logo
ಕನ್ನಡ ಸುದ್ದಿ  /  ಕರ್ನಾಟಕ  /  ರಾಜ್ಯ ಸರ್ಕಾರ ಪತನ ಆಗ್ತದೆ ಎನ್ಮುವುದು ಬರೀ ಭ್ರಮೆ, ಐದೂ ವರ್ಷ ನಮ್ಮ ಸರ್ಕಾರ ಸುಭದ್ರ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಪತನ ಆಗ್ತದೆ ಎನ್ಮುವುದು ಬರೀ ಭ್ರಮೆ, ಐದೂ ವರ್ಷ ನಮ್ಮ ಸರ್ಕಾರ ಸುಭದ್ರ: ಸಿಎಂ ಸಿದ್ದರಾಮಯ್ಯ

Umesha Bhatta P H HT Kannada

Apr 18, 2024 05:47 PM IST

google News

ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.,

    • Karnataka Policits ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಗೌರಿಬಿದನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಪ್ರಚಾರ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.,
ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.,

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ. ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ದೇವೇಗೌಡರ ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ ಎಂದು ಖಚಿತವಾಗಿ ನುಡಿದರು.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.‌

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ. ಮಹಿಳೆಯರ ಖಾತೆಗೆ ವರ್ಷಕ್ಕೆ ಒಂದು ಲಕ್ಷ ರೂ ಜಮೆ ಆಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುತ್ತೇವೆ. ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ ರೈತರ ಕೈ ಹಿಡಿಯುತ್ತೇವೆ. ಬಿಜೆಪಿ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ ನಾವು ಇಡೀ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ. ಇಂಥಾ 25 ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು

ಇದಕ್ಕೂ ಮುನ್ನಾಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.‌

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ. ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದರು.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ