ಕನ್ನಡ ಸುದ್ದಿ  /  ಕರ್ನಾಟಕ  /  Mangalore News: ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ

Mangalore News: ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ

Mar 09, 2024 10:33 AM IST

Mangalore News: ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ

    • ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವರಾತ್ರಿ ಪ್ರಯುಕ್ತ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣ ನಡೆಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿದರು.
Mangalore News: ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ
Mangalore News: ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ

ಮಂಗಳೂರು: ಶಿವರಾತ್ರಿ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದಷ್ಟು ಭಕ್ತರು ಸೇರಿದ್ದರು. ಎಲ್ಲರೂ ಓಂ ನಮಃ ಶಿವಾಯ ಎಂಬ ಶಿವಪಂಚಾಕ್ಷರಿ ಮಂತ್ರವನ್ನು ಸಾಮೂಹಿಕವಾಗಿ ಪಠಿಸುವ ಮೂಲಕ ಶಿವರಾತ್ರಿ ಜಾಗರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

MLC Elections2024: ಪರಿಷತ್‌ ಚುನಾವಣೆ, ನೈರುತ್ಯ- ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್‌ಗೆ ಬಂಡಾಯ ಬಿಸಿ

Hassan Scandal: ಪ್ರಜ್ವಲ್‌ ಬೆಂಗಳೂರಿಗೆ ವಾಪಾಸ್‌ ಆಗುತ್ತಿಲ್ಲ ಯಾಕೆ, ವಿಳಂಬದ ಹಿಂದಿನ ತಂತ್ರವೇನು?

Hassan Scandal: ಬೆಂಗಳೂರಿಗೆ ಬಾರದ ಪ್ರಜ್ವಲ್‌ ರೇವಣ್ಣ, ಕಾದು ಕಾದು ಸುಸ್ತಾದ ಪೊಲೀಸರು

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣದಲ್ಲಿ ಬಡವ, ಶ್ರೀಮಂತ ಎಂಬ ಯಾವುದೇ ತಾರತಮ್ಯವಿಲ್ಲದೆ ಸೇರಿದ್ದ ಭಕ್ತರು ಮಂತ್ರಪಠಣ ಮಾಡಿದರು. ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ಸಂಜೆ 6 ಗಂಟೆಗೆ ಸರಿಯಾಗಿ ಶಿವಪಂಚಾಕ್ಷರಿ ಪಠಣವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿದರು.

ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ. ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ವೈದ್ಯಾಮೃತ ಕೃತಿ ಬಿಡುಗಡೆ

ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಲಿ ಎಂದು ಹಾರೈಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು. ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಬೆಂಗಳೂರಿನ ಭಕ್ತರಿಂದ ಸೇವೆ

ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು. ಧರ್ಮಶಾಸ್ತ ಅನ್ನದಾನ ಸಮಿತಿ ಬೆಂಗಳೂರು (50,000 ಮಂದಿಗೆ), ತಿಮ್ಮಾರೆಡ್ಡಿ, ಯಲಹಂಕ, ಬೆಂಗಳೂರು (10,000 ಮಂದಿಗೆ), ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಸಂತರ್ಪಣಾ ಸಮಿತಿ, ನಾಗರಬಾವಿ, ಬೆಂಗಳೂರು (15,000 ಮಂದಿಗೆ), ಜನಜಾಗೃತಿ ವೇದಿಕೆ, ಹೊಸಪೇಟೆ, ವಿಜಯನಗರ (10,000 ಮಂದಿಗೆ), ಶ್ರೀ ಮಂಜುನಾಥ ಸ್ವಾಮಿ ಸೇವಾ ಸಮಿತಿ, ಬೆಂಗಳೂರು (30,000 ಮಂದಿಗೆ) ಉಪಾಹಾರದ ಪ್ರಾಯೋಜಕರಾದರು.

ವರದಿ: ಹರೀಶ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ