logo
ಕನ್ನಡ ಸುದ್ದಿ  /  ಕರ್ನಾಟಕ  /  ಉತ್ತರ ಕನ್ನಡದಲ್ಲಿ ಮೇ 7 ರಂದು ಮತದಾನ; 16.22 ಮಂದಿಗೆ ಹಕ್ಕು ಚಲಾಯಿಸುವ ಅವಕಾಶ -Lok Sabha Election 2024

ಉತ್ತರ ಕನ್ನಡದಲ್ಲಿ ಮೇ 7 ರಂದು ಮತದಾನ; 16.22 ಮಂದಿಗೆ ಹಕ್ಕು ಚಲಾಯಿಸುವ ಅವಕಾಶ -Lok Sabha Election 2024

Raghavendra M Y HT Kannada

Mar 17, 2024 08:26 PM IST

ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಅವರು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

    • Lok Sabha Election 2024: ಉತ್ತರ ಕನ್ನಡ ಜಿಲ್ಲೆಯಲ್ಲಿ ಎಷ್ಟು  ಮಂದಿ ಮತದಾನದ ಹಕ್ಕು ಹೆೊಂದಿದ್ದಾರೆ. ಒಟ್ಟು ಮತಗಟ್ಟೆಗಳು, ಭದ್ರತಾ ಸಿಬ್ಬಂದಿ ಯೋಜನೆಯ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಅವರು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಅವರು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರವಾರ (ಉತ್ತರ ಕನ್ನಡ): ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಮಾರ್ಚ್ 16ರ ಶನಿವಾರ ಮಧ್ಯಾಹ್ನದಿದಂಲೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದ್ದಾರೆ. ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಪ್ರಯುಕ್ತ ಏಪ್ರಿಲ್ 12 ರಂದು ನೋಟಿಫಿಕೇಶನ್ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಎ. 19 ಕೊನೆಯ ದಿನ. ಎ. 20 ನಾಮಪತ್ರ ಪರಿಶೀಲನೆ ಎ. 22 ನಾಮ ಪತ್ರ ಹಿಂಪಡೆಯಲು ಕೊನೆಯ ದಿನ ವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ , ಜೂನ್ 4 ರಂದು ಜೂನ್ ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.

ಟ್ರೆಂಡಿಂಗ್​ ಸುದ್ದಿ

Mangalore News: ಪದ್ಮಶ್ರೀ ಹರೇಕಳ ಹಾಜಬ್ಬರ ಶಾಲೆಯಲ್ಲಿ ದುರಂತ, ಮಳೆಗೆ ಶಿಥಿಲಗೊಂಡ ಆವರಣಗೋಡೆ, ಗೇಟು ಕುಸಿದು ಬಾಲಕಿ ದುರ್ಮರಣ

Hubli News: ಹುಬ್ಬಳ್ಳಿ ಅಂಜಲಿ‌ ಅಂಬಿಗೇರ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ, ತಪ್ಪಿತಸ್ಥ ಪೊಲೀಸರ ವಿರುದ್ದ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ

Dakshin Kannada Accidents: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕ ಅಪಘಾತ; ಮಾಜಿ ಸೈನಿಕ ಸೇರಿ ಮೂವರು ಸಾವು

MLC Elections2024: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ, ಯತೀಂದ್ರ ಸಿದ್ದರಾಮಯ್ಯಗೆ ಮಣೆ, ಇತರ ಆಕಾಂಕ್ಷಿಗಳು ಯಾರು

ಉತ್ತರ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವಿವರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಿತ್ತೂರು , ಖಾನಾಪುರ , ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳು ಇರಲಿವೆ. ಒಟ್ಟು 16,22,857 ಮತದಾರರಿದ್ದು, 8,16,599 ಪುರುಷರು, 8,07,242 ಮಹಿಳೆಯರು, 16 ಇತರೆ ಮತದಾರರು ಇದ್ದು, ಒಟ್ಟು 1,977 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದರು.

ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಒಟ್ಟು 25 ಚೆಕ್‌ಪೋಸ್ಟ್ ಗಳನ್ನು ತರೆಯಲಾಗಿದ್ದು, ಇಂದಿನಿಂದಲೇ ಎಲ್ಲಾ ಚೆಕ್ ಪೋಸ್ಟ್‌ಗಳು ಕಾರ್ಯಾರಂಭ ಮಾಡಿವೆ. ದಿನದ ಇಪ್ಪತ್ತನಾಲ್ಕು ತಾಸು ಈ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ಚೆಕ್ ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದಾಗಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಪ್ಲೈಯಿಂಗ್ ಸ್ಕ್ವಾಡ್, ವಿಡಿಯೊ ಸರ್ವೇಲೆನ್ಸ್ ತಂಡ, ವಿಡಿಯೊ ವೀಕ್ಷಣಾ ತಂಡ, ಅಂಕಿ ಅಂಶ ಪರಿಶೀಲನಾ ತಂಡ, ಸೆಕ್ಟರ್ ಅಧಿಕಾರಿಗಳು, ಲೆಕ್ಕಪತ್ರ ತಂಡ ಸೇರಿದಂತೆ ವಿವಿಧ ತಂಡಗಳಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅವರಿಗೆ ಸೂಕ್ತ ತರಬೇತಿಯನ್ನು ನೀಡಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಿಂಗಲ್ ವಿಂಡೋ ಸಮಿತಿ, ಎಂಸಿಎಂಸಿ ಸಮಿತಿ, ಮೀಡಿಯಾ ಸ್ಕ್ರೂಟನಿ ತಂಡ, ಲೆಕ್ಕಪತ್ರ ಪರಿಶೀಲನಾ ತಂಡ, ದೂರು ನಿರ್ವಹಣಾ ತಂಡಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಕ್ತ, ಪಾರದರ್ಶಕ, ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ-ಡಿಸಿ

ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ, ಶಾಂತಿಯುತ ಚುನಾವಣೆನಡೆಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಯಾವುದೇ ಅಗತ್ಯ ಮಾಹಿತಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿನ 1,435 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಒಟ್ಟು 2,489 ಪೊಲೀಸ್ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮತದಾನ ದಿನದಂದು ಕರ್ತವ್ಯ ನಿರ್ವಹಿಸಲು ಹೆಚ್ಚುವರಿಯಾಗಿ ಕೇಂದ್ರ ಭದ್ರತಾ ಸಿಬ್ಬಂದಿ ಮತ್ತು ರಾಜ್ಯ ಪೊಲೀಸ್ ಪಡೆಗಳ ಆಗಮನವಾಗಲಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿದ್ದು, ಈ ಹಿಂದೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂ ಸಿಇಒ ಈಶ್ವರ ಕಾಂದೂ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ