logo
ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 15 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇರಬಹುದಾ; ಯಾರಿಗೆಲ್ಲ ಟಿಕೆಟ್ ಸಿಗಬಹುದು

Lok Sabha Election: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 15 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇರಬಹುದಾ; ಯಾರಿಗೆಲ್ಲ ಟಿಕೆಟ್ ಸಿಗಬಹುದು

Umesh Kumar S HT Kannada

Mar 12, 2024 10:42 AM IST

ಬಿಜೆಪಿ (ಸಾಂಕೇತಿಕ ಚಿತ್ರ)

  • ಲೋಕಸಭಾ ಚುನಾವಣೆ 2024 ದಿನಾಂಕ ಘೋ‍ಷಣೆಗೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೆ ಮುಂದಾಗಿದೆ. ಇದರಲ್ಲಿ ಕರ್ನಾಟಕದ 15 ಅಭ್ಯರ್ಥಿಗಳ ಹೆಸರುಗಳಿವೆ ಎಂದು ಹೇಳಲಾಗುತ್ತಿದೆ. ಯಾರಿಗೆ ಸಿಗಬಹುದು ಟಿಕೆಟ್‌ ಇಲ್ಲಿದೆ ವಿವರ.

ಬಿಜೆಪಿ (ಸಾಂಕೇತಿಕ ಚಿತ್ರ)
ಬಿಜೆಪಿ (ಸಾಂಕೇತಿಕ ಚಿತ್ರ) (ANI)

ಬೆಂಗಳೂರು/ ನವದೆಹಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯ ನಿರೀಕ್ಷೆಯಲ್ಲಿರುವಾಗಲೇ ಕರ್ನಾಟಕದ 15 ಸ್ಥಾನಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ ಎಂಬ ಸುದ್ದಿ ಗಮನಸೆಳೆದಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ ಎಂದು ವರದಿ ಹೇಳಿದೆ.

ಟ್ರೆಂಡಿಂಗ್​ ಸುದ್ದಿ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

Hassan Scandal: ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಒಂದು ದಿನಕ್ಕೆ ಮಾತ್ರ ಜಾಮೀನು, ಇಂದು ವಿಚಾರಣೆ

Forest Tales: ಮಳೆಗಾಲ ಬಂತು ಒಂದಾದರೂ ಸಸಿ ನೆಡೋಣ, ಬಿಸಿಲು ಬರದ ಬವಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಬನ್ನಿ

ನವದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಿನ್ನೆ (ಮಾ.11) ನಡೆಯಿತು. ಅದರಲ್ಲಿ ಈ 15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿವೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಜರಿದ್ದರು.

ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌, ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಸಭೆಯಲ್ಲಿದ್ದರು ಎಂದು ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ.

ವಿಸ್ತೃತ ಚರ್ಚೆಯ ಬಳಿಕ 15 ಅಭ್ಯರ್ಥಿಗಳ ಹೆಸರು ಅಂತಿಮ

ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆಯ ಬಳಿಕ ಪಕ್ಷದ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ವಿಸ್ತೃತ ಚರ್ಚೆ ನಡೆಯಿತು. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣ ಆ ಪಕ್ಷಕ್ಕೆ ಬಿಟ್ಟುಕೊಡಬೇಕಾದ ಕ್ಷೇತ್ರಗಳ ವಿಚಾರವೂ ಚರ್ಚೆಯಾಯಿತು. ರಾಜ್ಯ ಬಿಜೆಪಿ ಕಡೆಯಿಂದ ಮಂಡ್ಯ ಮತ್ತು ಹಾಸನ ಕ್ಷೇತ್ರಗಳನ್ನು ಬಿಟ್ಟುಕೊಡುವ ಕುರಿತು ಸಲಹೆ ನೀಡಲಾಗಿದೆ ಎಂದು ಹೇಳಿದರು.

ಈ ನಡುವೆ ಜೆಡಿಎಸ್ ನಾಯಕರು ಮೂರು ಕ್ಷೇತ್ರಗಳಿಗೆ ಬೇಡಿಕೆಯನ್ನುಇಟ್ಟಿದ್ದಾರೆ. ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸುವುದಕ್ಕೆ ಸಿದ್ದತೆ ನಡೆಸಿಕೊಂಡಿದ್ದಾರೆ. ಆದರೆ, ಇನ್ನೂ ಜೆಡಿಎಸ್‌ಗೆ ಎಷ್ಟು ಸ್ಥಾನಗಳನ್ನು ಬಿಜೆಪಿ ಬಿಟ್ಟುಕೊಡಲಿದೆ ಎಂಬುದು ಖಚಿತವಾಗಿಲ್ಲ.

15 ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಯಾರಿರಬಹುದು?

ಕರ್ನಾಟಕ 28 ಕ್ಷೇತ್ರಗಳ ಪೈಕಿ 15ರಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಇರಬಹುದಾದವರ ಹೆಸರು ಮತ್ತು ಕ್ಷೇತ್ರಗಳಿವು,

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿ- ಧಾರವಾಡ, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂಗಳೂರು ಸೆಂಟ್ರಲ್‌ನಿಂದ ಪಿ ಸಿ ಮೋಹನ್, ಬೆಳಗಾವಿಯಿಂದ ಜಗದೀಶ್ ಶೆಟ್ಟರ್‌, ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಹೆಸರು ಖಚಿತವಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಮಾಜಿ ಸಚಿವ ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರದಿಂದ ಕೇಳಿದೆ. ಅಲ್ಲಿ ಈಗ ರಮೇಶ್ ಜಿಗಜಿಣಗಿ ಸಂಸದರು. ಅವರಿಗೆ ಅನಾರೋಗ್ಯ ಇರುವ ಕಾರಣ ಹೊಸ ಅಭ್ಯರ್ಥಿಯ ತಲಾಶ್‌ನಲ್ಲಿದೆ ಪಕ್ಷ.

ಹಾಲಿ ಸಂಸದರ ಬಗ್ಗೆ ಆಕ್ರೋಶ ಎಲ್ಲೆಲ್ಲಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಬೀದರ್, ಉತ್ತರ ಕನ್ನಡ, ಮೈಸೂರು ಕೊಡಗುಗಳಲ್ಲಿ ಹಾಲಿ ಸಂಸದರ ವಿರುದ್ಧ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿರುವ ಕಾರಣ ಅಭ್ಯರ್ಥಿಗಳ ಬದಲಾವಣೆಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾಗಿ ವರದಿ ಹೇಳಿದೆ.

ಆದಾಗ್ಯೂ, ಶೋಭಾ ಕರಂದ್ಲಾಜೆಗೆ ಟಿಕೆಟ್ ಸಿಗಲಿದೆ. ಕ್ಷೇತ್ರ ಅಂತಿಮಗೊಂಡಿಲ್ಲ. ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೆಸರು ಕೇಳಿಬಂದಿದೆ. ಚಿಕ್ಕೋಡಿಯಿಂದ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಬದಲು ರಮೇಶ್ ಕತ್ತಿಗೆ ಟಿಕೆಟ್ ಸಿಗಬಹುದು ಎಂದು ಹೇಳಲಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಿಕಟಪೂರ್ವ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಸಂಸದರಾಗಿದ್ದು, ಈ ಬಾರಿ ಅವರಿಗೆ ಟಿಕೆಟ್ ಸಿಗುವುದು ಸಂಶಯ. ಇಲ್ಲಿ ರಾಜ್ಯ ನಾಯಕರು ಬ್ರಿಜೇಶ್ ಚೌಟ ಮತ್ತು ಇನ್ನಿಬ್ಬರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಇದೇ ರೀತಿ ಉತ್ತರ ಕನ್ನಡದಲ್ಲೂ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಬದಲು ಹೊಸಬರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ