logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ನಿಧನ

ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ನಿಧನ

HT Kannada Desk HT Kannada

Feb 19, 2024 10:26 AM IST

ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ಸೋಮವಾರ ನಿಧನರಾದರು.

  • ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ಸೋಮವಾರ ನಿಧನರಾದರು. ಕೆ ಟಿ ಗಟ್ಟಿ ಎಂದೇ ಪ್ರಸಿದ್ಧರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಅವರ ಬದುಕು ಬರೆಹದ ಚಿತ್ರಣ ಇಲ್ಲಿದೆ.

    (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ಸೋಮವಾರ ನಿಧನರಾದರು.
ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಾದಂಬರಿಕಾರ ಕೆ ಟಿ ಗಟ್ಟಿ ಸೋಮವಾರ ನಿಧನರಾದರು.

ಮಂಗಳೂರು: ಕರ್ನಾಟಕ ಸಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಆತ್ಮಹತ್ಯೆಯ ನಾಟಕವಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಜಿಮ್ ತರಬೇತುದಾರ; ಮನೆಯಲ್ಲೇ ಬಿಬಿಎ ವಿದ್ಯಾರ್ಥಿನಿ ಶಂಕಾಸ್ಪದ ಸಾವು

ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಬರೆಹ, ಕತೆ, ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.

ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ ಇವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಅವರು ಉಜಿರೆಯಲ್ಲಿ ವಾಸವಾಗಿ ಕೃಷಿಯಲ್ಲಿ ತೊಡಗಿದ್ದರು.

ಶಬ್ದಗಳು (1973), ಸೌಮ್ಯ (1978), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ ಮುಂತಾದವು ಅವರ ಗಮನಸೆಳೆದ ಕಾದಂಬರಿಗಳು.

ಕೆ ಟಿ ಗಟ್ಟಿಯವರ ಬದುಕು-ಬರೆಹ

ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕ ಎಂದು ಗುರುತಿಸಿಕೊಂಡ ಕೆ.ಟಿ. ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಯವರು ಹುಟ್ಟಿದ್ದು ಕಾಸರಗೋಡು ಸಮೀಪದ ಕೂಡ್ಲೂ ಎಂಬಲ್ಲಿ. 1936ರ ಜುಲೈ 22ರಂದು ಜನನ.

ಅವರ ತಂದೆ ಧೂಮಪ್ಪಗಟ್ಟಿ. ಕೃಷಿಕರಾದರೂ ಯಕ್ಷಗಾನ ಕಲಾಭಿಮಾನಿ. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಗಾಯಕಿ. ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಎಂಟನೇ ತರಗತಿ ತನಕ ಮಾತ್ರ ಕ್ರಮ ಬದ್ಧ ಕಲಿಕೆ ಪಡೆದ ಕೂಡ್ಲು ತಿಮ್ಮಪ್ಪ ಗಟ್ಟಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಬಳಿಕ ಕಾಸರಗೋಡು ಚಳವಳಿಯಲ್ಲಿ ಭಾಗಿಯಾದರು. ಬಳಿಕ ಪಿಯು ಹಾಗೂ ಬಿಎ ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದ ಅವರು, ಮಾಯಿಪ್ಪಾಡಿಯ ಸರ್ಕಾರಿ ಬೇಸಿಕ್ ಟ್ರೇನಿಂಗ್ ಶಾಲೆಯಲ್ಲಿ ಎರಡು ವರ್ಷಗಳ ಟಿಸಿಎಚ್‌ ಪದವಿ ಪಡೆದರು. ಅದಾಗಿ, ತಲಚೇರಿಯ ಸರಕಾರಿ ಟ್ರೈನಿಂಗ್‌ ಕಾಲೇಜಿನಲ್ಲಿ ಒಂದು ವರ್ಷದ ಬಿಎಡ್‌ ಪದವಿ ಮಾಡಿದರು.

ಕಾಸರಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇರಿದ ಅವರು, ಬಿಡುವಿನ ವೇಳೆಯಲ್ಲಿ ಖಾಸಗಿಯಾಗಿ ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದರು. 1968ರಲ್ಲಿ ಮಣಿಪಾಲದ ಎಂಐಟಿಯಲ್ಲಿ 6 ವರ್ಷ ಇಂಗ್ಲಿಷ್‌ ಉಪನ್ಯಾಸಕರಾಗಿ ಕೆಲಸ ಮಾಡಿದರು. ಬಳಿಕ ಒಂದು ವರ್ಷ ಉಡುಪಿಯ ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿದ್ದರು. ನಂತರ ಹೋದದ್ದು ಇಥಿಯೋಪಿಯಾಕ್ಕೆ. ಸರ್ಕಾರದಿಂದ ನಿಯುಕ್ತರಾದ ಪ್ರಾಧ್ಯಾಪಕರಾಗಿ ಲಂಡನ್‌ನ ಟ್ರಿನಿಟಿ ಕಾಲೇಜಿನಲ್ಲಿ ಇಂಗ್ಲಿಷ್‌ ಕಲಿಕೆಯಲ್ಲಿ ಡಿಪ್ಲೊಮಾ, ಆಕ್ಸ್‌ಫರ್ಡಿನ ಕಾಲೇಜ್‌ ಆಫ್‌ ಪ್ರಿಸೆಪ್ಟರ್ಸ್‌ನಿಂದ ಪಡೆದ ಡಿಪ್ಲೊಮಾ ಪಡೆದರು.

1957ರಲ್ಲಿ ಸಾಹಿತ್ಯ ಕೃಷಿಗೆ ಇಳಿದ ಕೆಟಿ ಗಟ್ಟಿ

ಕೆಟಿ ಗಟ್ಟಿಯವರು, 1957ರಲ್ಲಿ ಸಾಹಿತ್ಯದ ಕಡೆಗೆ ಹೊರಳಿದರು. ಇದಕ್ಕೆ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ಅರಗಿನ ಅರಮನೆ ಕಾದಂಬರಿಗೆ ಪ್ರೇರಣೆ ಇಥಿಯೋಪಿಯಾದಲ್ಲಿದ್ದಾಗ ಒಮ್ಮೆ ನಡೆದ ಘಟನೆ. ಅದು ಅವರ ಮನಸ್ಸಿನ ಮೇಲೆ ಗಾಢ ಪರಿಣಾಮ ಬೀರಿತ್ತು. ಪ್ರೀತಿಯಿಂದ ಬೆಳೆಸಿದ ನಿಂಬೆಗಿಡವನ್ನು ಕುರಿಯೊಂದು ಬಂದು ತಿನ್ನತೊಡಗಿದಾಗ ಕೋಪಗೊಂಡು ಓಡಿಸಿದ ಮೇಲೆ ಗಟ್ಟಿಯವರೆಗೆ ಕಾಡಿದ ಪ್ರಶ್ನೆ. ಬೇರೆಯವರ ದೇಶ, ಅವರ ಮಣ್ಣು, ಅವರ ಗಿಡ, ಅವರ ಕುರಿ-ನಾನು ಓಡಿಸಿದ್ದು ಸರಿಯಾ? ಎಂಬ ಗೊಂದಲ ಅವರನ್ನು ಕಾಡಿತ್ತು. ಹಾಗೆ ಹುಟ್ಟಿದ ಕಾದಂಬರಿ ಅರಗಿನ ಅರಮನೆ ಎಂದು ಹಿಂದೊಮ್ಮೆ ಅವರು ಹೇಳಿದ್ದರು.

1982ರಲ್ಲಿ ಸ್ವದೇಶಕ್ಕೆ ಮರಳಿದ ಗಟ್ಟಿಯವರು, ದಕ್ಷಿಣ ಕನ್ನಡ ಜಿಲ್ಲೆ ಉಜಿಯರ ಬಳಿ ಜಮೀನು ಖರೀದಿಸಿ, ವನಸಿರಿಯನ್ನು ಕಟ್ಟಿದರು. ಅಲ್ಲೇ ಇದ್ದುಕೊಂಡು ಪೂರ್ಣಾವಧಿ ಲೇಖಕರಾಗಿ ಕೃಷಿ, ಸಾಹಿತ್ಯ ಕೃಷಿ ಎರಡಲ್ಲೂ ತೊಡಗಿಸಿಕೊಂಡಿದ್ದರು. ಆಗಾಗ್ಗೆ ಪತ್ರಿಕೆಗೆ ಬರೆದ ಕಥೆಗಳು ‘ಮನುಷ್ಯನ ವಾಸನೆ ಮತ್ತು ಇತರ ಕಥೆಗಳು’, ‘ನೀಲಿ ಗುಲಾಬಿ ಮತ್ತು ಇತರ ಕಥೆಗಳು’, ‘ಭೂಗತ ಮತ್ತು ಇತರ ಕಥೆಗಳು’,‘ವಿಶ್ವ ಸುಂದರಿ ಮತ್ತು ಇತರ ಕಥೆಗಳು’ ಹಾಗೂ ‘ಪ್ರೀತಿ ಎಂಬ ಮಾಯೆ ಮತ್ತು ಇತರ ಕಥೆಗಳು’ ಎಂಬ ಸಂಕಲನಗಳಲ್ಲಿ ಸೇರಿಕೊಂಡಿವೆ.

ತಂದೆತಾಯಿಯಿಂದ ಬಂದ ಬಳುವಳಿಯಾಗಿ ರಂಗಭೂಮಿಯ ಬಗ್ಗೆ ವಿಶೇಷ ಒಲವನ್ನು ಅವರು ಹೊಂದಿದ್ದರು. ಹಾಗೆ ರಚಿಸಿದ ನಾಟಕ ಕೃತಿಗಳೆಂದರೆ ನಾಟ್ಕ, ಕೆಂಪುಕಾಗೆ, ಸತ್ಯಕ್ಕೆ ಜಯ, ಕುರುಡರು, ನಗರ ಪರ್ವ, ಬೊಂಬೆಯಾಟ, ಜುಜುಬಿದೇವರ ಜುಗಾರಿ ಮುಂತಾದ 18 ನಾಟಕಗಳು ಪ್ರಕಟವಾಗಿವೆ. ಈ ಪೈಕಿ ಕೆಲವು ಬಾನುಲಿಯಲ್ಲೂ ಪ್ರಸಾರಗೊಂಡು ಜನಪ್ರಿಯ ನಾಟಕಗಳೆನಿಸಿವೆ. ಪ್ರೌಢರಿಗಷ್ಟೇ ಅಲ್ಲದೆ ಮಕ್ಕಳಿಗಾಗಿಯೂ 30 ನಾಟಕಗಳನ್ನೂ ರಚಿಸಿದ್ದು ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಪಂಜಾಬಿ ಮುಂತಾದ ಭಾಷೆಗಳಿಗೂ ಅನುವಾದಗೊಂಡಿರುವುದು ಗರಿಮೆ.

(ಮಾಹಿತಿ: ಕಣಜ ಹಾಗೂ ವಿವಿಧ ಮೂಲಗಳು)

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ