logo
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

Praveen Chandra B HT Kannada

May 08, 2024 06:02 PM IST

Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

    • Former MLA K Vasanth Bangera passed away: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ
Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಟ್ರೆಂಡಿಂಗ್​ ಸುದ್ದಿ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

Bangalore News: ಬೆಂಗಳೂರು ರಸ್ತೆಗಳಲ್ಲಿ ಮರ ಬೀಳುವ ಸನ್ನಿವೇಶವಿದೆಯಾ, ಈ ನಂಬರ್‌ಗಳಿಗೆ ಕರೆ ಮಾಡಿ

Mandya News: ಮಂಡ್ಯ ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 180 ಬಾಲ್ಯವಿವಾಹ ಪ್ರಕರಣ, 75ರಲ್ಲಿ ಎಫ್‌ಐಆರ್‌ ದಾಖಲು

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ.ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ವರದಿ: ಹರೀಶ್‌ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ