ಕನ್ನಡ ಸುದ್ದಿ  /  ಕರ್ನಾಟಕ  /  Mahashivratri 2024: ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ; 15 ಸಾವಿರ ಪಾದಯಾತ್ರಿಗಳ ಆಗಮನ

Mahashivratri 2024: ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ; 15 ಸಾವಿರ ಪಾದಯಾತ್ರಿಗಳ ಆಗಮನ

Reshma HT Kannada

Mar 07, 2024 09:08 PM IST

ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ; ಹದಿನೈದು ಸಾವಿರ ಪಾದಯಾತ್ರಿಗಳ ಆಗಮನ

    • ಭಾರತದಾದ್ಯಂತ ಮಹಾಶಿವರಾತ್ರಿ ಸಡಗರ ಜೋರಿದೆ. ದೇಶದ ಪ್ರಮುಖ ಶಿವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ನಾಡಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡಿಲಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ನೂರಾರು ಪಾದಯಾತ್ರಿಗಳು ಧರ್ಮಸ್ಥಳ ತಲುಪಿದ್ದಾರೆ. (ವರದಿ: ಹರೀಶ ಮಾಂಬಾಡಿ, ಮಂಗಳೂರು)
ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ; ಹದಿನೈದು ಸಾವಿರ ಪಾದಯಾತ್ರಿಗಳ ಆಗಮನ
ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ; ಹದಿನೈದು ಸಾವಿರ ಪಾದಯಾತ್ರಿಗಳ ಆಗಮನ

ಮಂಗಳೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಜೋರಾಗಿದೆ. ಶಿವಭಕ್ತರು ಮಹಾದೇವನ ಭಕ್ತಿಯಲ್ಲಿ ಮಿಂದೇಳುತ್ತಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿದೆ. ಈ ವರ್ಷ ಶಿವರಾತ್ರಿ ನಾಡಿನೆಲ್ಲೆಡೆಯಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ.

ಟ್ರೆಂಡಿಂಗ್​ ಸುದ್ದಿ

Hassan Scandal: ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದು ವಾಪಾಸ್‌ ನಿರೀಕ್ಷೆ, ಕಾದು ಕುಳಿತಿರುವ ಎಸ್‌ಐಟಿ ಪೊಲೀಸರು

Bangalore News: ಬೆಂಗಳೂರಿನ ಪ್ರತಿಷ್ಠಿತ ಜೈನ್ ಹೆರಿಟೇಜ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ; ಆತಂಕದ ವಾತಾವರಣ

Mangalore News: ಮಂಗಳೂರು ನಗರಕ್ಕೆ ಬೇಕಿವೆ ತಂಗುದಾಣಗಳು, ಬಸ್‌ಗೆ ಕಾಯುವವರ ಸಂಕಟ ಕೇಳೋರು ಯಾರು

Indian Railways: ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಬೀದರ್‌ನ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ, ಯಾವ ರೈಲು, ಎಲ್ಲಿಯವರೆಗೆ

ಸುಮಾರು ಮೂವತ್ತು ಸಾವಿರ ಪಾದಯಾತ್ರಿಗಳು ಬರುವುದಾಗಿ ಪೂರ್ವಭಾವಿಯಾಗಿ ತಿಳಿಸಿದ್ದು ಹದಿನೈದು ಸಾವಿರ ಪಾದಯಾತ್ರಿಗಳು ಗುರುವಾರ ಧರ್ಮಸ್ಥಳ ತಲುಪಿದ್ದಾರೆ.

ಹತ್ತು ಸಾವಿರ ಮಂದಿ ಗುರುವಾರ ಸಂಜೆ ಉಜಿರೆ ತಲುಪಿದ್ದು ಇಲ್ಲಿನ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಅವರಿಗೆ ವಸತಿ ಸೌಲಭ್ಯ, ಶೌಚಾಲಯ, ಕುಡಿಯುವ ನೀರು, ಅಡುಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ ಮೊದಲಾದ ಕಡೆಯ ಪಾದಯಾತ್ರಿಗಳು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಸಂಘ ರಚಿಸಿದ್ದು ಪ್ರತಿವರ್ಷ ಸಂಘದ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಬರುತ್ತಾರೆ.

ಹಾಸನದ ಶಶಿಕಿರಣ್ ನೇತೃತ್ವದಲ್ಲಿ 285 ಪಾದಯಾತ್ರಿಗಳು ಉಜಿರೆ ತಲುಪಿದ್ದು ಒಂದು ಗಂಟೆ ಕಾಲ ಶ್ರದ್ಧಾ-ಭಕ್ತಿಯಿಂದ ಭಜನೆ ನಡೆಸಿದರು. ಭಾವಗೀತೆ, ಭಕ್ತಿಗೀತೆಗಳನ್ನು ಸಾಮೂಹಿಕವಾಗಿ ಎಲ್ಲರೂ ಸುಶ್ರಾವ್ಯವಾಗಿ ಹಾಡಿದರು. ಸ್ಥಳೀಯ ನಾಗರಿಕರು ಅವರಿಗೆ ಪಾನೀಯ, ಊಟ, ತಿಂಡಿ ವ್ಯವಸ್ಥೆಯನ್ನು ಉಚಿತವಾಗಿ ಮಾಡಿದರು.

ಧರ್ಮಸ್ಥಳದಲ್ಲಿ ಶುಕ್ರವಾರ ಜಾಗರಣೆ:

ಶುಕ್ರವಾರ ಸಂಜೆ 6 ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸಲಿದ್ದಾರೆ. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ.

ಶನಿವಾರ ಮುಂಜಾನೆ ರಥೋತ್ಸವ ನಡೆಯುತ್ತದೆ. ಶಿವರಾತ್ರಿ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ. ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಲೇಜ್ ವಿದ್ಯಾರ್ಥಿನಿ ಕಲ್ಪನಾ ಮಾತನಾಡಿ, ಪಾದಯಾತ್ರೆಯಿಂದ ನವಚೈತನ್ಯ ಮೂಡಿಬಂದಿದೆ. ಮುಂದೆ ಪ್ರತಿವರ್ಷವೂ ಶಿವರಾತ್ರಿಗೆ ಪಾದಯಾತ್ರೆಯಲ್ಲಿ ಬರುವುದಾಗಿ ತಿಳಿಸಿದ್ದಾರೆ. ಹಾಸನದ 30 ವರ್ಷ ಪ್ರಾಯದ ವ್ಯಾಪಾರಿ ಗೋಪಾಲಗೌಡ ಕಳೆದ 5 ವರ್ಷಗಳಿಂದ ತಾನು ಪ್ರತಿವರ್ಷ ಪಾದಯಾತ್ರೆಯಲ್ಲಿ ಬರುತ್ತಿದ್ದು ತನ್ನ ಆರೋಗ್ಯ ಸುಧಾರಿಸಿದೆ. ಮಾನಸಿಕ ಶಾಂತಿ, ನೆಮ್ಮದಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ