logo
ಕನ್ನಡ ಸುದ್ದಿ  /  Karnataka  /  Manipal University 'Terrorist Row': Prof Debarred From Teaching Pending Inquiry

Manipal University Terrorist Row: ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದ ಮಣಿಪಾಲ ವಿವಿಯ ಪ್ರೊಫೆಸರ್‌ ಅಮಾನತು

HT Kannada Desk HT Kannada

Nov 28, 2022 08:05 PM IST

ಕರಾವಳಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್‌

    • Manipal University Terrorist Row: ತನ್ನನ್ನು ಭಯೋತ್ಪಾದಕ ಎಂದ ಪ್ರೊಫೆಸರ್‌ನನ್ನು ವಿದ್ಯಾರ್ಥಿಯು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ ಆದ ಬಳಿಕ ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು ಕ್ರಮಕೈಗೊಂಡಿದೆ.
ಕರಾವಳಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್‌
ಕರಾವಳಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್‌

ಬೆಂಗಳೂರು: ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದ ಉಡುಪಿ ಜಿಲ್ಲೆಯಲ್ಲಿರುವ ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರೊಫೆಸರ್‌ನನ್ನು ಅಮಾನತು ಮಾಡಲಾಗಿದೆ. ತನ್ನನ್ನು ಭಯೋತ್ಪಾದಕ ಎಂದ ಪ್ರೊಫೆಸರ್‌ನನ್ನು ವಿದ್ಯಾರ್ಥಿಯು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ ಆದ ಬಳಿಕ ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು ಈ ಕ್ರಮಕೈಗೊಂಡಿದೆ.

ಟ್ರೆಂಡಿಂಗ್​ ಸುದ್ದಿ

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

Indian Railways:ಬೆಳಗಾವಿ-ಭದ್ರಾಚಲಂ, ಅರಸಿಕೆರೆ-ಹೈದ್ರಾಬಾದ್‌ ರೈಲು ರದ್ದು, ವಂದೇಭಾರತ್‌ ರೈಲು ಮಾರ್ಗ ಬದಲಾವಣೆ

Tumkur News: ತುಮಕೂರು ಹರಳೂರಿನ ಐತಿಹಾಸಿಕ ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ

Hassan Scandal: ಬಂಧನ ಭೀತಿ, ಜಾಮೀನಿಗಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಎಚ್‌ಡಿ ರೇವಣ್ಣ

ಕರ್ನಾಟಕದ ಕರಾವಳಿಯ ಈ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರೊಫೆಸರ್‌ ವರ್ತನೆಗೆ ಸಾಕಷ್ಟು ಟೀಕೆಗಳು ಬಂದಿದ್ದವು. ಇದೀಗ, "ಪ್ರೊಫೆಸರ್‌ ಅವರನ್ನು ಯಾವುದೇ ತರಗತಿಗೆ ಹಾಜರಾಗದಂತೆ ಅಮಾನತು ಮಾಡಲಾಗಿದೆ. ಈ ಘಟನೆಯ ಕುರಿತು ತನಿಖೆ ಮಾಡಲು ಆಂತರಿಕ ತನಿಖಾ ತಂಡ ರಚಿಸಲಾಗಿದೆʼʼ ಎಂದು ಎಂಐಟಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಘಟನೆ ನಡೆದ ಸಂದರ್ಭದಲ್ಲಿ ವಿದ್ಯಾರ್ಥಿಯು ತರಾಟೆಗೆ ತೆಗೆದುಕೊಂಡ ತಕ್ಷಣ ಪ್ರೊಫೆಸರ್‌ ಕ್ಷಮೆ ಯಾಚಿಸಿದ್ದರು. ವಿದ್ಯಾರ್ಥಿಯ ಹೆಸರು ಕಸಬ್‌ ಹೆಸರಿಗೆ ಹೋಲಿಕೆಯಾಗುವಂತೆ ಪ್ರೊಫೆಸರ್‌ ಹೇಳಿದ್ದರು. ವಿದ್ಯಾರ್ಥಿಯು ಆಕ್ರೋಶಗೊಂಡ ವಿಡಿಯೋ ಸಾಕಷ್ಟು ವೈರಲ್‌ ಆಗಿದೆ.

ಇದರಿಂದ ಕೋಪಗೊಂಡ ಆ ವಿದ್ಯಾರ್ಥಿಯು ಆ ಪ್ರೊಫೆಸರ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಈ ವಿಡಿಯೋದಲ್ಲಿರುವ ದೃಶ್ಯದಲ್ಲಿಯೇ ಪ್ರೊಫೆಸರ್‌ ಕ್ಷಮಾಪಣೆಯನ್ನೂ ಕೇಳಿದ್ದಾರೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ವಿಡಿಯೋದಲ್ಲಿ ತರಗತಿ ಕೊಠಡಿಯಲ್ಲಿರುವ ವಿದ್ಯಾರ್ಥಿಯು "ನೀವು ಹೇಗೆ ಇಂತಹ ಹೇಳಿಕೆ ನೀಡುತ್ತೀರಿ?ʼʼ ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಆ ಪ್ರೊಫೆಸರ್‌ "ನಾನು ತಮಾಷೆಗಾಗಿ ಹೇಳಿದೆʼʼ ಎನ್ನುತ್ತಾರೆ. ಆ ವಿದ್ಯಾರ್ಥಿಯು ಆ ಚರ್ಚೆಯನ್ನು ಇನ್ನಷ್ಟು ವಿಸ್ತರಿಸುತ್ತಾನೆ. "26/11 ಘಟನೆಯು ತಮಾಷೆಯಲ್ಲ. ಮುಸ್ಲಿಂ ಆಗಿ ನಾವು ಈ ದೇಶದಲ್ಲಿ ಇಂತಹ ವಿಷಯಗಳನ್ನು ಎದುರಿಸುವುದು ತಮಾಷೆಯಲ್ಲʼʼ ಎಂದು ಹೇಳುತ್ತಾನೆ.

ವಿದ್ಯಾರ್ಥಿಯ ಮಾತಿನಿಂದ ವಿಚಲಿತರಾದ ಪ್ರೊಫೆಸರ್‌ ಆತನಲ್ಲಿ ಕ್ಷಮಾಪಣೆ ಕೇಳಿ, ನೀನು ನನ್ನ ಮಗನಂತೆ ಎಂದು ಹೇಳುತ್ತಾರೆ. "ನೀವು ನಿಮ್ಮ ಮಗನನ್ನು ಹೀಗೆ ಟ್ರೀಟ್‌ ಮಾಡುವಿರಾ? ಆತನಿಗೆ ಟೆರರಿಸ್ಟ್‌ ಎಂಬ ಹಣೆಪಟ್ಟಿ ಹಚ್ಚುವಿರಾ? ಈ ತರಗತಿಯಲ್ಲಿ ಎಲ್ಲರ ಮುಂದೆ ನಿಮ್ಮ ಮಗನನ್ನು ಈ ರೀತಿ ಕರೆಯುವಿರಾ? ಕ್ಷಮಾಪಣೆ ಕೇಳಿದರೆ ಸಾಲದು, ನಿಮ್ಮೊಳಗಿರುವ ಇಂತಹ ಮನಸ್ಥಿತಿ ಬದಲಾಗದುʼʼ ಎಂದು ಆ ವಿದ್ಯಾರ್ಥಿ ಆಕ್ರೋಶ ವ್ಯಕ್ತಪಡಿಸಿರುವುದು ವಿಡಿಯೋದಲ್ಲಿ ಕಾಣಬಹುದು.

ಬಳಿಕ ಆ ಪ್ರೊಫೆಸರ್‌ ಆ ವಿದ್ಯಾರ್ಥಿಯ ಬಳಿಯಲ್ಲಿ ವೈಯಕ್ತಿಕವಾಗಿಯೂ ಕ್ಷಮಾಪಣೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿದ್ಯಾರ್ಥಿ ಮತ್ತು ಪ್ರೊಫೆಸರ್‌ ಮಾತುಕತೆಯ ಮೂಲಕ ಈ ವಿವಾದವನ್ನು ಬಗೆಹರಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಬಳಿಕ ಈ ವಿಡಿಯೋ ವೈರಲ್‌ ಆಗಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಮಣಿಪಾಲ ವಿವಿಯು ಪ್ರೊಫೆಸರ್‌ ಅವರನ್ನು ಅಮಾನತುಗೊಳಿಸಿ ತನಿಖಾ ಸಮಿತಿ ರಚಿಸಿದೆ.

ಆದರೆ, ಈ ಸಂದರ್ಭದ ವಿಡಿಯೋ ಮಾತ್ರ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗುತ್ತಿದೆ. ಮುಸ್ಲಿಂ ಸಮುದಾಯದ ಮೇಲೆ ಇಂತಹ ಪೂರ್ವಾಗ್ರಹ ಬೇಡ ಎಂದು ಟ್ವಿಟ್ಟರ್‌ನಲ್ಲಿ ವಿಡಿಯೋಗೆ ಸಾಕಷ್ಟು ಜನರು ಕಾಮೆಂಟ್‌ ಮಾಡಿದ್ದಾರೆ. ಯುನೆಸ್ಕೊದ ಚೇರ್ಮನ್‌ ಆಗಿರುವ (ವಿಶ್ವಸಂಸ್ಥೆಯ ಶೈಕ್ಷಣಿಜ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಶೋಕ್‌ ಸಾವಿನ್‌ ಅವರು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. "ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆಯಲಾಗುತ್ತಿದೆ. ಇದು ಭಾರತದಲ್ಲಿ ಅಲ್ಪಾಸಂಖ್ಯಾತರ ಸ್ಥಿತಿʼʼ ಎಂದು ಅವರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಆ ವಿದ್ಯಾರ್ಥಿಯು ಧೈರ್ಯದಿಂದ ಪ್ರೊಫೆಸರ್‌ ಎದುರು ಆ ರೀತಿ ಮಾತನಾಡಿರುವುದು, ಸ್ಪಷ್ಟವಾಗಿ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಸಾಕಷ್ಟು ಶ್ಲಾಘನೆ ವ್ಯಕ್ತವಾಗಿದೆ.

ಇದೇ ರೀತಿ ಭಾರತದಲ್ಲಿ ಆಗುತ್ತದೆ ಎಂದು ಮಹಮ್ಮದ್‌ ಝುಬೈರ್‌ ಎನ್ನುವ ಟ್ವಿಟ್ಟರ್‌ ಬಳಕೆದಾರರು ಆ ವಿಡಿಯೋಗೆ ಕಾಮೆಂಟ್‌ ಮಾಡಿದ್ದಾರೆ. "ಇದೇ ರೀತಿ ಘಟನೆ ಈ ಹಿಂದೆಯೂ ನಡೆದಿದೆ. ವಿದ್ಯಾರ್ಥಿಯ ಹೆಸರು ಕೇಳಿದಾಗ ಆ ವಿದ್ಯಾರ್ಥಿಯು ತನ್ನ ಹೆಸರು ಹೇಳುತ್ತಾನೆ. ಓ ನೀನು ಕಸಬ್‌ ಕಡೆಯವನಾ? ಎಂದು ಆ ಪ್ರೊಫೆಸರ್‌ ಕೇಳಿದ್ದಾರೆ. ಯುನಿವರ್ಸಿಟಿ ಮತ್ತು ಆ ಘಟನೆಯ ಕುರಿತು ಮಾಹಿತಿಯನ್ನು ಆ ವಿದ್ಯಾರ್ಥಿಯ ವಿನಂತಿ ಮೇರೆಗೆ ಹೇಳುತ್ತಿಲ್ಲʼʼ ಎಂದು ಅವರು ಕಾಮೆಂಟ್‌ ಮಾಡಿದ್ದಾರೆ.

ಈ ವಿದ್ಯಾರ್ಥಿಯು ಪ್ರೊಫೆಸರ್‌ ವಿರುದ್ಧ ಧ್ವನಿಯೆತ್ತಿರುವ ರೀತಿಗೆ ಸಾಕಷ್ಟು ಜನರು ಟ್ವಿಟ್ಟರ್‌ನಲ್ಲಿ ಕಾಮೆಂಟ್‌ ಮಾಡಿದ್ದಾರೆ. "ಆತ ಈ ಸಂದರ್ಭವನ್ನು ಎದುರಿಸಿದ ರೀತಿ ಅತ್ಯುತ್ತಮವಾಗಿದೆ. ಈ ರೀತಿ ತಕ್ಷಣ ತಿಳಿಸಿದರೆ ಇಂತಹ ಘಟನೆ ನಡೆಯದು. ಈ ವಿದ್ಯಾರ್ಥಿಯು ಇಂತಹ ಶೋಷಣೆ ಅನುಭವಿಸುವವರಿಗೆ ಮಾದರಿʼʼ ಎಂದು ಸಾಕಷ್ಟು ಜನರು ಕಾಮೆಂಟ್‌ ಮಾಡಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು