logo
ಕನ್ನಡ ಸುದ್ದಿ  /  ಕರ್ನಾಟಕ  /  Mandya News: ಕೌಟುಂಬಿಕ ಕಲಹಕ್ಕೆ ಮಂಡ್ಯದಲ್ಲಿ ನಾಲ್ವರು ಬಲಿ: ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Mandya News: ಕೌಟುಂಬಿಕ ಕಲಹಕ್ಕೆ ಮಂಡ್ಯದಲ್ಲಿ ನಾಲ್ವರು ಬಲಿ: ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

HT Kannada Desk HT Kannada

Dec 02, 2022 07:19 PM IST

ಸಾಂದರ್ಭಿಕ ಚಿತ್ರ

    • ಮಂಡ್ಯದ ಮದ್ದೂರು ಪಟ್ಟಣದಲ್ಲಿ ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ತನ್ನ ಮೂವರು ಮಕ್ಕಳಿಗೆ ವಿಷವುಣಿಸಿದ ಹೆತ್ತಮ್ಮ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮದ್ದೂರು (ಮಂಡ್ಯ): ಮಂಡ್ಯದ ಮದ್ದೂರು ಪಟ್ಟಣದಲ್ಲಿ ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ತನ್ನ ಮೂವರು ಮಕ್ಕಳಿಗೆ ವಿಷವುಣಿಸಿದ ಹೆತ್ತಮ್ಮ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಮೃತರನ್ನು ಮದ್ದೂರಿನ ಹೊಳೆಬೀದಿ ನಿವಾಸಿಯಾದ ಉಸ್ಮಾ ಕೌಸರ್(32), ಆಕೆಯ ಪುತ್ರ ಹಾರಿಸ್​ (8), ಪುತ್ರಿಯರಾದ ಅಲಿಜಾ (4) ಮತ್ತು ಅನಮ್ ಫಾತಿಮಾ (2) ಎಂದು ಗುರುತಿಸಲಾಗಿದೆ. ಅಖಿಲ್​ ಅಹಮ್ಮದ್​ ಪತ್ನಿ ಮತ್ತು ಮಕ್ಕಳೊಂದಿಗೆ ಹೊಳೆಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಅಖಿಲ್​ ಅಹಮ್ಮದ್ ಚನ್ನಪಟ್ಟಣದ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದು, ಉಸ್ಮಾ ಕೌಸರ್ ಪಟ್ಟಣದ ಖಾಸಗಿ ನರ್ಸಿಂಗ್​ ಹೋಂನಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿನಿಂದ ಇವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಪದೇ ಪದೇ ಜಗಳ ನಡೆಯುತ್ತಿತ್ತು. ಉಸ್ಮಾ ಕೌಸರ್ ಕೆಲಸ ಕೂಡ ಬಿಟ್ಟಿದ್ದರು.

ಎರಡೂ ಕುಟುಂಬದವರು ಮಾತುಕತೆ ನಡೆಸಿ ದಂಪತಿ ನಡುವಿನ ಮನಸ್ತಾಪವನ್ನು ಪರಿಹರಿಸಿ ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಇದು ಸಫಲವಾಗಿಲ್ಲ. ಮೂವರು ಮಕ್ಕಳಲ್ಲಿ ಹಾರಿಸ್​ ಮಾತ್ರ 2ನೇ ತರಗತಿ ಓದುತ್ತಿದ್ದನು. ಮೊನ್ನೆ ಮಂಗಳವಾದ ಹಾಗೂ ಬುಧವಾರ ಉಸ್ಮಾ ಕೌಸರ್ ಮಗ ಓದುತ್ತಿದ್ದ ಶಾಲೆಗೆ ಹೋಗಿ ಹಾರಿಸ್​ನನ್ನು ಬೇಗನೇ ಮನೆಗೆ ಕರೆ ತರಲು ಪ್ರಯತ್ನಸಿದ್ದರು.

ಆದರೆ ಗುರುವಾರ ಮಗನನ್ನು ಶಾಲೆಗೆ ಕಳುಹಿಸದ ಉಸ್ಮಾ ಕೌಸರ್ ಪತಿಯಿಲ್ಲದ ಸಮಯದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗಮನಿಸಬಹುದಾದ ಇತರೆ ಸುದ್ದಿಗಳು

ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ: ಅಷ್ಟಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ವಿಡಿಯೋ

ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ವಿಚಾರಣೆ ಹಂತದಲ್ಲಿರುವ ಈ ವೇಳೆ ಬೆಳಗಾವಿಯಲ್ಲಿ ನಡೆದ ಘಟನೆಯೊಂದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಗೆ ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಥಳಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

'ಬಿಜೆಪಿ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ' - ಬೆಳಗಾವಿ ಘಟನೆಗೆ ಹೆಚ್​ಡಿಕೆ ಖಂಡನೆ

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ. ಹೆಚ್ಚಿನ ಓದಿಗೆ ಇಲ್ಲಿ ಕ್ಲಿಕ್ಕಿಸಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ