Mangaluru Crime: ಅಪ್ರಾಪ್ತ ಮಲಮಗಳನ್ನೇ ಅತ್ಯಾಚಾರಗೈದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್
Jun 22, 2023 04:27 PM IST
ಪ್ರಾತಿನಿಧಿಕ ಚಿತ್ರ
- Dakshina Kannada rape case: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರಗೈದ ಆರೋಪಿಯ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೊಕ್ಸೊ ನ್ಯಾಯಾಲಯ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಮಂಗಳೂರು: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರಗೈದ ಆರೋಪಿಯ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಅಶ್ವತ್ಥ್ ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಈತ ಅಪ್ರಾಪ್ತ ಬಾಲಕಿಯ ತಾಯಿಯ ಎರಡನೇ ಪತಿಯಾಗಿದ್ದಾನೆ. ಬಾಲಕಿಯ ತಾಯಿ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಈ ಕೃತ್ಯವನ್ನು ಆತ ಮಾಡಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಳಿಕ ಆರೋಪಿಯ ವಿರುದ್ಧ ಆರೋಪ ಸಾಬೀತುಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಪ್ರಕರಣವೇನು?
ಇದು 2022ರಲ್ಲಿ ನಡೆದ ಘಟನೆ. ಬಾಲಕಿಯ ತಾಯಿ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. 2022ರ ಜುಲೈ 26 ರಂದು ನಸುಕಿನ ವೇಳೆ 3.30ರ ವೇಳೆಗೆ ಅಶ್ವತ್ಥ್ ಪತ್ನಿಯ ಮೊದಲನೆಯ ಪತಿಯ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಗೈದಿದ್ದಾನೆ. ಅಲ್ಲದೆ ಯಾರಲ್ಲಾದರೂ ತಿಳಿಸಿದರೆ ಬಾಲಕಿಯನ್ನು ಕೊಲೆಗೈಯುವುದಾಗಿ ಬೆದರಿಕೆಯನ್ನು ಒಡ್ಡಿದ್ದ. ಸಂತ್ರಸ್ತ ಬಾಲಕಿ ಈ ವಿಚಾರವನ್ನು ತನ್ನ ದೊಡ್ಡಮ್ಮನಲ್ಲಿ ತಿಳಿಸಿದ್ದಾರೆ. ಅವರು ತಕ್ಷಣ ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೋಕ್ಸೋ ಪ್ರಕರಣ ದಾಖಲು
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ವಿರುದ್ಧ ಕಾರ್ಯಾಚರಣೆಗಿಳಿಯುತ್ತಾರೆ. ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಲೋಕೇಶ್ ಎ.ಸಿ. ಎಫ್ಎಸ್ಎಲ್ ವರದಿಯನ್ವಯ ಆರೋಪಿ ಅಶ್ವತ್ಥ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ಪೊಕ್ಸೊ ನ್ಯಾಯಾಲಯ ಆರೋಪಿ ಅಶ್ವತ್ಥ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ವರದಿ: ಹರೀಶ ಮಾಂಬಾಡಿ ಮಂಗಳೂರು
ಉತ್ತರ ಪ್ರದೇಶದ ಘಾಜೀಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ನರೇಂದ್ರ ಮೋದಿಯ (Narendra Modi) ಹೆಸರು ಮದುವೆಯೊಂದನ್ನು ಮುರಿದಿದೆ. ಮದುಮಗನಿಗೆ ಭಾರತದ ಪ್ರಧಾನಿ ಹೆಸರು ಗೊತ್ತಿಲ್ಲ ಅಂತ ವರನ ತಮ್ಮನನ್ನ ವಧು ಮದುವೆಯಾಗಿದ್ದಾಳೆ. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ