logo
ಕನ್ನಡ ಸುದ್ದಿ  /  ಕರ್ನಾಟಕ  /  ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಂಡ ಕಾಡಾನೆ ಸವಾರಿ, ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ - ವಿಡಿಯೋ ವೈರಲ್‌

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಂಡ ಕಾಡಾನೆ ಸವಾರಿ, ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ - ವಿಡಿಯೋ ವೈರಲ್‌

Umesh Kumar S HT Kannada

Apr 09, 2024 11:51 AM IST

google News

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಂಡ ಕಾಡಾನೆ ಸವಾರಿ ಕಾಣಸಿಕ್ಕಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರಾ ಪಾರಾದ ದೃಶ್ಯ ವಿಡಿಯೋದಲ್ಲಿದೆ.

  • ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಾಡಾನೆ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರನ ವಿಡಿಯೋ ವೈರಲ್‌ ಆಗಿದೆ. ಸೋಮವಾರ (ಏಪ್ರಿಲ್ 8) ಮಧ್ಯಾಹ್ನ ಈ ಘಟನೆ ನಡೆದಿದ್ದು, ಇದರ ವಿವರ ಇಲ್ಲಿದೆ. (ವರದಿ - ಹರೀಶ್ ಮಾಂಬಾಡಿ, ಮಂಗಳೂರು)

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಂಡ ಕಾಡಾನೆ ಸವಾರಿ ಕಾಣಸಿಕ್ಕಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರಾ ಪಾರಾದ ದೃಶ್ಯ ವಿಡಿಯೋದಲ್ಲಿದೆ.
ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲಲ್ಲೇ ಕಂಡ ಕಾಡಾನೆ ಸವಾರಿ ಕಾಣಸಿಕ್ಕಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರಾ ಪಾರಾದ ದೃಶ್ಯ ವಿಡಿಯೋದಲ್ಲಿದೆ.

ಮಂಗಳೂರು: ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಕಳೆದ ಸುಮಾರು ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲೆ ಸಂಚರಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ.

ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ

ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು.ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ.ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರು ಅದನ್ನು ತಿಳಿಯದ ಆತ ಸಂಚಾರ ನಡೆಸಿದ್ದಾನೆ.ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಸಾಕಷ್ಟು ಗಮನಸೆಳೆದಿದ್ದು, ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುವವರನ್ನು ಜಾಗರೂಕರಾಗಿರುವಂತೆ ಎಚ್ಚರಿಸಲಾಗುತ್ತಿದೆ. ಕಾಡಾನೆ ಸಂಚಾರ ಕಂಡುಬಂದಿರುವ ಕಾರಣ, ವಾಹನ ಚಲಾಯಿಸುವಾಗ ಅತ್ಯಂತ ಎಚ್ಚರಿಂದ ದೂರದ ತನಕ ನೋಡಿಕೊಂಡು ಮುಂದುವರಿಯುವಂತೆ ಸೂಚಿಸಲಾಗಿದೆ.

ಕಲ್ಮಂಜದಿಂದ ಚಾರ್ಮಾಡಿಯತ್ತ?

ಶನಿವಾರ ರಾತ್ರಿ ಕಾಡಾನೆ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗೂ ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು ಈ ಸಮಯ ಅದು ನೆರಿಯ ಕಾಡಿನ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.

ಪ್ರಸ್ತುತ ಕಾಡಿನ ಕೆರೆಗಳು ನೇತ್ರಾವತಿ ನದಿ ಸಂಪೂರ್ಣ ಒಣಗಿದ್ದು ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ,ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

(ವರದಿ - ಹರೀಶ್ ಮಾಂಬಾಡಿ, ಮಂಗಳೂರು)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

ಓದಬಹುದಾದ ಇನ್ನಷ್ಟು ಸ್ಟೋರಿಗಳು

1) ಡಾಲಿ ಧನಂಜಯ್‌ ಹೊಸ ಸಿನಿಮಾಕ್ಕೆ ಪರಮೇಶ್ವರ್ ಗುಂಡ್ಕಲ್ ನಿರ್ದೇಶನ; ಕೋಟಿ ಸಿನಿಮಾದ ಟೈಟಲ್‌ ಬಿಡುಗಡೆ - ಇಲ್ಲಿದೆ ವಿವರ

2) ಬೆಂಗಳೂರು ಕೊಚುವೇಲಿ ನಡುವೆ ವಿಶೇಷ ಸಾಪ್ತಾಹಿಕ ರೈಲು ಸೇವೆ; ಯುಗಾದಿ, ಬೇಸಿಗೆ ರಜೆ ನಿಮಿತ್ತ ಹಲವು ಸ್ಪೆಷಲ್ ರೈಲುಗಳು - ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ

3) ಲೋಕಸಭಾ ಚುನಾವಣೆ; ಸೊಂಟದಲ್ಲಿ ಗನ್‌ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ರಿಯಾಜ್‌, ಗನ್ ಇಟ್ಟುಕೊಳ್ಳಲು ವಿಶೇಷ ಅನುಮತಿ- ವಿವರ ವರದಿ ಇಲ್ಲಿದೆ

4) ಪಂದ್ಯದ ಮೊದಲ ಎಸೆತದಲ್ಲೇ ಔಟಾಗಿ ಕಳಪೆ ದಾಖಲೆಗೆ ಕಾರಣರಾದ ಫಿಲ್ ಸಾಲ್ಟ್; ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ರೆಕಾರ್ಡ್ - ವಿವರ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

5) ಜಾತಕ ದೋಷ ಸರಿಪಡಿಸಲು ದೇಗುಲದಲ್ಲಿ ಉರುಳು ಸೇವೆ, ನೆಲದಲ್ಲಿ ಆಹಾರ ಸೇವನೆ; ಗೌತಮ್‌ ದಿವಾನ್‌ ಕಷ್ಟನೋಡಿ ಭೂಮಿಕಾ ಕಣ್ಣೀರಧಾರೆ - ಮುಂದೇನು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ