logo
ಕನ್ನಡ ಸುದ್ದಿ  /  ಕರ್ನಾಟಕ  /  Mandya News: ನಾಗಮಂಗಲದಲ್ಲಿ ಕೇಂದ್ರ ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಸಂಸ್ಥೆ ಆರಂಭ: ದಕ್ಷಿಣ ಭಾರತದ ಮೊದಲ ಕೇಂದ್ರವಿದು

Mandya News: ನಾಗಮಂಗಲದಲ್ಲಿ ಕೇಂದ್ರ ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಸಂಸ್ಥೆ ಆರಂಭ: ದಕ್ಷಿಣ ಭಾರತದ ಮೊದಲ ಕೇಂದ್ರವಿದು

Umesha Bhatta P H HT Kannada

Jan 21, 2024 07:26 PM IST

google News

ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಉದ್ಘಾಟಿಸಲಾಯಿತು.

    • Ayush center ಕೇಂದ್ರ ಸರ್ಕಾರವು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಶಾಲ ಆಯುರ್ವೇದ ಕೇಂದ್ರವನ್ನು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಆರಂಭಿಸಿದ್ದು. ಅದನ್ನು ಭಾನುವಾರ ಉದ್ಘಾಟಿಸಲಾಯಿತು.
ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಉದ್ಘಾಟಿಸಲಾಯಿತು.
ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಉದ್ಘಾಟಿಸಲಾಯಿತು.

ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಸ್ಥಾಪನೆಯಾಗಿದೆ. ದಕ್ಷಿಣ ಭಾರತದಲ್ಲೇ ಕೇಂದ್ರ ಸರ್ಕಾರ ಸ್ಥಾಪಿಸುತ್ತಿರುವ ಮೊದಲನೆಯ ಕೇಂದ್ರವಿದು. ಆಯುರ್ವೇದಕ್ಕೆ ಸಂಬಂಧಿಸಿದ ಎಲ್ಲಾ ಚಿಕಿತ್ಸೆಗಳು ಇಲ್ಲಿ ಲಭ್ಯವಿವೆ. ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 200 ಹಾಸಿಗೆಗಳ ಆಸ್ಪತ್ರೆಯಿದು. ಇಲ್ಲಿ ಹಲವು ರೀತಿಯ ಚಿಕಿತ್ಸೆಗಳು ಕಡಿಮೆ ವೆಚ್ಚದಲ್ಲಿ ಸಾರ್ವಜನಿಕರಿಗೆ ಸಿಗಲಿವೆ. ಇಲ್ಲಿಯೇ ಆಯುರ್ವೇದ ಕಾಲೇಜು ಆರಂಭಿಸುವ ಉದ್ದೇಶವಿದ್ದು. ಅದು ಜಾರಿಯಾದರೆ ಅತಿ ದೊಡ್ಡ ಆಯುರ್ವೇದ ಶಿಕ್ಷಣ ಹಾಗೂ ಚಿಕಿತ್ಸಾ ಕೇಂದ್ರ ಇದಾಗಲಿದೆ.

ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಚಿವರಾದ ಡಾ. ಮುಂಜಪರ ಮಹೇಂದ್ರಬಾಯ್ ಕಲುಬಾಯ್ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.

ಆಯುರ್ವೇದದ ಅನಿವಾರ್ಯತೆ

ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ ಅವರು, ಸರ್ಕಾರಗಳು ಸಾರ್ವಜನಿಕರಿಗೆ ಅವಶ್ಯಕತೆ ಇರುವ ಯೋಜನೆಯನ್ನೇ ಜಾರಿಗೆ ತರುತ್ತವೆ. ಆ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಂದಿನ ನಮ್ಮ ಆಹಾರ ಪದ್ದತಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದಕ್ಕೆ ಗಿಡಮೂಲಿಕೆಯ ಪ್ರಕೃತಿ ಚಿಕಿತ್ಸೆ ಪಡೆದುಕೊಂಡರೆ ಆರೋಗ್ಯ ವೃದ್ದಿಯಾಗುತ್ತದೆ ಎಂದರು.

ದಕ್ಷಿಣ ಭಾರತದಲ್ಲೇ ಈ ಯೋಜನೆ ನಾಗಮಂಗಲದಲ್ಲಿ ಮೊದಲು ಪ್ರಾರಂಭವಾಗುತ್ತಿರುವುದು ಹೆಮ್ಮೆ ತಂದಿದೆ. ಕೇಂದ್ರದ ಈ ಯೋಜನೆ ನಮ್ಮ ಭಾಗದ ಜನರು ಉಪಯೋಗಿಸಿಕೊಳ್ಳಬೇಕು. ನಾನು ಆರೋಗ್ಯ ಸಚಿವನಾಗಿದ್ದಾಗ ಈ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿತ್ತು, ಇದೀಗ ನಾನು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷದಾಯಕ ವಿಷಯವಾಗಿದೆ. ಇಂದಿನ ಮಾನವನ ದೇಹ ಮೊದಲಿನಂತಿಲ್ಲ. ಆಗಾಗಿ ಇಂತಹ ಪ್ರಕೃತಿ ಚಿಕಿತ್ಸೆಗೆ ಹೋಗುವುದು ಅನಿವಾರ್ಯವಾಗಿದೆ. ಸಾವಿರಾರು ವರ್ಷದಿಂದ ಗಿಡ ಮೂಲಿಕೆಗಳಿಂದಲೇ ನಮ್ಮ ಪೂರ್ವಜರು ಆರೋಗ್ಯ ವೃದ್ಧಿಸಿಕೊಳ್ಳುತ್ತಿದ್ದರು. ಪೂರ್ವಜರ ಪದ್ಧತಿಯನ್ನೇ ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯವಾಗಿದೆ ಎಂದರು.

60 ಕೋಟಿ ರೂ. ನೆರವು

ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ಉದ್ಘಾಟನೆಯಲ್ಲಿ ಭಾಗಿಯಾಗಿರುವುದು ಸಂತೋಷದಯಾಕವಾಗಿದೆ ಎಂದರು.

ವಿಶ್ವದ ಯೋಗಗುರುವಾದ ಭಾರತ ದೇಶವು ವಿಶ್ವಕ್ಕೆ ಯೋಗ ಹಾಗೂ ಪ್ರಕೃತಿಯ ಬಗ್ಗೆ ತನ್ನದೇ ಆದ ಕೊಡುಗೆ ನೀಡಿದೆ. ದಕ್ಷಿಣ ಭಾರತದಲ್ಲೆ ಅತಿದೊಡ್ಡ ಚಿಕಿತ್ಸಾ ಯೋಗ ಕೇಂದ್ರದ ಉದ್ಘಾಟನೆ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಈ ಚಿಕಿತ್ಸಾ ಕೇಂದ್ರಕ್ಕೆ ಕೇಂದ್ರದಿಂದ 60 ಕೋಟಿಯನ್ನು ಸಹಾಯಧನ ನೀಡಿದೆ. ಜೊತೆಗೆ ರಾಜ್ಯ ಸರ್ಕಾರವು ಕೂಡ ಹಂತ ಹಂತವಾಗಿ ಕೈಜೋಡಿಸಿ ಸಹಕರಿಸಿದೆ ಎಂದರು.

ಇಂಗ್ಲೀಷ್ ಚಿಕಿತ್ಸೆಯನ್ನು ಎಷ್ಟೇ ತೆಗೆದುಕೊಂಡರೂ ವ್ಯತ್ಯಾಸಗಳು ಇದ್ದೇ ಇರುತ್ತವೆ. ಹಾಗಾಗಿ ಇಂತಹ ಯೋಗ‌ ಚಿಕಿತ್ಸಾ ಕೇಂದ್ರವು ಮನುಷ್ಯನ ಯಾವುದೇ ತರಹದ ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಆಯುಷ್ ಇಲಾಖೆಯ ನಿರ್ದೇಶಕ ಡಾ.ರಾಘವೇಂದ್ರರಾವ್, ಉಪ ನಿರ್ದೇಶಕ ಸತ್ಯಜಿತ್ ಪೌಲ್, ಸಲಹೆಗಾರರಾದ ಡಾ.ಎಂ.ಎ ಖಾಸ್ಮಿ, ರಾಜ್ಯ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಎಸ್.ವಿ.ವೈ.ಎ.ಎಸ್.ಎ ವಿಶ್ವವಿದ್ಯಾಲಯದ ಕುಲಪತಿ ಡಾ.ಹೆಚ್ ಆರ್ ನಾಗೇಂದ್ರ, ಜಿಲ್ಲಾಧಿಕಾರಿ ಡಾ‌.ಕುಮಾರ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಕೇಂದ್ರದಲ್ಲಿ ಸಿಗುವ ಸೌಲಭ್ಯ ಏನೇನು

  • ಹೈಡ್ರೋ ಥೆರಪಿ, ಮುಡ್ ಥೆರಪಿ, ಮಸಾಜ್ ಥೆರಪಿ, ಮ್ಯಾಗ್ನೆಟೊ ಥೆರಪಿ, ಕ್ರೋಮೊ ಥೆರಪಿ, ಫಾಸ್ಟಿಂಗ್ ಆ್ಯಂಡ್ ಡಯಟ್ ಥೆರಪಿ, ಆಕ್ಯೂಪಂಕ್ಚರ್, ಆಕ್ಯೂಪ್ರಜ಼ರ್, ಯೋಗ ಥೆರಪಿ, ಫಿಸಿಯೋ ಥೆರಪಿ ಸೇರಿದಂತೆ ಇನ್ನಿತರ ಸೌಲಭ್ಯಗಳಿವೆ.
  • ಯೋಗ ಕೇಂದ್ರವು ಅತ್ಯಂತ ಸುಸಜ್ಜಿತವಾಗಿದ್ದು, 200 ಹಾಸಿಗೆ ಸಾಮ್ಮರ್ಥ ಹೊಂದಿರುವ ಕಟ್ಟಡವಾಗಿದೆ. ಸಾಮಾನ್ಯ ಕೊಠಡಿ, ಡಿಲಕ್ಸ್ ವಾರ್ಡ್, ಸ್ಪೆಷಲ್ ವಾರ್ಡ್, ಪ್ರತ್ಯೇಕ ಪುರುಷ ಮತ್ತು ಮಹಿಳಾ ಚಿಕಿತ್ಸಾ ಕೊಠಡಿಗಳೊಂದಿಗೆ ಬೃಹತ್ ಯೋಗ ಸಭಾಂಗಣ, ಆಹಾರ ಚಿಕಿತ್ಸಾ ಕೇಂದ್ರ, ಪ್ರಯೋಗಾಲಯ
  • ಮುಂದಿನ ದಿನಗಳಲ್ಲಿ ಇಲ್ಲಿಯೇ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಕೂಡ ಸ್ಥಾಪನೆಯಾಗಲಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ