logo
ಕನ್ನಡ ಸುದ್ದಿ  /  ಕರ್ನಾಟಕ  /  ಸಂಸದ ಮುನಿಸ್ವಾಮಿ ಪ್ರಯತ್ನಕ್ಕೆ ಸಿಗದ ಫಲ; ಕೋಲಾರ, ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಸಂಸದ ಮುನಿಸ್ವಾಮಿ ಪ್ರಯತ್ನಕ್ಕೆ ಸಿಗದ ಫಲ; ಕೋಲಾರ, ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

Raghavendra M Y HT Kannada

Mar 23, 2024 09:13 PM IST

google News

ಫೆಬ್ರವರಿ 22 ರಂದು ದೆಹಲಿಗೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು.

    • ಕೋಲಾರ, ಹಾಸನ ಹಾಗೂ ಮಂಡ್ಯ ಮೂರು ಲೋಕಸಭಾ ಕ್ಷೇತ್ರಗಳನ್ನು ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ತಿಳಿಸಿದ್ದಾರೆ. 
ಫೆಬ್ರವರಿ 22 ರಂದು ದೆಹಲಿಗೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು.
ಫೆಬ್ರವರಿ 22 ರಂದು ದೆಹಲಿಗೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು. (ANI)

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಮಗೆ ನೀಡಬೇಕೆಂದು ಹಾಲಿ ಸಂಸದ ಎಸ್ ಮುನಿಸ್ವಾಮಿ ನಡೆಸಿದ ನಿರಂತರ ಪ್ರಯತ್ನಗಳೆಲ್ಲವೂ ವಿಫಲವಾಗಿವೆ. ಇದಕ್ಕೆ ಕಾರಣ ಬಿಜೆಪಿ ಹೈಕಮಾಂಡ್ ಕೋಲಾರ, ಹಾಸನ ಹಾಗೂ ಮಂಡ್ಯ ಕ್ಷೇತ್ರಗಳನ್ನು ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿರುವುದು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು (ಮಾರ್ಚ್ 23, ಶನಿವಾರ) ಮಾತನಾಡಿರುವ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಘೋಷಣೆ ಮಾಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಿದ್ದ ಚುನಾವಣಾ ಕಾರ್ಯಾಗಾರದಲ್ಲಿ ಮಾತನಾಡಿರುವ ಅಗರ್ವಾಲ್, ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಲಿದೆ. ಉಳಿದಂತೆ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಪರಿಣಾಮ ಬಿಜೆಪಿ ಹಾಲಿ ಸಂಸದಿರುವ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಇಲ್ಲಿ ಎಸ್ ಮುನಿಸ್ವಾಮಿ ಸಂಸದರಾಗಿದ್ದಾರೆ.

ಜೆಡಿಎಸ್ ನಾಯಕರ ಮನವಿಗೆ ಮಣಿದ ಬಿಜೆಪಿ ಹೈ ಕಮಾಂಡ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪಕ್ಷಕ್ಕೆ ಮೂರು ಸ್ಥಾನಗಳನ್ನು ಹಂಚಿಕೆ ಮಾಡಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಇತ್ತೀಚಗಷ್ಟೇ ಹೇಳಿದ್ದರು. ಹಾಸನದಲ್ಲಿ ಭಾವನಾತ್ಮಕ ಭಾಷಣ ಮಾಡಿದ್ದ ಅವರು, ಜೆಡಿಎಸ್‌ಗೆ ಮತ ಹಾಕುವ ಮೂಲಕ ಅದನ್ನು ಉಳಿಸುವಂತೆ ಮನವಿ ಮಾಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಬಿಜೆಪಿ ನಾಯಕರು ನಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು ಈ ಮೂರು ಸ್ಥಾನಗಳನ್ನು ಹಂಚಿಕೆ ಮಾಡಿದ್ದಾರೆ. ನಾನು ಇನ್ನೂ ಎರಡು ಅಥವಾ ಮೂರು ಸ್ಥಾನಗಳನ್ನು ಪಡೆಯಲು ಪ್ರಯತ್ನಿಸಿದೆ, ಆದರೆ ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ನಿಮ್ಮ ಮತವನ್ನು ಜೆಡಿಎಸ್‌ಗೆ ನೀಡುವ ಮೂಲಕ ಪಕ್ಷವನ್ನು ಉಳಿಸುವುದು ಈಗ ನಿಮ್ಮ ಕೈಯಲ್ಲಿದೆ ಎಂದು ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿದ್ದರು.

ಕುಮಾರಸ್ವಾಮಿ ಅವರು ಹಳೆ ಮೈಸೂರು ಭಾಗದ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ. ಆದರೂ, ಅವರು ಈ ಹಿಂದೆ ಆರೋಗ್ಯ ಕಾರಣಗಳಿಂದ ಸ್ಪರ್ಧೆಗೆ ಮನಸ್ಸು ಮಾಡಿಲ್ಲ ಎನ್ನಲಾಗಿದೆ. ಚುನಾವಣೆಯಲ್ಲಿ ಭಾಗವಹಿಸಲು ದೈಹಿಕ ಶಕ್ತಿ ಇಲ್ಲ ಎಂದು ಹೇಳಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಸೋಲು ಕಂಡಿದ್ದರು.

ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ಮುಂದಿನ ನಡೆಯೇನು?

ಬಿಜೆಪಿ ಸೇರಿರುವ ಸುಮಲತಾ ಅಂಬರೀಶ್ ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಬಿಜೆಪಿ ನಾಯಕರಿಂದ ಸಕಾರಾತ್ಮಕ ಉತ್ತರ ಸಿಕ್ಕಿಲ್ಲ. ಇದೀಗ ಮಂಗಳವಾರ (ಮಾರ್ಚ್ 26) ಕಾರ್ಯಕರ್ತರ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ವರದಿಯಾಗಿದೆ.

ಹಾಸನದಲ್ಲಿ ಮಾಜಿ ಸಚಿನ, ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿ ತನ್ನ ಹಲವು ಹಾಲಿ ಸಂಸದರ ಹೆಸರುಗಳನ್ನು ಕೈಬಿಟ್ಟಿದೆ. ಸದಾನಂದ ಗೌಡ, ಪ್ರತಾಪ್ ಸಿಂಹ್, ನಳಿನ್ ಕುಮಾರ್ ಕಟೀಲ್ ಇದೀಗ ಎಸ್ ಮುನಿಸ್ವಾಮಿ ಟಿಕೆಟ್ ವಂಚಿತರ ಪಟ್ಟಿಗೆ ಸೇರಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಸಿಗದಿದ್ದರೂ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸಲು ಕೆಲಸ ಮಾಡುವುದಾಗಿ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ