logo
ಕನ್ನಡ ಸುದ್ದಿ  /  ಕರ್ನಾಟಕ  /  Koti Kanta Gayana: ಚಿಕ್ಕಮಗಳೂರಲ್ಲಿ ಕೋಟಿ ಕಂಠ ಗಾಯನಕ್ಕೆ ದನಿಗೂಡಿಸುತ್ತ ಹೆಜ್ಜೆ ಹಾಕಿದ ಶಾಸಕ ಸಿ.ಟಿ.ರವಿ: ಆ ವಿಡಿಯೋ ನೀವೂ ನೋಡ್ತೀರಲ್ಲ!

Koti Kanta Gayana: ಚಿಕ್ಕಮಗಳೂರಲ್ಲಿ ಕೋಟಿ ಕಂಠ ಗಾಯನಕ್ಕೆ ದನಿಗೂಡಿಸುತ್ತ ಹೆಜ್ಜೆ ಹಾಕಿದ ಶಾಸಕ ಸಿ.ಟಿ.ರವಿ: ಆ ವಿಡಿಯೋ ನೀವೂ ನೋಡ್ತೀರಲ್ಲ!

HT Kannada Desk HT Kannada

Oct 28, 2022 01:56 PM IST

google News

ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಚಿಕ್ಕಮಗಳೂರಲ್ಲೂ ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್‌, ಶಾಸಕ ಸಿ.ಟಿ.ರವಿ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.

    • Koti Kanta Gayana: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಚಿಕ್ಕಮಗಳೂರಲ್ಲೂ ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್‌, ಶಾಸಕ ಸಿ.ಟಿ.ರವಿ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು. ಸಿ.ಟಿ.ರವಿ ಹಾಡಿನ ಜತೆಗೆ ಹೆಜ್ಜೆ ಹಾಕಿದ್ದು ಗಮನಸೆಳೆಯಿತು. ವಿಡಿಯೋ ಇಲ್ಲಿದೆ. 
ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಚಿಕ್ಕಮಗಳೂರಲ್ಲೂ ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್‌, ಶಾಸಕ ಸಿ.ಟಿ.ರವಿ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಚಿಕ್ಕಮಗಳೂರಲ್ಲೂ ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್‌, ಶಾಸಕ ಸಿ.ಟಿ.ರವಿ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.

ಚಿಕ್ಕಮಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣ ದಲ್ಲಿ ಇಂದು ಬೆಳಗ್ಗೆ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಸಂಪನ್ನಗೊಂಡಿತು. ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಬೈರತಿ), ಶಾಸಕ ಸಿ.ಟಿ.ರವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೋಟಿ ಕಂಠ ಗಾಯನದಲ್ಲಿ ಸಮೂಹದ ಜತೆಗೆ ಸಚಿವ ಬೈರತಿ ಬಸವರಾಜ್‌ ಮತ್ತು ಶಾಸಕ ಸಿ.ಟಿ.ರವಿ ಕೂಡ ದನಿಗೂಡಿಸಿದರು. ಗಾಯನದ ನಡುವೆ ಸಿ.ಟಿ. ರವಿ ಹೆಜ್ಜೆ ಹಾಕಲು ಆರಂಭಿಸಿದರು. ಸಚಿವ ಬಸವರಾಜ್‌ ಅವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿದ್ದ ದೃಶ್ಯ ಗಮನಸೆಳೆಯಿತು.

ಜಿಲ್ಲಾಧಿಕಾರಿ ಹೆಚ್.ಎನ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು,‌ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರ, ವಿಧ್ಯಾರ್ಥಿಗಳು, ಅಧಿಕಾರಿ ವರ್ಗದವರು ಭಾಗವಹಿಸಿದ್ದರು.

ಶಾಸಕ ಸಿ.ಟಿ. ರವಿ ಅವರು ಹಾಡು ಹೇಳುತ್ತ ಹೆಜ್ಜೆ ಹಾಕಿದ ದೃಶ್ಯದ ವಿಡಿಯೋ ನೀವೂ ನೋಡ್ತೀರಲ್ಲ. ಇಲ್ಲಿದೆ ಆ ವಿಡಿಯೋಃಥ

ವಿವಿಧೆಡೆ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 50,000 ಜನರು ಆಯ್ದ 6 ಹಾಡುಗಳನ್ನು ಸಾಮೂಹಿಕವಾಗಿ ಹಾಡಿದ್ದಾರೆ. ವಿಧಾನಸೌಧದ ಮೆಟ್ಟಿಲು, ಎಲ್ಲ ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು, ಆಟೊ ತಂಗುದಾಣಗಳು, ಕಾರಾಗೃಹ, ಐಟಿಬಿಟಿ ಸಂಸ್ಥೆಗಳು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲಾಲ್​ಬಾಗ್​ಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.

ಏನಿದು ಕೋಟಿ ಕಂಠ ಗಾಯನ?

ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಇಂದು ಕೋಟಿ ಕಂಠಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಿದೆ. ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿತ್ತು.

ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್‍ನಲ್ಲಿ 1.1ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ1.10 ಕೋಟಿಗೆ ತಲುಪಿದೆ. ಮುಂದಿನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ನಿನ್ನೆ ಹೇಳಿದ್ದರು.

ಯಾವ ಆರು ಹಾಡುಗಳು

1. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ

2. ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು

3. ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ

4. ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ

5. ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ

6. ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು

ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ವಿಶೇಷ

1,12,00,000 - ನೋಂದಣಿ ಮಾಡಿಸಿದವರ ಸಂಖ್ಯೆ

10,000 - ಸ್ಥಳಗಳಲ್ಲಿ ಗಾಯನಕ್ಕೆ ವೇದಿಕೆ

46 ದೇಶಗಳಿಂದ ನೋಂದಣಿ

26 ರಾಜ್ಯಗಳ ಕನ್ನಡಿಗರು

19,000 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ