ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Elections 2024: ಕರ್ನಾಟಕದಲ್ಲಿ2ನೇ ಹಂತದ ಚುನಾವಣೆ ಭರಾಟೆ, ಕೇಂದ್ರ ಸಚಿವರು, ಮಾಜಿ ಸಿಎಂಗಳಿಂದ ನಾಮಪತ್ರ ಸಲ್ಲಿಕೆ

Lok Sabha Elections 2024: ಕರ್ನಾಟಕದಲ್ಲಿ2ನೇ ಹಂತದ ಚುನಾವಣೆ ಭರಾಟೆ, ಕೇಂದ್ರ ಸಚಿವರು, ಮಾಜಿ ಸಿಎಂಗಳಿಂದ ನಾಮಪತ್ರ ಸಲ್ಲಿಕೆ

Umesha Bhatta P H HT Kannada

Apr 15, 2024 02:46 PM IST

ಸೋಮವಾರ ಬಸವರಾಜ ಬೊಮ್ಮಾಯಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಗೀತಾ ಶಿವರಾಜಕುಮಾರ್‌, ಮೃಣಾಲ್‌ ಹೆಬ್ಬಾಳಕರ್‌ ನಾಮಪತ್ರ ಸಲ್ಲಿಸಿದ್ದಾರೆ.

  • ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ.

ಸೋಮವಾರ ಬಸವರಾಜ ಬೊಮ್ಮಾಯಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಗೀತಾ ಶಿವರಾಜಕುಮಾರ್‌, ಮೃಣಾಲ್‌ ಹೆಬ್ಬಾಳಕರ್‌ ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ಬಸವರಾಜ ಬೊಮ್ಮಾಯಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಗೀತಾ ಶಿವರಾಜಕುಮಾರ್‌, ಮೃಣಾಲ್‌ ಹೆಬ್ಬಾಳಕರ್‌ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ 2ನೇ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಿರುಸುಗೊಂಡಿದೆ. ಸೋಮವಾರ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ನಾನಾ ಕ್ಷೇತ್ರಗಳಲ್ಲಿ ಘಟಾನುಘಟಿ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಸಲ್ಲಿಸಿದರು. ಬೀದರ್‌, ಧಾರವಾಡ, ಬೆಳಗಾವಿ, ಹಾವೇರಿ, ಶಿವಮೊಗ್ಗದಲ್ಲಿ ಪ್ರಮುಖರು ನಾಮಪತ್ರವನ್ನು ತುಂಬಿದರು. ಅದರಲ್ಲೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತಖೂಬಾ, ನಿರ್ಮಾಪಕಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್‌, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ನಾಮಪತ್ರ ಸಲ್ಲಿಸಿದ ಪ್ರಮುಖರು. ಈಗಾಗಲೇ 14 ಕ್ಷೇತ್ರಗಳಿಗೆ ನಾಮಪತ್ರ ಪ್ರಕ್ರಿಯೆ ಮುಗಿದು ಪ್ರಚಾರ ಭರಾಟೆ ಜೋರಾಗಿದೆ. ಉಳಿದ 14 ಕ್ಷೇತ್ರಗಳಿಗೆ ನಾಮಪತ್ರ ಪ್ರಕ್ರಿಯೆ ನಡೆದಿದೆ. ಬೀದರ್‌, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾಗೂ ಹಾವೇರಿ- ಗದಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ಮೇ 7ರಂದು ನಡೆಯಲಿದೆ.

ಟ್ರೆಂಡಿಂಗ್​ ಸುದ್ದಿ

Hassan Scandal: ಸಂತ್ರಸ್ತ ಮಹಿಳೆ ಅಪಹರಣ, ಎಚ್‌ಡಿ ರೇವಣ್ಣ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

Cauvery Reservoirs: ಮಳೆ ಬಂದರೂ ಜಲಾಶಯಕ್ಕೆ ಬಾರದ ನೀರು, ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿ ಹೇಗಿದೆ

ಬೆಂಗಳೂರು ಕೆರೆಗಳ ಅಭಿವೃದ್ದಿಗೆ ಬಿಬಿಎಂಪಿಯಿಂದ ಹೊಸ ನೀತಿ; ಖಾಸಗಿ ಸಂಸ್ಥೆಗಳಿಗೆ ಅವಕಾಶ; ಹೈಕೋರ್ಟ್ ಅನುಮತಿ ನಿರೀಕ್ಷೆಯಲ್ಲಿ ಪಾಲಿಕೆ

Bengaluru News: ಬೆಂಗಳೂರಿನ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇಮೇಲ್; ಪರಿಶೀಲನೆ ಬಳಿಕ ಹುಸಿ ಬಾಂಬ್ ಎಂದ ಪೊಲೀಸರು

ಧಾರವಾಡದ ಜೋಶಿ

ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿಗೆ ನಾಮಪತ್ರವನ್ನು ಸಲ್ಲಿಸಿದರು. ಧಾರವಾಡ ಡಿಸಿ ಕಚೇರಿಗೆ ಆಗಮಿಸಿದ ಜೋಶಿ ಜಿಲ್ಲಾಧಿಕಾರಿ ಈಗಾಗಲೇ ನಾಲ್ಕು ಬಾರಿ ಇದೇ ಕ್ಷೇತ್ರದಿಂದ ಗೆದ್ದಿರುವ ಜೋಶಿ ಅವರು ಕೇಂದ್ರದಲ್ಲಿ ಸಚಿವರೂ ಆಗಿದ್ಧಾರೆ. ಧಾರವಾಡದ ಶಿವಾಜಿ ವೃತ್ತದಿಂದ ಮೆರವಣಿಗೆ ಹೊರಟ ಪ್ರಲ್ಹಾದ ಜೋಶಿ ಅವರಿಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವರಾದ ಸಿ.ಟಿ.ರವಿ, ಬೈರತಿ ಬಸವರಾಜ ಮತ್ತಿತರರು ಜತೆಯಾದರು.

ಬೆಳಗಾವಿಯಲ್ಲಿ ಹೆಬ್ಬಾಳಕರ್‌

ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮೃಣಾಲ್‌ ಹೆಬ್ಬಾಳಕರ್‌ ಅವರು ಬೆಳಗಾವಿಯಲ್ಲಿ ನಾಮಪತ್ರವನ್ನು ಸಲ್ಲಿಸಿದರು. ಇವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್‌, ಶಾಸಕರಾದ ಪ್ರಕಾಶ್‌ ಹುಕ್ಕೇರಿ, ಲಕ್ಷ್ಮಣ ಸವದಿ, ರಾಜು ಕಾಗೆ, ಮಹಾಂತೇಶ್‌ ಕೌಜಲಗಿ, ವಿಶ್ವಾಸ್‌ ವೈದ್ಯ, ರಾಜು ಸೇಠ್‌ ಸಹಿತ ಹಲವರು ಜತೆಯಾದರು. ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರ ನಾಮಪತ್ರವನ್ನು ಸ್ವೀಕರಿಸಿದರು.

ಇದಕ್ಕೂ ಮೊದಲು ಮನೆಯಲ್ಲಿ ಮೃಣಾಲ್‌ ಹಾಗೂ ಅವರ ಪತ್ನಿ ಹಿತಾ ಹೆಬ್ಬಾಳಕರ್‌ ಅವರು ಗೋಪೂಜೆ ನೆರವೇರಿಸಿದರು. ಅಲ್ಲದೇ ಮಠಾಧೀಶರ ಪೂಜೆಯನ್ನು ಮಾಡಿ ಆಶಿರ್ವಾದ ಪಡೆದರು.

ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸೇರಿದಂತೆ 20 ಮಠಾಧೀಶರು ಮೃಣಾಲ್‌ ಅವರನ್ನು ಅವರ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಕುಟುಂಬ ಸಮೇತ ಸುಳೇಭಾವಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ, ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು.

ಈ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್‌, ಹಟ್ಟಿಹೊಳಿಯಲ್ಲಿ ವೀರಭದ್ರೇಶ್ವರ ಹಾಗೂ ಸುಳೇಭಾವಿಯಲ್ಲಿ ಲಕ್ಷ್ಮಿದೇವಿ ಪೂಜೆ ಮಾಡಿ ಬಂದಿದ್ದೇವೆ. ಮಠಾಧೀಶರನ್ನು ಮನೆಗೆ ಕರೆದು ಪಾದಪೂಜೆ ಮಾಡಿದ್ದು, ವಿಜಯಯಾತ್ರೆಯ ಸಂಕಲ್ಪ ಇಟ್ಟುಕೊಂಡು ಪೂಜೆ ಮಾಡಿದ್ದೇವೆ. ಮೃಣಾಲ್‌ ಈ ಬಾರಿ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಹಾವೇರಿಯಲ್ಲಿ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಆಗಮಿಸಿದ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ರಘುನಂದನಮೂರ್ತಿ ಅವರಿಗೆ ಉಮೇದುವಾರಿಕೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಬಿಜೆಪಿ ಮುಖಂಡ ಶಂಕರಣ್ಣ ಮಾಂತನವರ ಹಾಜರಿದ್ದರು.

ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್‌

ಚಿತ್ರ ನಿರ್ಮಾಪಕಿ ಹಾಗೂ ನಟ ಶಿವರಾಜಕುಮಾರ್‌ ಅವರ ಪತ್ನಿ ಗೀತಾ ಶಿವರಾಜಕುಮಾರ್‌ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸೋಮವಾರ ನಾಮಪತ್ರಗಳನ್ನು ತುಂಬಿದರು. ಮೆರವಣಿಗೆಯಲ್ಲಿ ಪತಿ ಶಿವರಾಜಕುಮಾರ್‌, ಸಚಿವ ಮಧುಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಅವರೊಂದಿಗೆ ಆಗಮಿಸಿ ಗೀತಾ ಅವರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜಕುಮಾರ್‌ ಅವರು ಈ ಹಿಂದೆ ಜೆಡಿಎಸ್‌ ನಿಂದ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದಿದ್ದಾರೆ.

ಬೀದರ್‌ನಲ್ಲಿ ಭಗವಂತ ಖೂಬಾ

ಬೀದರ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರು ಸೋಮವಾರ ಬೀದರ್‌ನಲ್ಲಿ ನಾಮಪತ್ರ ಸಲ್ಲಿಸಿದರು. ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಗೋವಿಂದರೆಡ್ಡಿ ನಾಮಪತ್ರವನ್ನು ಸ್ವೀಕರಿಸಿದರು. ಈಗಾಗಲೇ ಎರಡು ಬಾರಿ ಗೆಲುವು ಸಾಧಿಸಿರುವ ಖೂಬಾ ಮೂರನೇ ಬಾರಿ ತಮ್ಮ ಅದೃಷ್ಟ ಪರೀಕ್ಷೆಗೆ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯ ಪ್ರಮಖರಾದ ರಘುನಾಥ್‌ ರಾವ್‌ ಮಲ್ಕಾಪುರೆ, ಸೋಮನಾಥ ಪಾಟೀಲ, ಎಂ.ಜಿ.ಮುಳೆ, ಬಸವರಾಜ ಆರ್ಯ ಅವರು ಖೂಬಾ ಅವರಿಗೆ ಸಾಥ್‌ ನೀಡಿದರು. ಮತ್ತೊಮ್ಮೆ ಖೂಬಾ ಅವರು ಏ.18ರಂದು ನಾಮಪತ್ರ ಸಲ್ಲಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯಪುರದಲ್ಲಿ ರಾಜು ಅಲಗೂರ

ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮತ್ತು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ, ಉಪಸ್ಥಿತರಿದ್ದರು. ಎರಡನೇ ಸೆಟ್ ನಲ್ಲಿ ನಾಮಪತ್ರ ಸಲ್ಲಿಸುವ ವೇಳೆ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ನ್ಯಾಮಗೊಂಡ, ಮುಖಂಡರಾದ ಅಬ್ಲುದ್ ಹಮೀದ್ ಮುಶ್ರಿಫ್, ಪೂಜಾರಿ ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ