ್ತೇವೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಧೈರ್ಯ ನೀಡಿದರು.
ಅಂತಾಷ್ಟ್ರೀಯ ಮಟ್ಟದಲ್ಲಿ ಕೋವಿಡ್ ಹರಡುವಿಕೆ ಆರಂಭವಗಿದೆ. ವಿವಿಧ ದೇಶಗಳಲ್ಲಿ ಕೋವಿಡ್‌ನ ರೂಪಾಂತರ ತಳಿಗಳು ಕಾಣಿಸಿಕೊಳ್ಳುತ್ತಿವೆ. ಹೊಸ ರೂಪಾಂತರಿ ತಳಿಯು ಅತ್ಯಂತ ವೇಗದಿಂದ ಹರಡುತ್ತಿದೆ ಎಂಬ ಮಾಹಿತಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು(ಡಿ.22-ಗುರುವಾರ) ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಇಂದಿನ ಪ್ರಮುಖ ಸುದ್ದಿಗಳು
China-Taiwan Conflict: 24 ಗಂಟೆಗಳಲ್ಲಿ 39 ಯುದ್ಧ ವಿಮಾನಗಳು, 3 ಯುದ್ಧ ನೌಕೆಗಳನ್ನು ತೈವಾನ್ ಕಡೆಗೆ ತಿರುಗಿಸಿದ ಚೀನಾ!
ಚೀನಾದ ಸೇನೆಯು ಕೇವಲ 24 ಗಂಟೆಗಳ ಅವಧಿಯಲ್ಲಿ, 39 ಯುದ್ಧ ವಿಮಾನಗಳು ಮತ್ತು ಮೂರು ಯುದ್ಧನೌಕೆಗಳನ್ನು ತೈವಾನ್‌ನತ್ತ ರವಾನಿಸಿದೆ. ಈ ಕುರಿತು ಮಾಹಿತಿ ನೀಡಿರುವ ತೈವಾನ್ ರಕ್ಷಣಾ ಸಚಿವಾಲಯ, ಚೀನಾದ ಈ ನಡೆ ತೈವಾನ್ ಜಲಸಂಧಿಯಲ್ಲಿ ಮತ್ತೆ ಎಚ್ಚರಿಕೆಯ ಕರೆಗಂಟೆಯನ್ನು ಮೊಳಗಿಸಿದೆ ಎಂದು ಹೇಳಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.
CM Bommai on Border dispute: ಮಹಾರಾಷ್ಟ್ರದ ವಿಪಕ್ಷ ನಾಯಕರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಸಿಎಂ ಬೊಮ್ಮಾಯಿ ಟೀಕೆ
ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನ ಸಭೆಯಲ್ಲಿ ಮತ್ತು ಹೊರಗಡೆ ಬಹಳ ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ ಸಂತುಲನ ಕಳೆದುಕೊಂಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಟೀಕಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.
ವಿಭಾಗ