Mandya News: ಮಲೈಮಹದೇಶ್ವರ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ, ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ
May 16, 2023 04:19 PM IST
Mandya News: ಮಲೈಮಹದೇಶ್ವರ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ, ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ
- Melukote News: ತಿರುಪತಿಗೆ ಸಮಾನ ಮಹತ್ವವಿರುವ ರಾಮಾನುಜರ ಕರ್ಮಭೂಮಿ ಮೇಲುಕೋಟೆಗೆ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಮಲೈಮಹದೇಶ್ವರ ಮಾದರಿಯಲ್ಲಿ ಅಭಿವೃದ್ಧಿಮಾಡಲಾಗುತ್ತದೆ ಎಂದು ನೂತನ ಶಾಸಕ ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಮೇಲುಕೋಟೆ: ತಿರುಪತಿಗೆ ಸಮಾನ ಮಹತ್ವವಿರುವ ರಾಮಾನುಜರ ಕರ್ಮಭೂಮಿ ಮೇಲುಕೋಟೆಗೆ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಮಲೈಮಹದೇಶ್ವರ ಮಾದರಿಯಲ್ಲಿ ಅಭಿವೃದ್ಧಿಮಾಡಲಾಗುತ್ತದೆ ಎಂದು ನೂತನ ಶಾಸಕ ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಅವರು ಶಾಸಕರಾಗಿ ಆಯ್ಕೆಯಾದ ನಂತರ ಚೆಲುವನಾರಾಯಣಸ್ವಾಮಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇಲುಕೋಟೆ ಜಿಲ್ಲೆಯ ಪ್ರಖ್ಯಾತ ಪ್ರವಾಸಿಕ್ಷೇತ್ರವಾದರೂ ಮೂಲಸೌಕರ್ಯದಿಂದ ವಂಚಿತವಾಗಿದೆ. ಬರುವ ಭಕ್ತರು ಮತ್ತು ನಾಗರೀಕರ ಅನುಕೂಲಕ್ಕಾಗಿ ದೇವಾಲಯ ಹಾಗೂ ಬೆಟ್ಟದ ಬಳಿ ಶುದ್ಧಕುಡಿಯುವ ನೀರಿನ ಘಟಕಗಳು ಹಾಗೂ ಅತ್ಯಾಧುನಿಕ ಶೌಚಾಲಯಗಳನ್ನು ತಕ್ಷಣವೇ ನಿಮರ್ಿಸಲಾಗುತ್ತದೆ. ನಾಗರೀಕರಿಗೆ ಪ್ರತಿದಿನ ಶುದ್ಧಕುಡಿಯುವ ನೀರಿನ ಪೂರೈಕೆ ಮಾಡಲುಕ್ರಮವಹಿಸಿ, ದೇವಾಲಯಕ್ಕೆ ಸೇರಿದ ಜಮೀನುಗಳನ್ನು ವಶಕ್ಕೆ ಪಡೆದು ಭಕ್ತರು ಉಳಿದುಕೊಳ್ಳಲು ಅನುಕೂಲವಾಗುವಂತೆ ವಸತಿಗೃಹಗಳನ್ನು ನಿಮರ್ಿಸಲಾಗುತ್ತದೆ ಎಂದರು
ನಮ್ಮ ತಂದೆ ಪುಟ್ಟಣ್ಣಯ್ಯ ಶಾಸಕರಾಗಿದ್ದವೇಳೆ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಕಾಂಕ್ರೀಟ್ ರಸ್ತೆ ನಿಮರ್ಿಸಲು 2ಕೋಟಿ ರೂ ಅನುದಾನ ಮಂಜೂರುಮಾಡಿಸಿದ್ದರು ಆದರೆ ಐದುವರ್ಷಕಳೆದರೂ ಆಕಾರ್ಯ ಆರಂಭವಾಗಿಲ್ಲ. ತಕ್ಷಣವೇ ಕಾಮಗಾರಿ ಆರಂಭಿಸಲಾಗುತ್ತದೆ. ಸಣ್ಣನೀರಾವರಿ ಇಲಾಖೆಯಿಂದ 32ಕೋಟಿರೂ ವೆಚ್ಚದಲ್ಲಿ ಕಲ್ಯಾಣಿ ಮತ್ತು ಕೊಳಗಳ ಅಭಿವೃದ್ಧಿಮಾಡುವ ಕಾರ್ಯ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ ಆದರೆ ಕಾಮಗಾರಿಯೇ ಆರಂಭವಾಗಿಲ್ಲ 2ಕೋಟಿರೂ ವೆಚ್ಚದಲ್ಲಿ ನಿಮರ್ಾಣವಾದ ಅನ್ನದಾನ ಭವನ ಒಂದು ವರ್ಷದಿಂದ ಅನಾಥಕಟ್ಟಡವಾಗಿದೆ. ಪ್ರಾಚ್ಯವಸ್ತುಇಲಾಖೆಯಿಂದ ನಡೆಯಬೇಕಾದ ವಸಂತೋದ್ಯಾನ ಮಂಟಪ ನವೀಕರಣ ಕಾಮಗಾರಿಯೂ ಆರಂಭವಾಗಿಲ್ಲ. ಯೋಗಾನರಸಿಂಹಸ್ವಾಮಿ ಬೆಟ್ಟದ ಸುತ್ತ ಒತ್ತುವರಿಯಾಗಿರುವದನ್ನು ತೆರವುಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಿಲ್ಲ ಇನ್ಪೋಸಿಸ್ ಸುದಾಮೂತರ್ಿಯವರನ್ನು ಮೇಲುಕೋಟೆ ಕಲ್ಯಾಣಿ ಮತ್ತು ಮೂಲಸೌಕರ್ಯಕಲ್ಪಿಸಲು ಮತ್ತೆ ಬರುವಂತೆ ಮನವೊಲಿಸುತ್ತೇನೆ ಅವರು ಬೇಸರದೊಂದಿಗೆ ಅಭಿವೃದ್ಧಿಕಾರ್ಯವನ್ನು ನಿಲ್ಲಿಸಿದ್ದಾರೆ. ಎಂದರು.
ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ದರ್ಶನ್ ಪುಟ್ಟಣಯ್ಯ
ಮೇಲುಕೋಟೆ ದೇವಾಲಯದಲ್ಲಿ ಅಧಿಕಾರಿಗಳು, ಕಚೇರಿಸಿಬ್ಬಂದಿ ಒಂದು ಪಕ್ಷದ ಏಜಂಟರಂತೆ ನಡೆದುಕ್ಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪ ಇದೆ. ದೇಗುಲದ ಇಒಗೆ ಕ್ರಮವಹಿಸಲು ಸೂಚಿಸಿದ್ದೇನೆ ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಲಾಗಿದೆ ತಾಲ್ಲೂಕಿನಲ್ಲೂ ಸಹ ಭ್ರಷ್ಠಾಚಾರ ಮಿತಿಮೀರಿದ್ದು ರೈತರನ್ನು ವಿನಾಕಾರಣ ಅಲೆದಾಡಿಸಲಾಗುತ್ತಿದೆ ಇನ್ನು ಮುಂದೆ ಅಧಿಕಾರಿಗಳು ಕಾನೂನುಬದ್ಧವಾಗಿ ಕೆಲಸಮಾಡುವಮೂಲಕ ರೈತರ ಮತ್ತು ನಾಗರೀಕರ ಸಮಸ್ಯೆ ಪರಿಹರಿಸಬೇಕು ಈ ಸಂಬಂಧ ದೂರುಗಳು ಕೇಳಿ ಬಂದರೆ ಕ್ರಮವಹಿಸಲಾಗುತ್ತದೆ ಎಂದು ಎಚ್ಚರಿಸಿದರು.
ಮೇಲುಕೋಟೆ ಪ್ರಾಥಮಿಕ ಆರೋಗ್ಯಕೇಂದ್ರ ಸಮುದಾಯ ಆರೋಗ್ಯಕೇಂದ್ರವಾಗಿ ಉನ್ನತೀಕರಣಗೊಂಡಿದ್ದು ಕಾಮಗಾರಿ ಆರಂಭಿಸಲಾಗುತ್ತದೆ ಪ್ರಾಥಮಿಕ ಕೇಂದ್ರ ಮತ್ತು ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬುದು ಬಡವರ ಅಳಲಾಗಿದ್ದು ಆರೋಗ್ಯ ಇಲಾಖೆ ಸಿಬ್ಬಂದಿಗಳು ಬಡವರ ಸಂಕಷ್ಠಕ್ಕೆ ಸ್ಪಂದಿಸಬೇಕು ಎಂದರು.
ಸರ್ಕಾರಿ ಶಾಲೆಗಳ ಬಲವರ್ಧನೆ ಮೊದಲ ಆದ್ಯತೆ
ಮೇಲುಕೋಟೆಯಲ್ಲಿ ಕವಿಪುತಿನ ವ್ಯಾಸಂಗಮಾಡಿದ ಶತಮಾನದ ಶಾಲೆಯನ್ನು ಬಲವರ್ಧನೆ ಮಾಡಲಾಗುತ್ತದೆ ಅಲ್ಲಿಗೆ ಮಂಜೂರಾದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಗ್ರಾ.ಪಂ ಪಿಡಿಒಗೆ ಸೂಚಿಸಿದ್ದೇನೆ ತಾಲ್ಲೂಕಿನ ಸರ್ಕಾರಿ ಶಾಲೆಗಳ ಬಲವರ್ಧನೆಗೆ ವಿಶೇಷ ಕಾರ್ಯಯೋಜನೆ ಹಾಕಿಕೊಂಡಿದ್ದು, ಗ್ರಾ.ಪಂ ಹಾಗೂ ಹಿರಿಯ ವಿದ್ಯಾಥರ್ಿಗಳ ಸಹಕಾರದಿಂದ ಶಾಲೆಗಳನ್ನು ಬಲವರ್ಧನೆ ಮಾಡುವ ಗುರಿಹೊಂದಿದ್ದೇನೆ ಎಂದು ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಶಾಸಕರಾಗಿ ಪ್ರಥಮಬಾರಿಗೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಆಗಮಿಸಿದ ದರ್ಶನ್ ಪುಟ್ಟಣ್ಣಯ್ಯರನ್ನು ದೇವಾಲಯದ ಪರವಾಗಿ ಕಾರ್ಯನಿವರ್ಾಹಕ ಅಧಿಕಾರಿ ಮಹೇಶ್ ಸ್ಥಾನೀಕರಾದ ಶ್ರೀನಿವಾಸನರಸಿಂಹನ್ ಗುರೂಜಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಮುಖಂಡ ಕೆ.ಬಿ ನರಸಿಂಹೇಗೌಡ ಕನಗೋನಹಳ್ಳಿ ಪರಮೇಶ್ಗೌಡ ರೈತಸಂಘದ ಹೊಸಕೋಟೆ ವಿಜಯಕುಮಾರ್, ನ್ಯಾಮನಹಳ್ಳಿ ಶಿವರಾಮೇಗೌಡ, ಈಶಮುರುಳಿ, ದೀಲೀಪ್ ಸುಬ್ಬಣ್ಣ ವೆಂಕಟರಾಮೇಗೌಡ ಯೋಗನರಸಿಂಹೇಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.