logo
ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Elections 2024: ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್

Lok Sabha Elections 2024: ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್

Raghavendra M Y HT Kannada

Apr 21, 2024 02:04 PM IST

google News

ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

    • ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೆಡಿಎಸ್ ನಾಯಕ ಹೆಚ್‌ಡಿಕೆ, ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧವೂ ಕೇಸ್ ದಾಖಲಾಗಿದೆ.
ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ತಮ್ಮ ಸಹೋದರ ಡಿ.ಕೆ ಸುರೇಶ್ (DK Suresh) ಅವರಿಗೆ ಮತ ಹಾಕಿದರೆ ಕಾವೇರಿ ನದಿಯಿಂದ ನೀರು ಪೂರೈಸುವುದಾಗಿ ಮತದಾರರಿಗೆ ಹೇಳಿದ್ದಾರೆ ಎನ್ನಲಾದ ವಿಡಿಯೊವನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಆರ್‌ಆರ್ ನಗರದ ಅಪಾರ್ಟ್‌ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್‌ಎಸ್‌ಟಿ ಎಫ್‌ಐಆರ್ ದಾಖಲಿಸಿದೆ. ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 (ಬಿ) (ಸಿ) (ಇ) (ಎಫ್) ಅಡಿಯಲ್ಲಿ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರುವ ಆರೋಪದಲ್ಲಿ ಕೇಸ್ ದಾಖಲಾಗಿದೆ.

ಡಿಕೆ ಶಿವಕುಮಾರ್ ಅವರು ಮಾಡಿರುವಂತ ಭಾಷಣ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಮತ್ತು "ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯವಾಗಿ ಪ್ರಭಾವ ಬೀರಿದ್ದಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೂ ಎಫ್‌ಐಆರ್

ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣದ ಅಧಿಕೃತ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಏಪ್ರಿಲ್ 19 ರಂದು ಬಿಜೆಪಿ ಕರ್ನಾಟಕ ಅಧಿಕೃತ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ವಿಜಯೇಂದ್ರ ವಿರುದ್ಧ ಬೆಂಗಳೂರಿನ ಎಫ್ಎಸ್‌ಟಿ ಎಫ್ಐಆರ್ ದಾಖಲಿಸಿದೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಂಖ್ಯೆ 60/2024 ಅನ್ನು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505, 153 (ಎ) ಅಡಿಯಲ್ಲಿ ದಾಖಲಿಸಲಾಗಿದೆ" ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚುನಾವಣೆ ಬಗ್ಗೆ ಸುಳ್ಳು ಹೇಳಿಕೆ ಆರೋಪದಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧವೂ ಎಫ್‌ಐಆರ್ ದಾಖಲು

ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಎಫ್ಐಆರ್ ಸಂಖ್ಯೆ 149/2024 ಅನ್ನು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (4) ಮತ್ತು ಐಪಿಸಿಯ 171 (ಜಿ) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಎಕ್ಸ್ ಖಾತೆಯನ್ನು ಪೋಸ್ಟ್ ಮಾಡಿದೆ.

ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳು ಭರ್ಜರಿಯಾಗಿ ನಡೆಯುತ್ತಿವೆ. ಏಪ್ರಿಲ್ 20ರ ಶನಿವಾರ ಬೆಂಗಳೂರಿನಲ್ಲಿ ಬಿಜೆಪಿ ಚುನಾವಣಾ ಸಭೆಯನ್ನು ಉದ್ದೇಶಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿಯನ್ನಾಗಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನು ಆಡಳಿತ ಪಕ್ಷ ಕಾಂಗ್ರೆಸ್ ಕೂಡ ತನ್ನದೇ ಧಾಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತಿವಿಯುತ್ತಿದೆ. 10 ವರ್ಷಗಳಿಂದ ಕರ್ನಾಟಕದ ಜನತೆಗೆ ಮೋದಿ ಸರ್ಕಾರ ಚೊಂಬು ನೀಡಿದೆ ಎಂದು ಜಾಹೀರಾತುಗಳನ್ನು ನೀಡಿದೆ. ಮೋದಿ ಸರ್ಕಾರಕ್ಕೆ ಕರ್ನಾಟಕ 100 ರೂಪಾಯಿ ಕಟ್ಟಿದರೆ ಮತ್ತೆ ನಮಗೆ ವಾಪಸ್ 13 ರೂಪಾಯಿ ಮಾತ್ರ ಸಿಗುತ್ತದೆ ಎಂದು ವಾಗ್ದಾಳಿ ನಡೆಸುತ್ತಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ