logo
ಕನ್ನಡ ಸುದ್ದಿ  /  ಕರ್ನಾಟಕ  /  Ksp Constable Recruitment 2022: 1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ

KSP Constable recruitment 2022: 1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ

Praveen Chandra B HT Kannada

Oct 19, 2022 12:22 PM IST

1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಸಿ

    • KSP Civil Constable recruitment 2022: ಅರ್ಜಿ ಸಲ್ಲಿಸಲು ನವೆಂಬರ್‌ 23 ಕೊನೆಯ ದಿನವಾಗಿದೆ. ಆಯ್ಕೆಯಾದವರಿಗೆ 23,500-47,650 ರೂ. ವೇತನ ದೊರಕಲಿದೆ. ಒಟ್ಟು ಹುದ್ದೆಗಳ ಪೈಕಿ 451 ಹುದ್ದೆಗಳನ್ನು ಕಲ್ಯಾಣ-ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಸಿ
1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಸಿ

ಬೆಂಗಳೂರು: ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಈಗ ಉದ್ಯೋಗ ದೀಪಾವಳಿ. ಕರ್ನಾಟಕ ಸಶಸ್ತ್ರ ಮೀಸಲು ಪಡೆಯಲ್ಲಿ 3,484 ಕಾನ್ಸ್‌ಟೇಬಲ್‌ ಹುದ್ದಗಳ ಕುರಿತು ಈಗಾಗಲೇ ಎಚ್‌ಟಿ ಕನ್ನಡ ಮಾಹಿತಿ ಪ್ರಕಟಿಸಿದೆ. ಓದದೆ ಇರುವವರು ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಓದಬಹುದು. ಇದೇ ಸಮಯದಲ್ಲಿ ನಾಳೆಯಿಂದ ಅಂದರೆ ಅಕ್ಟೋಬರ್‌ 20ರಿಂದ 1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಅರ್ಜಿ ಸಲ್ಲಿಕೆ ಹೇಗೆ?: ಆನ್‌ಲೈನ್‌ ಮೂಲಕ

ಹುದ್ದೆಯ ಹೆಸರು: ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ)

ಹುದ್ದೆಗಳ ಸಂಖ್ಯೆ: 1591

ಅರ್ಜಿ ಸಲ್ಲಿಸಲು ನವೆಂಬರ್‌ 23 ಕೊನೆಯ ದಿನವಾಗಿದೆ. ಆಯ್ಕೆಯಾದವರಿಗೆ 23,500-47,650 ರೂ. ವೇತನ ದೊರಕಲಿದೆ. ಒಟ್ಟು ಹುದ್ದೆಗಳ ಪೈಕಿ 451 ಹುದ್ದೆಗಳನ್ನು ಕಲ್ಯಾಣ-ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ವಿದ್ಯಾರ್ಹತೆ ಏನು?

- ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

- ಸಿಬಿಎಸ್‌ಇ ಮತ್ತು ಐಎಸ್‌ಸಿ ಮಂಡಳಿ ಅಥವಾ ಇತರೆ ರಾಜ್ಯ ಸರಕಾರದ ಪರೀಕ್ಷಾ ಮಂಡಳಿಗಳು ನಡೆಸುವ 12ನೇ ತರಗತಿ ಪರೀಕ್ಷೆ ಅಥವಾ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಯುವ ಎಚ್‌ಎಸ್‌ಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ ಪಡೆದವರು ಕೂಡ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ವಯೋಮಿತಿ ಏನು?

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಕಾನ್ಸ್‌ಟೇಬಲ್ಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ಮತ್ತು ಗರಿಷ್ಠ 25 ವರ್ಷ‌ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ/ ಪಂಗಡ ಮತ್ತು ಒಬಿಸಿ ಅಭ್ಯರ್ಥಿ ಅಭ್ಯರ್ಥಿಗಳಿಗೆ ಎರಡು ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ದೈಹಿಕ ಅರ್ಹತೆ ಏನಿರಬೇಕು?

ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದೈಹಿಕ ಸದೃಢತೆ ಉತ್ತಮವಾಗಿರುವುದು ಅಗತ್ಯ. ರಾಜ್ಯ ಪೊಲೀಸ್‌ ಇಲಾಖೆಯ ನೇಮಕಾತಿ ಮಾನದಂಡಗಳಿಗೆ ತಕ್ಕಂತೆ ಎತ್ತರ, ತೂಕ, ಎದೆ ಸುತ್ತಳತೆ ಇತ್ಯಾದಿಗಳನ್ನು ಬಯಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಎದೆ ಸುತ್ತಳತೆ 86 ಸೆಂ.ಮೀ. ಮಹಿಳಾ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಎತ್ತರ 157 ಸೆಂ.ಮೀ. ಮತ್ತು ತೂಕ 45 ಕೆ.ಜಿ. ಹೊಂದಿರಬೇಕು ಎಂದು ರಾಜ್ಯಪತ್ರ ಅಧಿಸೂಚನೆ ತಿಳಿಸಿದೆ.

ಅರ್ಜಿ ಶುಲ್ಕ ಎಷ್ಟು?

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆದರೆ, ಶುಲ್ಕವನ್ನು ಕೆನರಾ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಮಾತ್ರ ಪಾವತಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 400 ರೂಪಾಯಿ ಮತ್ತು ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ಗಮನಿಸಬೇಕಾದ ಅಂಶಗಳೇನು?

ಈಗಾಗಲೇ ಎಚ್‌ಟಿ ಕನ್ನಡ ಪ್ರಕಟಿಸಿರುವ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ನೇಮಕಾತಿಯಲ್ಲಿ ನೀಡಿದ ಮಾಹಿತಿಯಂತೆ ಇಲ್ಲೂ ಹಲವು ಅಂಶಗಳನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಮನದಲ್ಲಿಟ್ಟುಕೊಳ್ಳಬೇಕು. ಪರೀಕ್ಷೆ ಬರೆದು ಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2022ರ ನವೆಂಬರ್ 21ರೊಳಗೆ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗೆ ಸಂಬಂಧಿಸಿದ ಪರೀಕ್ಷೆಯ ಅಂಕಪಟ್ಟಿಯನ್ನು ಹೊಂದಿರಬೇಕು.

ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಲಿಖಿತ ಪರೀಕ್ಷೆ ನಡೆಸಿ ಅದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಹಿಷ್ಠುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 080-22943346ಗೆ ಕರೆ ಮಾಡಬಹುದು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ