logo
ಕನ್ನಡ ಸುದ್ದಿ  /  Karnataka  /  Meeting With Various Departments For Traffic Management In Bbmp

Bengaluru: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ವಿವಿಧ ಇಲಾಖೆಗಳ ಜತೆ ಸಮನ್ವಯ ಸಭೆ

HT Kannada Desk HT Kannada

Sep 29, 2022 07:57 PM IST

ಸಮನ್ವಯ ಸಭೆ

    • ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಗೂ ಜಂಕ್ಷನ್‌ಗಳಲ್ಲಿರುವ ಮರಗಳ ಕೊಂಬೆಗಳು ರಸ್ತೆ ಭಾಗಕ್ಕೆ ಬಂದಿವೆ. ಅದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ಮರದ ಕೊಂಬೆಗಳನ್ನು ಕಟಾವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಯ್ತು.
ಸಮನ್ವಯ ಸಭೆ
ಸಮನ್ವಯ ಸಭೆ

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ವಿಭಾಗದಿಂದ ಗುರುತಿಸಿದ್ದ ರಸ್ತೆಗುಂಡಿಗಳ ಪೈಕಿ ಬಾಕಿ 1,051 ರಸ್ತೆಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪಾಲಿಕೆ ವತಿಯಿಂದ ತ್ವರಿತವಾಗಿ ರಸ್ತೆಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಆಡಳಿತಗಾರರಾದ ರಾಕೇಶ್ ಸಿಂಗ್ ಸೂಚನೆ ನೀಡಿದರು.

ಟ್ರೆಂಡಿಂಗ್​ ಸುದ್ದಿ

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Hassan Scandal; ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ, ಫೇಸ್‌ಬುಕ್ ಪೋಸ್ಟಲ್ಲಿ ವಾಸು ಎಚ್‌ವಿ ಕಳವಳ

Bengaluru Rains: ದಾಖಲೆಯ ಬಿಸಿ ಕಂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ರಣ ಬಿಸಿಲಿಗೆ ಬೆಂದ ಜನ ಫುಲ್ ಖುಷ್

NEP ಅಥವಾ SEP: ಪದವಿ ಕೋರ್ಸ್ ಪ್ರವೇಶ ಗೊಂದಲ ರಾಜ್ಯವ್ಯಾಪಿ; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿದ್ಯಾರ್ಥಿಗಳ ಹಪಾಹಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ಇಲಾಖೆಯಿಂದ 4,545 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1,051 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ. ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪಾಲಿಕೆ ವತಿಯಿಂದ ಕೂಡಲೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚನೆ ನೀಡಿದರು.

ನಗರದಲ್ಲಿ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಮನ್ವಯ ಸಭೆಗೆ ವಿವಿಧ ಇಲಾಖೆಗಳು ಹಾಜರಾಗುತ್ತಿದ್ದು, ಮುಂದಿನ ಸಭೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB)ಯ ಅಧಿಕಾರಿಗಳನ್ನು ಆಹ್ವಾನಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ 8 ಜಂಕ್ಷನ್(ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್, ಎಂ.ಎಂ.ಟೆಂಪಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಸಾರಕ್ಕಿ ಜಂಕ್ಷನ್, ಕೆ.ಎಸ್.ಲೇಔಟ್ ಜಂಕ್ಷನ್, ಬನಶಂಕರಿ ಜಂಕ್ಷನ್)ಗಳಲ್ಲಿ ಬಾಕಿ ಇರುವ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಲಮಂಡಳಿ ಇಲಾಖೆಯಿಂದ ಕಾಮಗಾರಿ ನಡೆಸುವ ಸ್ಥಳದಲ್ಲಿ ಪೈಪ್‌ಗಳನ್ನು ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿಯೇ ಹಾಕಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಆಗಲಿದ್ದು, ಜಲಮಂಡಳಿ ಇಲಾಖೆಯ ಅಧಿಕಾರಿಗಳಿಗೆ ರಸ್ತೆ ಅಥವಾ ಪಾದಚಾರಿ ಮಾರ್ಗಗಳಲ್ಲಿ ಪೈಪ್‌ಗಳನ್ನು ಹಾಕದಂತೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಚಾರಿ ಪೊಲೀಸ್ ಇಲಾಖೆ ವತಿಯಿಂದ ಪ್ರಮುಖ ರಸ್ತೆಗಳಲ್ಲಿ ಪೆಟ್ಟಿ ಶಾಪ್‌ಗಳಿರುವುದು ಹಾಗೂ ರಸ್ತೆ ಬದಿ ಕಟ್ಟಡ ಭಗ್ನಾವಶೇಷಗಳನ್ನು ಹಾಕುವುದರ ಪಟ್ಟಿಯಿದ್ದು, ಅದರನುಸಾರ ಎಲ್ಲೆಲ್ಲಿ ಪೆಟ್ಟಿ ಶಾಪ್‌ಗಳು ಹಾಗೂ ಕಟ್ಟಡ ಭಗ್ನಾವಶೇಷಗಳಿವೆಯೋ, ಅವುಗಳನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.

ಮರದ ಕೊಂಬೆಗಳನ್ನು ಕಟಾವು ಮಾಡಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಗೂ ಜಂಕ್ಷನ್‌ಗಳಲ್ಲಿರುವ ಮರಗಳ ಕೊಂಬೆಗಳು ರಸ್ತೆ ಭಾಗಕ್ಕೆ ಬಂದಿವೆ. ಅದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಅಲ್ಲದೆ ಬೀದಿ ದೀಪಗಳಿಗೂ ಮರದ ಕೊಂಬೆಗಳು ಅಡ್ಡಿಯಾಗಿರುತ್ತವೆ. ಆದ್ದರಿಂದ ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ಮರದ ಕೊಂಬೆಗಳನ್ನು ಕಟಾವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

50 ಜಂಕ್ಷನ್‌ಗಳಲ್ಲಿ ಮಾರ್ಕಿಂಗ್

ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯು ನಗರದ ಪ್ರಮುಖ 50 ಜಂಕ್ಷನ್‌ಗಳಲ್ಲಿ ಪಾದಚಾರಿ ಕ್ರಾಸಿಂಗ್ ಮಾಡುವ ಹಾಗೂ ವಾಹನಗಳ ನಿಲುಗಡೆ ಲೈನ್ ಮಾರ್ಕಿಂಗ್ ಮಾಡಲು ನೀಡಿದ್ದ ಪಟ್ಟಿಯ ಅನುಸಾರ ಈಗಾಗಲೇ 35 ಜಂಕ್ಷನ್‌ಗಳಲ್ಲಿ ಮಾರ್ಕಿಂಗ್ ಪೂರ್ಣಗೊಳಿಸಿದೆ. 7 ಜಂಕ್ಷನ್‌ಗಳಲ್ಲಿ ಕೆಲಸ ಪ್ರಗತಿಯಲ್ಲಿದೆ. ಉಳಿದ 8 ಜಂಕ್ಷನ್‌ಗಳಲ್ಲಿ ಕೆಲಸ ಪ್ರಾರಂಭಿಸಬೇಕಿದ್ದು, ತ್ವರಿತವಾಗಿ ಮಾರ್ಕಿಂಗ್ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಹಂಚಿಕೊಳ್ಳಲು ಲೇಖನಗಳು