logo
ಕನ್ನಡ ಸುದ್ದಿ  /  ಕರ್ನಾಟಕ  /  Cauvery Water: ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದು ಲೋಕಸಭೆ ಚುನಾವಣೆ ಹೊಂದಾಣಿಕೆಗೆ: ಪ್ರತಿಪಕ್ಷ ನಾಯಕ ಆಶೋಕ್‌ ಟೀಕಾಪ್ರಹಾರ

Cauvery water: ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದು ಲೋಕಸಭೆ ಚುನಾವಣೆ ಹೊಂದಾಣಿಕೆಗೆ: ಪ್ರತಿಪಕ್ಷ ನಾಯಕ ಆಶೋಕ್‌ ಟೀಕಾಪ್ರಹಾರ

Umesha Bhatta P H HT Kannada

Mar 10, 2024 04:32 PM IST

google News

ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಭಟಿಸಿದರೆ. ಪ್ರತಿ ಪಕ್ಷ ನಾಯಕ ಆರ್‌. ಅಶೋಕ್‌ ಕೂಡ ಆಕ್ರೋಶ ಹೊರ ಹಾಕಿದರು,

    • BJP Protest ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ಬಿಜೆಪಿಯಿಂದ ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕೂಡ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಭಟಿಸಿದರೆ. ಪ್ರತಿ ಪಕ್ಷ ನಾಯಕ ಆರ್‌. ಅಶೋಕ್‌ ಕೂಡ ಆಕ್ರೋಶ ಹೊರ ಹಾಕಿದರು,
ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಭಟಿಸಿದರೆ. ಪ್ರತಿ ಪಕ್ಷ ನಾಯಕ ಆರ್‌. ಅಶೋಕ್‌ ಕೂಡ ಆಕ್ರೋಶ ಹೊರ ಹಾಕಿದರು,

ಬೆಂಗಳೂರು: ಮಂಡ್ಯದ ಕೃಷ್ಣರಾಜಸಾಗರ ಜಲಾಶಯದಿಂದ 4500 ಹಾಗೂ ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಿಂದ 2000 ಸಾವಿರ ಕ್ಯೂಸೆಕ್‌ ನೀರನ್ನು ಏಕಾಏಕಿ ಹರಿಬಿಡಲಾಗುತ್ತಿದೆ. ಈ ಗಾಗಲೇ ಮಂಡ್ಯ ಭಾಗದಲ್ಲಿ ಬಿಜೆಪಿ ಹಾಗೂ ರೈತ, ಕನ್ನಡ ಪರ ಸಂಘಟನೆಗಳು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿವೆ. ಇದರ ನಡುವೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ ಮಾನವಿದ್ದರೆ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು, ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ನಾಯಕರಿಗೆ ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ. ನಾವು ಸರ್ಕಾರ ನಡೆಸುವಾಗ ಕೇಂದ್ರದ ಕಡೆ ನೋಡದೆ ರೈತರಿಗೆ ಪರಿಹಾರ ನೀಡಲಾಗಿತ್ತು. ಈಗಿನ ಸರ್ಕಾರ ಪಾಪರ್‌ ಆಗಿದ್ದು, ಕುಡಿಯುವ ನೀರಿಗೂ ಹಣವಿಲ್ಲ. ಕುಡಿಯುವ ನೀರು ಕೊಡುವ ಯೋಗ್ಯತೆ ಇಲ್ಲವಾದರೆ ಕುರ್ಚಿ ಬಿಟ್ಟು ತೊಲಗಲಿ ಎಂದು ಆಗ್ರಹಿಸಿದರು.

ಬರ ಪರಿಹಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಎಸ್‌ಡಿಆರ್‌ಎಫ್‌ ಹಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತಲುಪಿದೆ. ಎನ್‌ಡಿಆರ್‌ಎಫ್‌ ಹಣವನ್ನು ಕೇಂದ್ರ ಸರ್ಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರ್ಕಾರ ತಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರ್ಕಾರ ಹಣ ನೀಡಿತ್ತು. ಮನಮೋಹನ್‌ ಸಿಂಗ್‌ ಸರ್ಕಾರವಿದ್ದಾಗ ಇದೇ ರೀತಿ ತಡವಾಗಿ ಪರಿಹಾರ ನೀಡಲಾಗಿತ್ತು. ಆಗ ಬಾಯಿ ಬಡಿದುಕೊಳ್ಳದ ಕಾಂಗ್ರೆಸ್‌, ಈಗ ಮಾತ್ರ ಬಾಯಿ ಬಡಿಯುತ್ತಿದೆ. ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೆ ರಾಜಕೀಯ ಮಾಡುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಪ್ರಧಾನಿಯ ಬಗ್ಗೆ ಉತ್ತಮವಾಗಿ ಮಾತನಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ನಾಯಕರು ಅವರ ಬಳಿ ಟ್ಯೂಶನ್‌ ಪಡೆಯಲಿ ಎಂದರು.

ಮಂಡ್ಯದಲ್ಲಿ ಪ್ರತಿಭಟನೆ

ಕಾವೇರಿ ನೀರು ಏಕಾಏಕಿ ತಮಿಳುನಾಡಿಗೆ ಹರಿಸಲಾಗುತ್ತಿದೆ. ಮಾರ್ಚ್‌ ತಿಂಗಳ ಕೋಟಾವನ್ನು ಜಲಾಶಯಗಳ ಮೂಲಕ ಹರಿಸಲಾಗುತ್ತಿದೆ. ಕರ್ನಾಟಕದಲ್ಲಿಯೇ ನೀರಿಗೆ ಸಮಸ್ಯೆಯಾಗಿರುವಾಗ ತಮಿಳುನಾಡಿಗೆ ಹರಿಸುತ್ತಿವುದು ಎಷ್ಟು ಸರಿ ಎಂದು ಬಿಜೆಪಿ, ಕನ್ನಡ ಪರ ಸಂಘಟನೆಗಳು ಮಂಡ್ಯ, ಶ್ರೀರಂಗಪಟ್ಟಣದಲ್ಲಿ ಹೋರಾಟ ನಡೆಸಿದವು. ಭಾನುವಾರ ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರೆ, ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗೆ ಇಳಿದು ಹೋರಾಟಗಾರರು ಆಕ್ರೋಶ ಹೊರ ಹಾಕಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ