logo
ಕನ್ನಡ ಸುದ್ದಿ  /  ಕರ್ನಾಟಕ  /  Modi In Bangalore: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ, ಅರಮನೆ ಮೈದಾನದಲ್ಲಿ ಪಕ್ಷದ ಸಮಾವೇಶ; ಈ ರಸ್ತೆಗಳಲ್ಲಿ ಸಂಚರಿಸಬೇಡಿ

Modi in Bangalore: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ, ಅರಮನೆ ಮೈದಾನದಲ್ಲಿ ಪಕ್ಷದ ಸಮಾವೇಶ; ಈ ರಸ್ತೆಗಳಲ್ಲಿ ಸಂಚರಿಸಬೇಡಿ

Umesha Bhatta P H HT Kannada

Apr 20, 2024 08:33 AM IST

google News

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆಯಾಗಿದೆ

    • ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವುದರಿದ ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
    • ವರದಿ: ಎಚ್‌.ಮಾರುತಿ,ಬೆಂಗಳೂರು
 ಪ್ರಧಾನಿ ಮೋದಿ ಬೆಂಗಳೂರು ಭೇಟಿ  ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆಯಾಗಿದೆ
ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆಯಾಗಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಶನಿವಾರ ಆಗಮಿಸುತ್ತಿದ್ದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಶನಿವಾರ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಅಂದು ಮಧ್ಯಾಹ್ನ 1 ರಿಂದ ರಾತ್ರಿ 7 ಗಂಟೆವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಅಲ್ಲದೇ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಮಧ್ಯಾಹ್ನ 4 ಗಂಟೆಗೆ ಅರಮನೆ ಮೈದಾನದ ಗೇಟ್ ನಂ 4, ಗಾಯತ್ರಿ ವಿಹಾರದಲ್ಲಿ ಈ ಸಮಾವೇಶ ನಡೆಯಲಿದೆ. ಭದ್ರತಾ ದೃಷ್ಟಿಯಿಂದ ಮಧ್ಯಾಹ್ನ 1 ರಿಂದಲೇ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಪ್ಯಾಲೇಸ್‌ ರಸ್ತೆ, ಎಂ.ವಿ.ಜಯರಾಮ್‌ ರಸ್ತೆ, ವಸಂತನಗರ ರಸ್ತೆ, ಜಯಮಹಲ್‌ ರಸ್ತೆ, ಸಿ.ವಿ.ರಾಮನ್‌ ರಸ್ತೆ, ಬಳ್ಳಾರಿ ರಸ್ತೆ, ರಮಣಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್‌ ಕಾಲೇಜು ರಸ್ತೆ, ಮೇಖ್ರಿ ವೃತ್ತದಿಂದ ಯಶವಂತಪುರದವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ.

ಸರಕು ಸಾಗಣೆ ವಾಹನ ನಿಷೇಧ: ಮಧ್ಯಾಹ್ನ 12ರಿಂದ ರಾತ್ರಿ 9ರ ವರೆಗೆ ಸಿಎಂಟಿಐ ಜಂಕ್ಷನ್‌, ಮೈಸೂರು ಬ್ಯಾಂಕ್‌ ಜಂಕ್ಷನ್‌, ಹೆಬ್ಬಾಳ ಜಂಕ್ಷನ್‌, ನ್ಯೂ ಬಿಇಎಲ್‌ ಜಂಕ್ಷನ್‌, ಬಸವೇಶ್ವರ ಸರ್ಕಲ್‌, ಓಲ್ಡ್‌ ಉದಯ ಟಿವಿ ಜಂಕ್ಷನ್‌, ಹಜ್‌ ಕ್ಯಾಂಪ್‌ ನಂದಿದುರ್ಗ ರಸ್ತೆ, ಯಶವಂತಪುರ ಗೋವರ್ಧನ್‌ ಮೂಲಕ ಭಾರೀ ವಾಹನಗಳು ನಗರಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

(ವರದಿ: ಎಚ್. ಮಾರುತಿ,ಬೆಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ