Halappa Achar: ವಿಕಲಚೇತನರ ಸಮಸ್ಯೆಗಳಿಗೆ ಸಕಾರಾತ್ಮಕ ಸ್ಪಂದನೆ; ಸಚಿವ ಹಾಲಪ್ಪ ಆಚಾರ್ ಭರವಸೆ
Dec 20, 2022 06:47 PM IST
ಮನವಿ ಸ್ವೀಕರಿಸಿದ ಸಚಿವರು
- ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, "ಇಂದು ಬೆಳಗಾವಿ ಸುವರ್ಣಸೌಧದ ಬಳಿ ಸಾಂಕೇತಿಕ ಧರಣಿಯಲ್ಲಿ ತೊಡಗಿದ್ದ ನವಕರ್ನಾಟಕ MRW/VRW/URW ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಸದಸ್ಯರನ್ನು ಭೇಟಿಯಾಗಿ ಮನವಿ ಸ್ವೀಕರಿಸಲಾಯಿತು. ಅವರ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಲಾಯಿತು", ಎಂದು ಹೇಳಿದ್ದಾರೆ.
ಬೆಳಗಾವಿ: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ವಿಕಲಚೇತನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲೂ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಚಿವರಾದ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.
ಇಂದು ಬೆಳಗಾವಿ ಸುವರ್ಣಸೌಧದ ಬಳಿ ಸಾಂಕೇತಿಕ ಧರಣಿಯಲ್ಲಿ ತೊಡಗಿದ್ದ ನವಕರ್ನಾಟಕ MRW/VRW/URW ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಕಾರ್ಯಕರ್ತರನ್ನು ಭೇಟಿಯಾಗಿ ಮನವಿ ಸ್ವೀಕರಿಸಿ ಮಾತನಾಡಿದರು. ಕಳೆದ ಒಂದು ವರ್ಷದಿಂದ ವಿಕಲಚೇತನರ ಸಚಿವರಾಗಿ ಹಲವಾರು ಬಾರಿ ಸಂಘಟನೆಯ ಕಾರ್ಯಕರ್ತರನ್ನು ಭೇಟಿ ಮಾಡಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ವಿಕಲಚೇತನರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದೆ. ಕಳೆದ ಬಾರಿ ನಿಮ್ಮ ಮನವಿಯನ್ನು ಸ್ವೀಕರಿಸಿದ ನಂತರ ಈಗಾಗಲೇ ಶೇಕಡಾ 30ರಷ್ಟು ಗೌರವಧನವನ್ನು ಹೆಚ್ಚಿಸಿದ್ದೇವೆ ಎಂದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, "ಇಂದು ಬೆಳಗಾವಿ ಸುವರ್ಣಸೌಧದ ಬಳಿ ಸಾಂಕೇತಿಕ ಧರಣಿಯಲ್ಲಿ ತೊಡಗಿದ್ದ ನವಕರ್ನಾಟಕ MRW/VRW/URW ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಸದಸ್ಯರನ್ನು ಭೇಟಿಯಾಗಿ ಮನವಿ ಸ್ವೀಕರಿಸಲಾಯಿತು. ಅವರ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಲಾಯಿತು", ಎಂದು ಬರೆದುಕೊಂಡಿದ್ದಾರೆ.
ಇದೇ ರೀತಿ ಇತ್ತೀಚಿಗೆ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಾವಾಗಿಯೇ ವಿಕಲಚೇತನರಿಗಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಗಳಲ್ಲಿ ಶೇಕಡಾ 3ರಷ್ಟು ಮೀಸಲಾತಿಯನ್ನು ಘೋಷಿಸಿದ್ದಾರೆ. ಇದರೊಂದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ನಮ್ಮ ಸರ್ಕಾರ ವಿಕಲಚೇತನರ ಅಭಿವೃದ್ದಿಗಾಗಿ ವಿಶೇಷ ಕಾಳಜಿಯನ್ನು ಹೊಂದಿದೆ ಎನ್ನುವುದನ್ನು ತೋರಿಸಿದ್ದಾರೆ ಎಂದು ಹೇಳಿದರು.
ಇಂದು ನಿಮ್ಮ ಬೇಡಿಕೆಗಳನ್ನು ಆಲಿಸಿದ್ದು, ಸಿಎಂ ಜತೆಗೆ ಚರ್ಚಿಸಿ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ಭರವಸೆ ನೀಡಿದರು.
ಗಮನಿಸಬಹುದಾದ ಇತರೆ ಸುದ್ದಿಗಳು
ಮರಾಠಿಗರಿಗೆ 2 ಎ ಮೀಸಲಾತಿ ಬೇಡಿಕೆ; ರಾಜಕೀಯ ಮರುಜನ್ಮನೀಡಿದವರಿಗೆ ಇಷ್ಟು ಮಾಡದಿದ್ದರೆ ಹೇಗೆ ಎಂದ ಲಕ್ಷ್ಮಿ
ವಿಧಾನಮಂಡಲ ಅಧಿವೇಶನ ಪ್ರಗತಿಯಲ್ಲಿದೆ. ವಿವಿಧ ಸಂಘಟನೆಗಳ ಪ್ರತಿಭಟನೆಯೂ ಬೆಳಗಾವಿ ವಿಧಾನಸೌಧ ಸಮೀಪ ಮುಂದುವರಿದಿದೆ. ಈ ಪ್ರತಿಭಟನೆಗಳ ಪೈಕಿ, ಮರಾಠರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅವರನ್ನು ಓಲೈಸಲು ಪ್ರಯತ್ನಿಸಿದ್ದು ಗಮನಸೆಳೆಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಳೆಯ ಪಿಂಚಣಿ ವ್ಯವಸ್ಥೇನಾ ಅಥವಾ ಹೊಸತಾ?; ಸಮಾಲೋಚಿಸಿ ತೀರ್ಮಾನಿಸೋಣ ಎಂದ ಮುಖ್ಯಮಂತ್ರಿ
ಸರ್ಕಾರಿ ನೌಕರರ ನೂತನ ಪಿಂಚಣಿ ವ್ಯವಸ್ಥೆಯ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆ ನಡೆಸಿ ನಂತರ ಈ ಬಗ್ಗೆ ತೀರ್ಮಾನ ಮಾಡೋಣ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಗೆ ವಿಧಾನಸಭೆ ಒಪ್ಪಿದೆ. ನೂತನ ಪಿಂಚಣಿ ವ್ಯವಸ್ಥೆ ಕುರಿತಾದ ತನ್ನ ನಿಲುವನ್ನು ನಾಳೆ ತಪ್ಪಿದರೆ ನಾಡಿದ್ದು ಸರ್ಕಾರವು ಸದನದಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ