logo
ಕನ್ನಡ ಸುದ್ದಿ  /  ಕರ್ನಾಟಕ  /   Ksp Recruitment 2022: ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ 1 ತಿಂಗಳು ವಿಸ್ತರಿಸಿದ ಕೆಎಸ್‌ಪಿ, ಕೊನೆ ದಿನ ಯಾವಾಗ

KSP recruitment 2022: ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ 1 ತಿಂಗಳು ವಿಸ್ತರಿಸಿದ ಕೆಎಸ್‌ಪಿ, ಕೊನೆ ದಿನ ಯಾವಾಗ

Praveen Chandra B HT Kannada

Oct 28, 2022 05:15 PM IST

ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ಒಂದು ತಿಂಗಳು ವಿಸ್ತರಣೆ

    • ರಾಜ್ಯ ಪೊಲೀಸ್‌ ಇಲಾಖೆಯು 3,484 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಬರೋಬ್ಬರಿ ಒಂದು ತಿಂಗಳಿನಷ್ಟು ವಿಸ್ತರಿಸಿದೆ. ಹೀಗಾಗಿ, ಕರ್ನಾಟಕ ಪೊಲೀಸ್‌ ಇಲಾಖೆಯ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದು ಅಪೂರ್ವ ಅವಕಾಶವಾಗಿದ್ದು, ಈ ಸಮಯವನ್ನು ಬಳಸಿಕೊಳ್ಳಬಹುದಾಗಿದೆ.
ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ಒಂದು ತಿಂಗಳು ವಿಸ್ತರಣೆ
ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ಒಂದು ತಿಂಗಳು ವಿಸ್ತರಣೆ

ಬೆಂಗಳೂರು: ಕರ್ನಾಟಕ ಪೊಲೀಸ್‌ ಇಲಾಖೆಯ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನು ಹೆಚ್ಚು ದಿನವಿಲ್ಲವೆಂದು ತಲೆಬಿಸಿ ಮಾಡಿಕೊಳ್ಳಬೇಕಾಗಿಲ್ಲ. ರಾಜ್ಯ ಪೊಲೀಸ್‌ ಇಲಾಖೆಯು 3,484 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಬರೋಬ್ಬರಿ ಒಂದು ತಿಂಗಳಿನಷ್ಟು ವಿಸ್ತರಿಸಿದೆ. ಹೀಗಾಗಿ, ಕರ್ನಾಟಕ ಪೊಲೀಸ್‌ ಇಲಾಖೆಯ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದು ಅಪೂರ್ವ ಅವಕಾಶವಾಗಿದ್ದು, ಈ ಸಮಯವನ್ನು ಬಳಸಿಕೊಳ್ಳಬಹುದಾಗಿದೆ.

ಟ್ರೆಂಡಿಂಗ್​ ಸುದ್ದಿ

108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಒಂದು ದಿನ ಮುಂದೂಡಿಕೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

Hassan Scandal: ಪ್ರಜ್ವಲ್‌ ರೇವಣ್ಣ ವಿಡಿಯೋ ವೈರಲ್‌ಗೆ ಸಿಎಂ, ಡಿಸಿಎಂ ಕಾರಣ: ವಕೀಲ ದೇವರಾಜೇಗೌಡ ಸ್ಪೋಟಕ ಮಾಹಿತಿ

Drought fund: ಮುಂಗಾರು 2023 ಬರ ಪರಿಹಾರ ವಿತರಣೆಗೆ ಕ್ಷಣಗಣನೆ, ಹಣ ಬಂದಿದೆಯೇ ಎಂದು ಹೀಗೆ ಪರೀಕ್ಷಿಸಿ

Indian Railways: ಬೇಸಿಗೆಗೆ ಹುಬ್ಬಳ್ಳಿ, ಬೆಳಗಾವಿಯಿಂದ ಉತ್ತರ ಭಾರತಕ್ಕೆ ವಿಶೇಷ ರೈಲು, ಅರಸೀಕೆರೆ 2 ರೈಲು ಸಂಚಾರ ರದ್ದು

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಕರ್ನಾಟಕ ಪೊಲೀಸ್‌ ಇಲಾಖೆಯ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಕುರಿತು ಹೊಸ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ನೂತನವಾಗಿ ಪ್ರಕಟಗೊಂಡ ರಾಜ್ಯಪತ್ರದ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್‌ 31ರವರೆಗೆ ಅವಕಾಶ ನೀಡಲಾಗಿದೆ.

"ಪ್ರಸ್ತುತ ಅರ್ಹ ಅಭ್ಯರ್ಥಿಗಳಿಗೆ ಸದರಿ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡುವ ಸಂಬಂಧ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 31.10.2022 ರಿಂದ 30.11.2022 ರವರೆಗೆ ಹಾಗೂ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅವಧಿಯಲ್ಲ, ಅಂಚೆ ಕಚೇರಿ ವೇಳೆಗಳಲ್ಲಿ ಪಾವತಿಸಲು ಕೊನೆಯ ದಿನಾಂಕ: 03.11.2022 ರಿಂದ 02.12.2022ರವರೆಗೆ ವಿಸ್ತರಿಸಲಾಗಿರುತ್ತದೆ. ಉಳಿದಂತೆ, ಸದರಿ ಅಧಿಸೂಚನೆಗಳಲ್ಲಿ ನೀಡಲಾಗಿರುವ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲʼʼ ಎಂದು ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

ಇದಕ್ಕೂ ಮೊದಲು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್‌ 31, 2022 ಕೊನೆಯ ದಿನಾಂಕವಾಗಿತ್ತು. ಇದೀಗ ಈ ಅವಧಿಯನ್ನು ಒಂದು ತಿಂಗಳಿನಷ್ಟು ವಿಸ್ತರಿಸಲಾಗಿದೆ.

ಒಟ್ಟು 3,484 ಸಶಸ ಪೊಲೀಸ್ ಕಾನ್ಸ್‌ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು ಹುದ್ದೆಗಳ ಪೈಕಿ ಕಲ್ಯಾಣ-ಕರ್ನಾಟಕದ ಅಭ್ಯರ್ಥಿಗಳಿಗೆ 420 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ ಲಿಂಗಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಈ ನೇಮಕದಲ್ಲಿ ಸುಮಾರು 79 ತೃತೀಯ ಲಿಂಗ ಪುರುಷ ಅಭ್ಯರ್ಥಿಗಳಿಗೆ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಅವಕಾಶ ದೊರಕಲಿದೆ.

ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತತ್ಸಮಾನ ವಿದ್ಯಾರ್ಹತೆ ಎಂದರೆ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿಗಳು, ಇತರೆ ರಾಜ್ಯ ಸರಕಾರದ ಪರೀಕ್ಷಾ ಮಂಡಳಿಗಳು ನಡೆಸುವ 10ನೇ ತರಗತಿ ಪರೀಕ್ಷೆ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಪ್ರೌಢಶಿಕ್ಷಣ ಕೋರ್ಸ್ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ (ಕೆಒಎಸ್) ವಿದ್ಯಾರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು.

ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ/ ಪಂಗಡ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಎರಡು ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 400 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಪಾವತಿಸಬಹುದು ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳಲ್ಲೂ ಪಾವತಿಸಬಹುದು. ಸೇವಾ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

    ಹಂಚಿಕೊಳ್ಳಲು ಲೇಖನಗಳು