Leopard attack compensation: ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ
Dec 03, 2022 11:38 AM IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಬಳಿ ಎಂದಿನಂತೆ ಜನರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, ಚಿರತೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಎಂದು ಘೋಷಿಸಿದರು.
Leopard attack compensation: ರಾಜ್ಯದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುತ್ತದೆ. ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟವರ ಕುಟುಂಬಕ್ಕೆ ಇದೇ ರೀತಿ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ವಿವಿಧೆಡೆ ಚಿರತೆ ದಾಳಿ ಹೆಚ್ಚಾಗಿದೆ. ಮೈಸೂರು ಜಿಲ್ಲೆಯಲ್ಲಿ ಚಿರತೆ ದಾಳಿಗೆ ಒಳಗಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆಯೂ ವರದಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಪ್ರತಿಕ್ರಿಯೆ ನೀಡಿದ್ದು, ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬ ದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಘೋಷಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಎಂದಿನಂತೆ ಜನರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದರು.
ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ವಿಶೇಷ ತಂಡ ರಚನೆ
ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.
ಬೆಂಗಳೂರಲ್ಲಿ ಒಂದಲ್ಲ 4 ಚಿರತೆಗಳಿವೆ ಎನ್ನುತ್ತಿದ್ದಾರೆ ಜನ; ಮೈಸೂರು, ಮಂಡ್ಯ,ಚಾಮರಾಜನಗರಗಳಲ್ಲಿ ಕೂಡ ಚಿರತೆ ಕಾಟ
Leopard in Bangalore: ರಾಜ್ಯ ರಾಜಧಾನಿ ಬೆಂಗಳೂರು ವ್ಯಾಪ್ತಿಯ ತುರಹಳ್ಳಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಆದರೆ ಈ ಪ್ರದೇಶದಲ್ಲಿ ಒಟ್ಟು ನಾಲ್ಕು ಚಿರತೆಗಳು ಕಾಣಿಸಕೊಂಡಿರುವ ಕಾರಣ ಕಳವಳ ಹೆಚ್ಚಾಗಿದೆ. ಇದೇ ರೀತಿ, ಮೈಸೂರು, ಮಂಡ್ಯ, ಚಾಮರಾಜನಗರಗಳಲ್ಲೂ ಚಿರತೆ ಕಾಟ ಕಂಡುಬಂದಿದೆ. ವಿವರ ವರದಿಗೆ ಇಲ್ಲಿ ಕ್ಲಿಕ್ಕಿಸಿ.
ತುರಹಳ್ಳಿ ಅರಣ್ಯ ಸಮೀಪ ಚಿರತೆ; ರಾತ್ರಿ ಸಂಚಾರಕ್ಕೆ ನಿರ್ಬಂಧ - ಚಿರತೆ ಸೆರೆಗೆ ಕಾರ್ಯಾಚರಣೆ ಶುರು
South Bengaluru on high alert: ದಕ್ಷಿಣ ಬೆಂಗಳೂರಿನ ಬನಶಂಕರಿ ಆರನೇ ಹಂತದ ತುರಹಳ್ಳಿ ಅರಣ್ಯ ಸಮೀಪದ ವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಆ ಪ್ರದೇಶದಲ್ಲಿ ಅಘೋಷಿತ ಹೈ ಅಲರ್ಟ್ ಚಾಲ್ತಿಯಲ್ಲಿದ್ದು, ರಾತ್ರಿ ಸಂಚಾರ ನಿರ್ಬಂಧಕ್ಕೆ ಮನವಿ ಮಾಡಲಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಶುರುವಾಗಿದೆ. ವಿವರ ವರದಿಗೆ ಇಲ್ಲಿ ಕ್ಲಿಕ್ಕಿಸಿ.
Leopard at KRS Dam: ಕೆಆರ್‌ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ, ಚಿರತೆ ಹಿಡಿಯಲು ನಿರ್ಲಕ್ಷ್ಯ, ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ
ಕೆಆರ್‌ಎಸ್ ಬೃಂದಾವನದಲ್ಲಿ ಕಳೆದ ಹದಿನೈದು ದಿನಗಳಿಂದ ಪದೇಪದೇ ಚಿರತೆಯೊಂದು ಕಾಣಿಸಿಕೊಂಡು ಆತಂಕ ಹುಟ್ಟಿಸುತ್ತಿದೆ. ನಿನ್ನೆಯಂತೂ ಚಿರತೆ ಇದೆಯೆಂದು ಪ್ರವಾಸಿಗರು ಕೆಆರ್‌ಎಸ್ ಬೃಂದಾವನದಿಂದ ಭಯಭೀತರಾಗಿ ಓಡಿದ್ದಾರೆ. ವಿವರ ವರದಿಗೆ ಇಲ್ಲಿ ಕ್ಲಿಕ್ಕಿಸಿ
ಸಕಲೇಶಪುರ ಕಾಡಾನೆ ಕಾಟ; ಅಧಿಕಾರಿ ಮೃತ ಪಟ್ಟರೆ 50 ಲಕ್ಷ ರೂ.; ರೈತ ಮೃತಪಟ್ಟರೆ 15 ಲಕ್ಷ ರೂ.!?
Protest against wild elephant attacks: ಕಾಡಾನೆ ತುಳಿದು ಮೃತಪಟ್ಟ ರೈತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ. ಆದರೆ, ಸರ್ಕಾರಿ ಅಧಿಕಾರಿ ಮೃತಪಟ್ಟರೆ 50 ಲಕ್ಷ ರೂಪಾಯಿಗೂ ಅಧಿಕ ಪರಿಹಾರ. ಇದರಲ್ಲೂ ರೈತರ ಪಾಲಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪ. ವಿವರ ವರದಿಗೆ ಇಲ್ಲಿ ಕ್ಲಿಕ್ಕಿಸಿ.