logo
ಕನ್ನಡ ಸುದ್ದಿ  /  ಕರ್ನಾಟಕ  /  Mandya News: ಕರ್ನಾಟಕದ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಬಿಸಿಯೂಟದೊಂದಿಗೆ ಮೊಟ್ಟೆ

Mandya News: ಕರ್ನಾಟಕದ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಬಿಸಿಯೂಟದೊಂದಿಗೆ ಮೊಟ್ಟೆ

Umesha Bhatta P H HT Kannada

Aug 18, 2023 05:46 PM IST

google News

ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ನೀಡುವ ಯೋಜನೆಗೆ ಸಚಿವ ಮಧುಬಂಗಾರಪ್ಪ ಮಂಡ್ಯದಲ್ಲಿ ಮಗುವಿಗೆ ಮೊಟ್ಟೆ ತಿನ್ನಿಸಿ ಚಾಲನೆ ನೀಡಿದರು

    • Egg with Midday meal in Karnataka ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ನೀಡುವ ಯೋಜನೆಗೆ ಮಂಡ್ಯದಲ್ಲಿ ಶುಕ್ರವಾರ ಚಾಲನೆ ದೊರೆತಿದೆ. 
ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ನೀಡುವ ಯೋಜನೆಗೆ ಸಚಿವ ಮಧುಬಂಗಾರಪ್ಪ ಮಂಡ್ಯದಲ್ಲಿ ಮಗುವಿಗೆ ಮೊಟ್ಟೆ ತಿನ್ನಿಸಿ ಚಾಲನೆ ನೀಡಿದರು
ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ನೀಡುವ ಯೋಜನೆಗೆ ಸಚಿವ ಮಧುಬಂಗಾರಪ್ಪ ಮಂಡ್ಯದಲ್ಲಿ ಮಗುವಿಗೆ ಮೊಟ್ಟೆ ತಿನ್ನಿಸಿ ಚಾಲನೆ ನೀಡಿದರು

ಮಂಡ್ಯ: ಸಾಕಷ್ಟು ವಿವಾದ, ಗೊಂದಲಗಳ ನಡುವೆಯೂ ಕರ್ನಾಟಕ ಸರ್ಕಾರ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ನೀಡುವ ಚಟುವಟಿಕೆಗೆ ಚಾಲನೆ ದೊರೆತಿದೆ.

ಮಂಡ್ಯ ಜಿಲ್ಲೆಯ ಹೊಸಹಳ್ಳಿಯ ಸರ್ಕಾರಿ ಪ್ರೌಢಶಾಲಾಯಲ್ಲಿ ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮವಾದ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಠಿಕ ಆಹಾರದ(ಮೊಟ್ಟೆ, ಚಿಕ್ಕಿ, ಬಾಳೆಹಣ್ಣು) ವಿತರಣೆಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಖುದ್ದು ಮಕ್ಕಳಿಗೆ ಮೊಟ್ಟೆ ನೀಡಿ ತಾವೂ ಸೇವಿಸುವ ಮೂಲಕ ಸಚಿವರಾದ ಮಧುಬಂಗಾರಪ್ಪ ಹಾಗೂ ಎನ್‌.ಚಲುವರಾಯಸ್ವಾಮಿ ಚಾಲನೆ ನೀಡಿದರು.

1.20 ಕೋಟಿ ಮೊಟ್ಟೆ

ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 60 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ 1.20 ಕೋಟಿ ಮೊಟ್ಟೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ಪೌಷ್ಟಿಕಾಂಶ ಹೆಚ್ಚಾಗಿ ಉತ್ತಮ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕಾಣಬಹುದು. ಮಕ್ಕಳಿಗೆ ಮೊಟ್ಟೆ ಬೇಡವೆಂದರೆ ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನೂ ನೀಡಲಾಗುವುದು ಎಂದು ಹೇಳಿದರು.

ಮುಂದಿನ ಎರಡು ವರ್ಷಗಳಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವನ್ನು ಮಕ್ಕಳಿಗೆ ಪೂರಕವಾಗಿ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ರೀತಿ ಮಾಡಲಾಗುವುದು. ಸರ್ಕಾರ ಬಡವರಿಗೆ ಸಹಕಾರವಾಗುವ ರೀತಿ ಶಕ್ತಿ, ಗೃಹ ಜ್ಯೋತಿ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ

ಶಿಕ್ಷಕರ ನೇಮಕ

ಶಿಕ್ಷಣ ಇಲಾಖೆಗೆ ವರ್ಗಾವಣೆ ಕೋರಿ ಅಂದಾಜು 90000 ಅರ್ಜಿಗಳು ಬಂದಿತ್ತು. 31000 ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಮಧುಬಂಗಾರಪ್ಪ ತಿಳಿಸಿದರು.

ಈಗಾಗಲೇ ಸರ್ಕಾರದ ವತಿಯಿಂದ 30000 ಅತಿಥಿ ಶಿಕ್ಷಕರನ್ನು ಪಡೆಯಲಾಗಿದೆ. ಮುಖ್ಯಮಂತ್ರಿಗಳು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಬಾರದು ಎಂದು ಇನ್ನೂ 10000 ಅತಿಥಿ ಶಿಕ್ಷಕರನ್ನು ಪಡೆಯಲು ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನೊಳಗೊಂತೆ ಸಭೆ ನಡೆಸಿ ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ಮಕ್ಕಳಿಗೆ ಉಪಯುಕ್ತ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ‌ಅವರು ಮಾತನಾಡಿ, ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಠಿಯಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಮುಂದೆ ಇರುವ ಗೃಹ ಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಯೋಜನೆಗಳೇ ಉದಾಹರಣೆ. ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುವುದು ಎಂದರು.

ಸರ್ಕಾರಿ ಶಾಲೆಯ ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ವಾರದಲ್ಲಿ ಎರಡು ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಚಿಕ್ಕಿ ನೀಡಲಾಗುವುದು. ರಾಜ್ಯಮಟ್ಟದ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯಲ್ಲಿ ಹಮ್ನಿಕೊಂಡಿರುವುದು ಸಂತೋಷದ ವಿಷಯ ಎಂದರು.

ಕೃಷಿ ಕಾರ್ಯಕ್ರಮಕ್ಕೂ ಒತ್ತು

ಕೃಷಿ ಇಲಾಖೆಯಲ್ಲೂ ರೈತರಿಗೆ ಪೂರಕವಾಗಿ ಕೃಷಿ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಲಾಗುವುದು. ಜಿಲ್ಲೆಯಲ್ಲಿ ಮೈ ಶುಗರ್ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲಾಗುವುದು.

ಮಂಡ್ಯ ಜಿಲ್ಲೆಯಲ್ಲಿ‌ ಕಾಮಗಾರಿಗಳ ಹಣ ಪಾವತಿಗಾಗಿ ಲೋಕೋಪಯೋಗಿ ಇಲಾಖೆಗೆ ರೂ10 ಕೋಟಿ, ಜಿಲ್ಲಾ ಪಂಚಾಯತ್ ಗೆ 10 ರಿಂದ 15 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಪಿ.ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಶಾಸಕ ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ.ಬಿ ಕಾವೇರಿ, ಪ್ರಧಾನಮಂತ್ರಿ ಘೋಷಣ್ ಶಕ್ತಿ ನಿರ್ಮಾಣದ ನಿರ್ದೇಶಕರಾದ ಶುಭ ಕಲ್ಯಾಣ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ