logo
ಕನ್ನಡ ಸುದ್ದಿ  /  ಕರ್ನಾಟಕ  /  Ksou Admission: ರೆಗ್ಯುಲರ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಾ ಇದ್ರೂ, Ksouನಲ್ಲಿ ಶಿಕ್ಷಣ ಪಡೆಯಬಹುದು, ಪ್ರವೇಶಾತಿಗೆ 31 ಕೊನೇದಿನ

KSOU Admission: ರೆಗ್ಯುಲರ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಾ ಇದ್ರೂ, KSOUನಲ್ಲಿ ಶಿಕ್ಷಣ ಪಡೆಯಬಹುದು, ಪ್ರವೇಶಾತಿಗೆ 31 ಕೊನೇದಿನ

HT Kannada Desk HT Kannada

Mar 21, 2023 11:39 AM IST

ಕರಾಮುವಿಯ ಪ್ರಸಕ್ತ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಆರಂಭ

  • KSOU Admission: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಪ್ರಾರಂಭವಾಗಿದೆ. ರೆಗ್ಯುಲರ್‌ ಕಾಲೇಜಿಗೆ ಹೋಗಿ ಡಿಗ್ರಿ, ಪಿಜಿ ಪದವಿ ಪಡೆಯಿರಿ. ಅದರ ಜತೆಗೆ ಮುಕ್ತ ದೂರ ಶಿಕ್ಷಣದ ಮೂಲಕವೂ ಇನ್ನೊಂದು ಪದವಿ, ಸರ್ಟಿಫಿಕೇಟ್‌ ಕೋರ್ಸ್‌ ಮಾಡಿಕೊಳ್ಳುವುದಕ್ಕೆ ಈಗ ಅವಕಾಶ ಇದೆ.

ಕರಾಮುವಿಯ ಪ್ರಸಕ್ತ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಆರಂಭ
ಕರಾಮುವಿಯ ಪ್ರಸಕ್ತ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಆರಂಭ

ಬೆಂಗಳೂರು: ರೆಗ್ಯುಲರ್‌ ಕಾಲೇಜಿಗೆ ಹೋಗಿ ಡಿಗ್ರಿ, ಪಿಜಿ ಪದವಿ ಪಡೆಯಿರಿ. ಅದರ ಜತೆಗೆ ಮುಕ್ತ ದೂರ ಶಿಕ್ಷಣದ ಮೂಲಕವೂ ಇನ್ನೊಂದು ಪದವಿ, ಸರ್ಟಿಫಿಕೇಟ್‌ ಕೋರ್ಸ್‌ ಮಾಡಿಕೊಳ್ಳುವುದಕ್ಕೆ ಈಗ ಅವಕಾಶ ಇದೆ. ಇದನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕ ಉನ್ನತಿ ಸಾಧಿಸಬಹುದು ಎಂದು ಕೆಎಸ್‌ಒಯು ಹೇಳಿದೆ.

ಟ್ರೆಂಡಿಂಗ್​ ಸುದ್ದಿ

ಸೋಮವಾರ ರಾತ್ರಿಯಿಂದ 108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ; ಅವರ ಬೇಡಿಕೆಗಳೇನು?

Hassan Scandal: 4 ದಿನ ಎಸ್‌ಐಟಿ ವಶಕ್ಕೆ ಮಾಜಿ ಸಚಿವ ರೇವಣ್ಣ, ತೀವ್ರ ವಿಚಾರಣೆ ಸಾಧ್ಯತೆ

Bangalore Metro:ಮೆಟ್ರೋದಲ್ಲೇ ಬೆಂಗಳೂರು ಸುತ್ತುವ ಅವಕಾಶ, 5 ವರ್ಷದಲ್ಲಿ ನಮ್ಮ ಮೆಟ್ರೋ ಜಾಲಕ್ಕೆ 16 ಇಂಟರ್‌ಚೇಂಜ್‌ ನಿಲ್ದಾಣಗಳ ಸೇರ್ಪಡೆ

Hassan Scandal: ಪ್ರಜ್ವಲ್‌ ರೇವಣ್ಣ ಪ್ರಕರಣ, ಎಸ್‌ಐಟಿಯಿಂದ ಸಹಾಯವಾಣಿ, ಈ ಸಂಖ್ಯೆಗೆ ಮಾಹಿತಿ ನೀಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2022-23ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ಪ್ರವೇಶಾತಿಯು ಮಾರ್ಚ್ 31 ಅಂತಿಮ ದಿನಾಂಕವಾಗಿದೆ. ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಕಾರ್ಯಕ್ರಮಗಳನ್ನು ಅಧ್ಯಯನ ಮಾಡಬಹುದು. ಕಲಿಕಾರ್ಥಿಯು ಏಕಕಾಲದಲ್ಲಿ ಒಂದು ಪದವಿಯನ್ನು ಸಾಂಪ್ರದಾಯಿಕ ವಿಶ್ವವಿದ್ಯಾನಿಲಯದಲ್ಲೂ ಇನ್ನೊಂದನ್ನು ಮುಕ್ತ ದೂರಶಿಕ್ಷಣದಲ್ಲೂ ಪಡೆಯಬಹುದು. ಅಂತೆಯೇ ಏಕ ಕಾಲದಲ್ಲಿ ಎರಡು ಪದವಿಗಳನ್ನು ದೂರಶಿಕ್ಷಣದಲ್ಲೇ ವ್ಯಾಸಂಗ ಮಾಡಬಹುದು,

ಅರ್ಜಿಗಳನ್ನು ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ KSOU Admission Portal ಮೂಲಕ ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ ತಿಳಿಸಿದ್ದಾರೆ.

ಕರಾಮುವಿಯ ಪ್ರಸಕ್ತ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಆರಂಭ; ಬೋಧನಾ ಶುಲ್ಕ ರಿಯಾಯಿತಿ ಯಾರಿಗೆ ಎಷ್ಟು?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಬೋಧನಾ ಶುಲ್ಕದಲ್ಲಿ ಕೆಲವರಿಗೆ ವಿನಾಯಿತಿ ಪ್ರಕಟಿಸಿದೆ. ಇದರ ಪ್ರಕಾರ, ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಶೇಕಡ 15, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಶೇಕಡ15, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಶೇಕಡ 30, ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ/ಎನ್.ಡಬ್ಲು.ಕೆ.ಎಸ್.ಆರ್.ಟಿ.ಸಿ/ಕೆ.ಕೆ.ಆರ್.ಟಿ.ಸಿ ನೌಕರರಿಗೆ ಶೇಕಡ 25 ಬೋಧನಾ ಭೋಧನಾ ಶುಲ್ಕದಲ್ಲಿ ರಿಯಾಯಿತಿ ಸೌಲಭ್ಯ ಸಿಗಲಿದೆ.

ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಠಿ ಹೀನ ವಿದ್ಯಾರ್ಥಿಗಳಿಗೆ ( ಬಿ.ಇ.ಡಿ., ಎಂಬಿಎ ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ, ಎಸ್‍ಎಸ್‍ಪಿ ಮುಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಬೆಂಗಳೂರಿನ ಮಲ್ಲೇಶ್ವರಂನ 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮಹಿಳಾ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರನ್ನು 080 23448811, 9741197921, 9620395584, 7760848564 ಕ್ಕೆ ಕರೆ ಮಾಡಿ ಸಂಪರ್ಕಿಸಬಹುದು.

ಗಮನಿಸಬಹುದಾದ ಸುದ್ದಿ

ನಿಮ್ಮ ಜೀವನೋದ್ದೇಶ ಏನು?; ಗುರಿ ಮತ್ತು ಗುರುವನ್ನು ಕಂಡುಕೊಳ್ಳಲು ಇಲ್ಲಿದೆ ಪಂಚ ಸೂತ್ರ

Life purpose: ಜೀವನೋದ್ದೇಶವನ್ನು ಗುರುತಿಸುವುದು ಸುಲಭದ ಕೆಲಸವಲ್ಲ. ನಿಮ್ಮ ಜೀವನದ ಗುರಿ ಮತ್ತು ಉದ್ದೇಶದ ಸ್ಪಷ್ಟತೆ ಇಲ್ಲದೇ ಇದ್ದಾಗ, ಮಾರ್ಗದರ್ಶಕರ ನೆರವು ಕೂಡ ಬೇಕಾಗುತ್ತದೆ. ಆದಾಗ್ಯೂ, ಬದುಕಿನ ಹಾದಿಯಲ್ಲಿ ಇದೊಂದು ನಿರ್ಣಾಯಕ ಘಟ್ಟ ಎಂಬುದು ವಾಸ್ತವ. ಜೀವನೋದ್ದೇಶ ತಿಳಿಯಬೇಕಾ? ಇಲ್ಲಿ ಕ್ಲಿಕ್‌ ಮಾಡಿ

    ಹಂಚಿಕೊಳ್ಳಲು ಲೇಖನಗಳು