ಕನ್ನಡ ಸುದ್ದಿ  /  ಕರ್ನಾಟಕ  /  Mangaluru News: ಸೌಜನ್ಯ ಪ್ರಕರಣ: ಸಂತೋಷ್ ರಾವ್ ವಿರುದ್ಧ ಹೈಕೋರ್ಟ್ ಕದ ತಟ್ಟಿದ ಸಿಬಿಐ

Mangaluru News: ಸೌಜನ್ಯ ಪ್ರಕರಣ: ಸಂತೋಷ್ ರಾವ್ ವಿರುದ್ಧ ಹೈಕೋರ್ಟ್ ಕದ ತಟ್ಟಿದ ಸಿಬಿಐ

HT Kannada Desk HT Kannada

Nov 08, 2023 05:21 PM IST

ಸಾಂಕೇತಿಕ ಚತ್ರ

    • ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ, ಸಿಬಿಐ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ನ್ಯಾಯಾಲಯವು ಸಂತೋಷ್‌ ರಾವ್‌ ನಿರಪರಾಧಿ ಎಂದು ಘೋಷಿಸಿದ ಸಂದರ್ಭ ನಿಜವಾದ ಆರೋಪಿಗಳು ಯಾರು ಎನ್ನುವ ಪ್ರಶ್ನೆ ಕಾಡಿತ್ತು. ಸಿಬಿಐ ಇದೀಗ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ ಬಾಗಿಲು ತಟ್ಟಿದೆ.
ಸಾಂಕೇತಿಕ ಚತ್ರ
ಸಾಂಕೇತಿಕ ಚತ್ರ

ಮಂಗಳೂರು: ಉಜಿರೆ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ, ಸಿಬಿಐ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ನ್ಯಾಯಾಲಯ ಆದೇಶ ಬಂದು ನಾಲ್ಕು ತಿಂಗಳ ಬಳಿಕ ಸಿಬಿಐ ಹೈಕೋರ್ಟ್ ಮೆಟ್ಟಲೇರಿದ್ದು, ಕರ್ನಾಟಕ ಹೈಕೋರ್ಟಿನಲ್ಲಿ ತೀರ್ಪು ಮರುಪರಿಶೀಲನೆಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಸಂಚಾರ ಸಲಹೆ; ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ, ಕೆಆರ್‌ಪುರ ಅಪ್‌ ರ‍್ಯಾಂಪ್‌ ಬಂದ್‌, 5 ಪರ್ಯಾಯ ಮಾರ್ಗಗಳ ವಿವರ ಹೀಗಿದೆ

ಅತಿ ಕಡಿಮೆ ಶುಲ್ಕದಲ್ಲಿ ಉನ್ನತ ಶಿಕ್ಷಣ; ಬಂಟ್ವಾಳ ಕಾಮಾಜೆ ಸರ್ಕಾರಿ ಕಾಲೇಜು ಉಪನ್ಯಾಸಕಿ ವೇದಶ್ರೀ ಅವರ ವಿಭಿನ್ನ ಪ್ರಚಾರ ಅಭಿಯಾನ

ಬೆಂಗಳೂರು ಕಮಲಾನಗರದ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಒಂದು ವರ್ಷದ ಬಳಿಕ ಸೆರೆ ಸಿಕ್ಕ ಕಳ್ಳ; ಇನ್ನೆರಡು ಅಪರಾಧ ಸುದ್ದಿಗಳು

ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

ಸಿಬಿಐ ನ್ಯಾಯಾಲಯವು ಸಂತೋಷ್‌ ರಾವ್‌ ನಿರಪರಾಧಿ ಎಂದು ಘೋಷಿಸಿದ ಸಂದರ್ಭ ನಿಜವಾದ ಆರೋಪಿಗಳು ಯಾರು ಎನ್ನುವ ಪ್ರಶ್ನೆ ಕಾಡಿತ್ತು. ಈ ಪ್ರಕರಣದ ಮರು ತನಿಖೆ ನಡೆಯಬೇಕು ಎಂಬ ಒತ್ತಾಯ ಬಲವಾಗಿ ಕೇಳಿಬಂದಿತ್ತು. ಸಿಬಿಐ ಇದೀಗ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ ಬಾಗಿಲು ತಟ್ಟಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ತೀರ್ಪು ಮರು ಪರಿಶೀಲನೆಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಸೌಜನ್ಯ ಮೇಲೆ ಅತ್ಯಾಚಾರ ಆರೋಪಿ ಸಂತೋಷ್ ರಾವ್ ವಿರುದ್ದ ಸಿಬಿಐ ಅಧಿಕಾರಿಗಳು ಆರೋಪ ಸಾಬೀತು ಪಡಿಸಲು ವಿಫಲ ಎಂದು ಹೇಳಿದ್ದ ಬೆಂಗಳೂರು ಸಿಬಿಐ ಕೋರ್ಟ್, ಸಂತೋಷ್‌ರಾವ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು.

ಉಜಿರೆ ಕಾಲೇಜಿನ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಅಕ್ಟೋಬರ್ 10, 2012ರಂದು ಧರ್ಮಸ್ಥಳ ಬಳಿಯ ಪಾಂಗಳ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಸುದೀರ್ಘ 11 ವರ್ಷಗಳ ವಿಚಾರಣೆ ಬಳಿಕ ಸಿಬಿಐ ವಿಶೇಷ ಕೋರ್ಟ್ ಕಳೆದ ಜೂನ್ 16ರಂದು ತೀರ್ಪು ನೀಡಿತ್ತು. ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದು, ಆತನನ್ನು ನಿರಾಪರಾಧಿ ಎಂದು ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಸಿಬಿಐಗೆ ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಸಿಬಿಐ ವಿಶೇಷ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನೆ ಮಾಡುವಂತೆ ಮೇಲ್ಮನವಿ ಸಲ್ಲಿಸಲಾಗಿದೆ. ಸಿಬಿಐ ಮೇಲ್ಮನವಿಯಲ್ಲಿ ಸಂತೋಷ್ ರಾವ್ ಅವರೇ ಆರೋಪಿ ಅಂತ ಹೇಳಲಾಗಿದೆ. ಇದರೊಂದಿಗೆ ಸಂತೋಷ್‌ ರಾವ್‌ನೇ ಅರೋಪಿ ಎಂಬ ಬಗ್ಗೆ ಪೂರ್ಣ ಸಾಕ್ಷ್ಯ ನೀಡಲು ವಿಫಲವಾಗಿದ್ದ ಸಿಬಿಐ ಮತ್ತೆ ಆತನನ್ನು ಆರೋಪಿ ಎಂದು ಹೇಗೆ ಸಾಬೀತುಪಡಿಸುತ್ತದೆ ಎಂಬುದು ಕುತೂಹಲಕಾರಿ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದಿತ್ತು. ಅದರ ವಿಚಾರಣೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ನ್ಯಾಯಾಲಯವು ಸಂತೋಷ್ ರಾವ್ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಿಬಿಐ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ತೀರ್ಮಾನಕ್ಕೆ ಬಂದು ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿತ್ತು. 2023ರ ಜುಲೈ 16ರಂದು ನೀಡಿದ ತೀರ್ಪಿನ ವಿರುದ್ಧ ಈಗ ಮೇಲ್ಮನವಿ ಸಲ್ಲಿಸಲಾಗಿದೆ.

ಅವಧಿ ಮುಗಿದ ಮೇಲೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಜುಲೈ 16ರಂದು ಸಂತೋಷ್‌ ರಾವ್‌ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ಈಗ ನಾಲ್ಕು ತಿಂಗಳ ಬಳಿಕ ಮನವಿ ಮಾಡಿರುವುದರಿಂದ ಇದನ್ನು ಹೈಕೋರ್ಟ್‌ ಮಾನ್ಯ ಮಾಡುವುದೇ ಎಂದು ಕಾದು ನೋಡಬೇಕಾಗಿದೆ. ಸಂತೋಷ್‌ ರಾವ್‌ನೇ ನಿಜವಾದ ಆರೋಪಿ ಎಂದು ಸಿಬಿಐ ಮೇಲ್ಮನವಿಯಲ್ಲಿಯೂ ವಾದ ಮಾಡಿದೆ ಮತ್ತು ಮರು ವಿಚಾರಣೆಯ ವೇಳೆ ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒದಗಿಸುವ ಭರವಸೆ ನೀಡಿದೆ ಎನ್ನಲಾಗಿದೆ.

ಮರು ತನಿಖೆ ಕೋರಿದ್ದ ದಾವೆ ವಜಾಗೊಳಿಸಿದ್ದ ಹೈಕೋರ್ಟ್‌

ಹಿಂದೊಮ್ಮೆ ಈ ಪ್ರಕರಣದ ಮರು ತನಿಖೆ ಕೋರಿ ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಆ ಸಂದರ್ಭದಲ್ಲಿ ಅದು ಕೆಲವೊಂದು ಪರ್ಯಾಯ ಮಾರ್ಗಗಳನ್ನು ಸೂಚಿಸಿತ್ತು. ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಪರಿಗಣಿಸಬಹುದಾಗಿದೆ ಎಂದು ಹೇಳಿತ್ತು. ಆದರೆ, ಮನೆಯವರು ಈ ಅವಕಾಶವನ್ನು ಬಳಸಿಕೊಂಡಿರಲಿಲ್ಲ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ