ಲೋಕಸಭಾ ಚುನಾವಣೆ 2024; ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಎದುರಾಳಿಗಳಾರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪೂರ್ಣ ಪಟ್ಟಿ
Mar 30, 2024 12:36 PM IST
ಲೋಕಸಭಾ ಚುನಾವಣೆ 2024; ಕರ್ನಾಟಕದ 28 ಕ್ಷೇತ್ರಗಳಲ್ಲಿ ಎದುರಾಳಿಗಳಾರು, ಬಿಜೆಪಿ+ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ವಿವರ. (ಸಾಂಕೇತಿಕ ಚಿತ್ರ)
ಲೋಕಸಭಾ ಚುನಾವಣೆ 2024ರ ಕಣ ಸಿದ್ಧವಾಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಎದುರಾಳಿಗಳಾರು, ಬಿಜೆಪಿ+ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪೂರ್ಣ ಪಟ್ಟಿ ಒಟ್ಟಿಗೆ ಒಂದೇ ಕಡೆ ಜೋಡಿಸಿ ಕೊಡಲಾಗಿದೆ. ಪೂರ್ಣ ವಿವರಕ್ಕೆ ಈ ವರದಿ ಓದಿ
ಬೆಂಗಳೂರು: ಲೋಕಸಭಾ ಚುನಾವಣೆ 2024ರ ದಿನಾಂಕಗಳು ಘೋಷಣೆಯಾಗಿವೆ. ಪಕ್ಷಗಳು ಕೂಡ ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರಚಾರದ ಕಾವು ನಿಧಾನವಾಗಿ ಏರತೊಡಗಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬೇಗನೆ ಘೋಷಿಸಿತು. ಬಿಜೆಪಿ ಸ್ವಲ್ಪ ವಿಳಂಬವಾಗಿ ತನ್ನ ಮೊದಲ ಪಟ್ಟಿ ಪ್ರಕಟಿಸಿದೆ. ಎರಡನೇ ಪಟ್ಟಿ ಬಿಡುಗಡೆಗೆ ಸ್ವಲ್ಪ ಸಮಯ ತೆಗೆದುಕೊಂಡಿತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಮಾಡಿಕೊಂಡಿದ್ದು, ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಸಜ್ಜಾಗಿವೆ.
ಕಳೆದ ಲೋಕಸಭಾ ಚುನಾವಣೆ (2019)ಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿದರೆ, ಒಂದು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವಿನ ನಗೆ ಬೀರಿದ್ದರು. ಈ ಬಾರಿ ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಸೇರಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾರು ಕಣಕ್ಕೆ ಇಳಿದಿದ್ದಾರೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿಗಳು ಯಾರು
ಜೆಡಿಎಸ್ ಪಕ್ಷದ ಮೂರು ಅಭ್ಯರ್ಥಿಗಳು, ಬಿಜೆಪಿಯ ಐದು, ಕಾಂಗ್ರೆಸ್ ಪಕ್ಷದ 4 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಷ್ಟೆ. ಬಹುತೇಕ 28 ಕ್ಷೇತ್ರಗಳಲ್ಲಿ ಮುಖಾಮುಖಿ ಸ್ಪರ್ಧೆ ಸಾಧ್ಯತೆಯೇ ಹೆಚ್ಚು.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
ವಿಭಾಗ