logo
ಕನ್ನಡ ಸುದ್ದಿ  /  ಕರ್ನಾಟಕ  /  Employment News: ಮಡಿಕೇರಿಯಲ್ಲಿ ಇಂದು ಉದ್ಯೋಗಮೇಳ, ಏನೆಲ್ಲಾ ಉದ್ಯೋಗದ ಅವಕಾಶಗಳುಂಟು?

Employment News: ಮಡಿಕೇರಿಯಲ್ಲಿ ಇಂದು ಉದ್ಯೋಗಮೇಳ, ಏನೆಲ್ಲಾ ಉದ್ಯೋಗದ ಅವಕಾಶಗಳುಂಟು?

Umesha Bhatta P H HT Kannada

Jul 30, 2024 11:48 AM IST

google News

ಕೊಡಗಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

    • Kodagu News:  ಮಡಿಕೇರಿ ನಗರದಲ್ಲಿ ಉದ್ಯೋಗ ಮೇಳವನ್ನು( Madikeri employment mela) ಆಯೋಜಿಸಲಾಗಿದ್ದು, ಹಲವು ಕಂಪೆನಿಗಳು ಆಯ್ಕೆ ಮಾಡಿಕೊಳ್ಳಲಿವೆ.
ಕೊಡಗಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕೊಡಗಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ''ಉದ್ಯೋಗ ಮೇಳ' ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ರಾಣಿ ಮದ್ರಾಸ್ ಮೈಸೂರು, ಹಿಮಂತ್ಸಾ ಸಿಂಗ್ ಕಾ ಲಿನೆನ್ ಹಾಸನ, ತಾಜ್ ರೆಸಾರ್ಟ್ ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟೆಟೆಕ್, ಮಡಿಕೇರಿ, ಎಸ್ಎಲ್ಎನ್ ಕಾಫಿ ವರ್ಕ್ಸ್ ಲಿ. ಕೂಡಿಗೆ, ಮುತ್ತೂಟ್ ಪೈನಾನ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಹರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್. ಸಿ. ಕಡಿಮೆ, ಎಸ್.ಎಸ್.ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿವಿಧ ತರಗತಿ ಪ್ರವೇಶಾತಿ ಆರಂಭ

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಮುಕ್ತ ವಿಶ್ವವಿದ್ಯಾಲಯವು ನಿಮ್ಮ ಮನೆಯೇ ನಿರಂತರ ಪಾಠಶಾಲೆ ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂ) ಹಾಗು ಸ್ನಾತಕೋತ್ತರ ಪಿ.ಜಿ. ಕೋರ್ಸ್ ಗಳಾದ (ಎಂ.ಎ, ಎಂ.ಎ- ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್,ಡಬ್ಲೂ) (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ.

ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ಕೋರಿದ್ದಾರೆ. ಮಾಹಿತಿಗೆ 9844395986, 8296215714, 9483570900, 7411233007 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ