logo
ಕನ್ನಡ ಸುದ್ದಿ  /  ಕರ್ನಾಟಕ  /  Mangalore Dasara 2024: ಮಂಗಳೂರು ದಸರಾ ಹಾಫ್ ಮ್ಯಾರಥಾನ್‌ ನಲ್ಲಿ ಓಡಿ, ಬಹುಮಾನ ಗೆಲ್ಲಿರಿ; ನಾಳೆ ಸ್ಪರ್ಧೆ

Mangalore Dasara 2024: ಮಂಗಳೂರು ದಸರಾ ಹಾಫ್ ಮ್ಯಾರಥಾನ್‌ ನಲ್ಲಿ ಓಡಿ, ಬಹುಮಾನ ಗೆಲ್ಲಿರಿ; ನಾಳೆ ಸ್ಪರ್ಧೆ

Umesha Bhatta P H HT Kannada

Oct 05, 2024 12:46 PM IST

google News

ಮಂಗಳೂರು ದಸರಾ ಸಮಿತಿಯಿಂದ ಹಾಫ್‌ ಮ್ಯಾರಥಾನ್‌ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

    • ಮಂಗಳೂರಿನಲ್ಲಿ  ಈ ಬಾರಿ ದಸರಾ ಹಾಫ್‌ ಮ್ಯಾರಥಾನ್‌ ಓಟವನ್ನು ದಸರಾ ಸಮಿತಿಯಿಂದ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ನಗದು ಬಹುಮಾನವೂ ಇದೆ. ಈ ಕುರಿತ ವಿವರ ಇಲ್ಲಿದೆ.
    • ವರದಿ: ಹರೀಶ ಮಾಂಬಾಡಿ, ಮಂಗಳೂರು
ಮಂಗಳೂರು ದಸರಾ ಸಮಿತಿಯಿಂದ ಹಾಫ್‌ ಮ್ಯಾರಥಾನ್‌ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.
ಮಂಗಳೂರು ದಸರಾ ಸಮಿತಿಯಿಂದ ಹಾಫ್‌ ಮ್ಯಾರಥಾನ್‌ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೋಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅಕ್ಟೋಬರ್‌ 6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಕುದ್ರೋಳಿ ಶ್ರೀ ವನ್ ಸಿಟಿ ವನ್ ಸ್ಪಿರಿಟ್' ಧ್ಯೇಯದೊಂದಿಗೆ `ಎಲ್ಲಿ ಒಗ್ಗಟ್ಟಿದೆಯೂ ಅಲ್ಲಿ ಬಲವಿದೆ' ಎಂಬ ವಾಕ್ಯದೊಂದಿಗೆ ಈ ಪಂದ್ಯಾಟ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಪ್ ಮಾರಥಾನ್ ಆಯೋಜಿಸಲಾಗಿದೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್‌ನಲ್ಲಿ ಪ್ರಥಮ ವಿಜೇತರಿಗೆ 25ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15ಸಾವಿರ ರೂ. ಇರಲಿದೆ.

21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ. ದಸರಾ ಪ್ರಯುಕ್ತ ಕಳೆದ ವರ್ಷ ವಾಕಥಾನ್ ನಡೆಸಲಾಗಿದ್ದು, ಈ ಬಾರಿ ಅ.6ರಂದು ಬೆಳಗ್ಗೆ ಕ್ಷೇತ್ರದಿಂದ 21 ಕಿ.ಮೀ.ಗಳ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ.

ದಸರಾ ಎಂದರೆ ಸಾಂಸ್ಕೃತಿಕ ಸೊಬಗು, ಧಾರ್ಮಿಕ ಚಟುವಟಿಕೆಗಳ ಭಾಗವಾಗಿದ್ದರೂ, ಕ್ರೀಡಾ ಚಟುವಟಿಕೆಗಳಿಗೂ ದಸರಾ ಸಮಿತಿ ಒತ್ತು ನೀಡುತ್ತಿದೆ. ಮಂಗಳೂರು, ಕರಾವಳಿ ಭಾಗದವರು ಮಾತ್ರವಲ್ಲದೇ ಹೊರ ರಾಜ್ಯದವರೂ ಭಾಗಿಯಾಗುತ್ತಿರುವ ಹಾಫ್‌ ಮ್ಯಾರಥಾನ್‌ ಓಟದ ಸ್ಪರ್ಧೆಯಿದು. ಇದಕ್ಕಾಗಿ ಸಿದ್ದತೆಯೂ ಜೋರಾಗಿ ನಡೆದಿದೆ.

ಹಾಫ್ ಮ್ಯಾರಥಾನ್ ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬ, ಪೈ ಸೇಲ್ಸ್ ದೇರೆಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್‌ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂ ಸೇವಕರ ಜತೆಗೆ, ಫಿಸಿಯೋತೆರಪಿಸ್ಟ್ಗಳು, ಆ್ಯಂಬುಲೆನ್ಸ್ಗಳನ್ನು ನಿಗದಿತ ಸ್ಥಗಳಲ್ಲಿ ಸ್ಥಿತಗೊಳಿಸಲಾಗಿರುತ್ತದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಲೋಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್‌ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ ಹಾಗೂ ಪ್ರಮಾಣ ಪತ್ರ, ಟೀಶರ್ಟ್ಗಳನ್ನು ಒದಗಿಸಲಾಗುತ್ತದೆ ಎನ್ನುವುದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ವಿವರಣೆ.

ಈಗಾಗಲೇ 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ.

ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ ಶಾಂ ಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು.

ವರದಿ: ಹರೀಶ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ