ಶಿಕ್ಷಕರನ್ನು ನೇಮಿಸಿ, ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮಕ್ಕೆ ತಿದ್ದುಪಡಿ ತನ್ನಿ; ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಮುಖ ನಿರ್ಣಯಗಳಿವು
Dec 22, 2024 05:30 PM IST
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊನೆಯ ದಿನ ಕಂಡು ಬಂದ ಸಾಹಿತ್ಯಾಭಿಮಾನಿಗಳು
- Mandya Sahitya Sammelana: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕವೂ ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.
ಮಂಡ್ಯ: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು.ಕರ್ನಾಟಕದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಹಲವಾರು ವರ್ಷಗಳ ಹಿಂದೆಯೇ ನೀಡಲಾಗಿರುವ ಸರೋಜಿನಿ ಮಹಿಷಿ ವರದಿಯನ್ನು ಕಾನೂನು ಬದ್ದವಾಗಿ ಜಾ|#+|ರಿಗೊಳಿಸಿ ಉದ್ಯೋಗ ಸಿಗುವಂತೆ ಮಾಡಿ. ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮಕ್ಕೆ ತಿದ್ದುಪಡಿ ತಂದು ಬಲ ನೀಡಿ. ಕರ್ನಾಟಕ ರಾಷ್ಟ್ರಕವಿ ಆಯ್ಕೆಗೆ ಕೂಡಲೇ ಸಮಿತಿಯನ್ನು ರಚಿಸಿ ಪ್ರಕ್ರಿಯೆಯನ್ನು ಆರಂಭಿಸಿ, ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಸಾಪ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಲು ಮುಂದಾಗಿ ಎನ್ನುವುದು ಸೇರಿದಂತೆ ಪ್ರಮುಖ ಆರು ನಿರ್ಣಯಗಳನ್ನು ಇಂದಿಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಂಡಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ ಅವರು ಮಂಡಿಸಿದರು. ಇದಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಯಿತು.
ನಿರ್ಣಯಗಳ ಪಟ್ಟಿ ಇಲ್ಲಿದೆ
- ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಮಯ 2022ರ ಎಲ್ಲಾ ಉಪಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಮಯವು ಸಮಗ್ರವಾಗಿ ಜಾರಿಗೆ ಬರಬೇಕಿದೆ. ಅಲ್ಲದೇ ಕೂಡಲೇ ಅನುಷ್ಠಾನ ಕೂಡ ಆಗಬೇಕಾಗಿದೆ. ಸ್ವಾಯತ್ತತೆ ಹಿಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ನಿಯಮ 2022ರ ರಾಜ್ಯ ಮಟ್ಟ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಕ್ತ ತಿದ್ದುಪಡಿ ತರಬೇಕು.
- ಕರ್ನಾಟಕದಲ್ಲಿರುವ ಸರ್ಕಾರದ ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿದಂತೆ ಇತರರೆ ಮೂಲಸೌಕರ್ಯಗಳನ್ನು ಒದಗಿಸುವ ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು
ಇದನ್ನೂ ಓದಿರಿ: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಮಾಡಿ ಪ್ರತಿಭಟನೆ; ಊಟದೊಂದಿಗೆ ಮೊಟ್ಟೆ ವಿತರಣೆಗೆ ಸಿದ್ದತೆ: ಅರ್ಧ ಗೆದ್ದ ಆಹಾರ ಸಂಸ್ಕೃತಿ ಬೇಡಿಕೆ - ಕನ್ನಡ ಅನ್ನದ ಭಾಷೆಯಾಗಲು ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಪಕವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ದಗೊಳಿಸಿ ಅನುಷ್ಠಾನಗೊಳಿಸಬೇಕು.
- ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು
ಇದನ್ನೂ ಓದಿರಿ: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಶಿಕ್ಷಕನ ಹವ್ಯಾಸ, ಇವರ ಸುದ್ದಿಪತ್ರಿಕೆಗಳ ಸಂಗ್ರಹ ನೋಡಿದ್ರೆ ನೀವು ನಿಬ್ಬೆರಗಾಗುವುದು ಖಂಡಿತ - ಕರ್ನಾಟಕ ಸರ್ಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು.
- ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಕಾರಣರಾದ ಸ್ವಾಗತ ಸಮಿತಿಯ ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರಿಗೂ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತ್ಯಜ್ಞತೆಗಳು.